Asianet Suvarna News Asianet Suvarna News

ಟಾಸ್ಕ್ ಫೋರ್ಟ್‌ ತಂಡದಿಂದ ಸಿಎಂಗೆ ವರದಿ: ಲಾಕ್‌ಡೌನ್ ತೆರವು ಮಾಡ್ಬೇಕಾ? ಬೇಡ್ವಾ?

ದೇಶದಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಮತ್ತೊಂದೆಡೆ ಲಾಕ್‌ ಡೌನ್ ತಲೆಬಿಸಿಯಾಗಿದೆ. ಏಪ್ರಿಲ್ 14ರ ಬಳಿಕ ಲಾಕ್‌ಡೌನ್ ತೆರವುಗೊಳಿಸಬೇಕೋ ಬೇಡವೋ ಎನ್ನುವ ಬಗ್ಗೆ ಸಿಎಂ ಚಿಂತನೆ ನಡೆಸಿದ್ದಾರೆ. ಇದರ ಮಧ್ಯೆ ಬಿಎಸ್‌ವೈಗೆ ಟಾಸ್ಕ್ ಫೋರ್ಟ್ ತಂಡ ವರದಿಯೊಂದನ್ನು ನೀಡಿದೆ. ಆ ವರದಿ ಮುಖ್ಯಾಂಶಗಳು ಈ ಕೆಳಗಿನಂತಿವೆ.

task force submits report To CM BSY regarding Corona lockdown in Karnataka
Author
Bengaluru, First Published Apr 8, 2020, 9:06 PM IST

ಬೆಂಗಳೂರು, (ಏ.08): ಕ್ರೂರಿ ಕೊರೋನಾ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ರಣಕೇಕೆ ಹಾಕುತ್ತಿದೆ. ಮತ್ತೊಂದೆಡೆ ಲಾಕ್‌ಡೌನ್‌ನಿಂದ ಸಣ್ಣ ಮತ್ತು ಬೀದಿ ವ್ಯಾಪಾರಿಗಳ ಪರಿಸ್ಥಿತಿ ಹೇಳತೀರಾಗಿದೆ. 

ಇದರಿಂದ ಏಪ್ರಿಲ್ 14 ರ ನಂತರ ಲಾಕ್‌ಡೌನ್ ಸಡಿಲ ಮಾಡಬೇಕಾ ಅಥವಾ ಮುಂದುವರಿಸಬೇಕಾ ಎನ್ನುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇನ್ನು ಈ ಬಗ್ಗೆ ಟಾಸ್ಕ್ ಫೋರ್ಟ್ ತಂಡ ವರದಿ ನೀಡಿದೆ.

ಬದುಕು ಇಷ್ಟೊಂದು ಸರಳವಾ? ಲಾಕ್‌ಡೌನ್‌ ಜ್ಞಾನೋದಯ

 ಡಾ. ದೇವಿ ಶೆಟ್ಟಿ ಅಧ್ಯಕ್ಷತೆಯ ತಜ್ಞರ ಸಮಿತಿಯು ಲಾಕ್‌ಡೌನ್ ಸಡಿಲಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಇಂದು (ಬುಧವಾರ) ತನ್ನ ವರದಿಯನ್ನು ಸಲ್ಲಿಸಿದೆ. 

ಈ ಸಮಿತಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ್, ರಾಜೀವ್ ಗಾಂಧಿ ಆಸ್ಪತ್ರೆಯ ಡಾ. ನಾಗರಾಜ್, ಡಾ. ರವಿ ಹಾಗೂ ಡಾ. ಸುದರ್ಶನ್ ಅವರು ಇದ್ದರು.

ಸಮಿತಿಯು ಲಾಕ್ ಡೌನ್ ಅನ್ನು ಹಂತ ಹಂತವಾಗಿ ಹೇಗೆ ಸಡಿಲಗೊಳಿಸುವುದು ಎಂಬ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ವರದಿ ಸಲ್ಲಿಸಿದ್ದು, ಸಮಿತಿಯು ಮುಂದಿನ 15 ದಿನಗಳ ಅವಧಿಗೆ ಈ ಶಿಫಾರಸುಗಳನ್ನು ಮಾಡಿದೆ.

ಮುಂದಿನ ಆರು ತಿಂಗಳವರೆಗೆ ಹೆಚ್ಚಿನ ಎಚ್ಚರ ವಹಿಸಬೇಕಾಗಿದೆ. ಹಾಟ್ ಸ್ಪಾಟ್‌ಗಳಲ್ಲಿ ಲಾಕ್ ಡೌನ್ ಮುಂದುವರೆಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಟಾಸ್ಕ್ ಫೋರ್ಸ್ ವರದಿ ಕೆಲವು ಮುಖ್ಯಾಂಶಗಳು ಇಂತಿವೆ:

* ಲಾಕ್ ಡೌನ್ ನಂತರ ಪ್ರಕರಣಗಳು ವರದಿಯಾದ ಪ್ರದೇಶದಲ್ಲಿ ಸ್ಥಳೀಯವಾಗಿ ಲಾಕ್‌ಡೌನ್ ಮಾಡಬೇಕು.

* ಸಾಮಾಜಿಕ ಅಂತರವನ್ನು ಕಟ್ಟು ನಿಟ್ಟಾಗಿ ಕಾಯ್ದುಕೊಳ್ಳುವುದನ್ನು ಮುಂದುವರಿಸಬೇಕು.

* ಶಾಲೆ ಕಾಲೇಜುಗಳನ್ನು ಮೇ 31ರ ವರೆಗೆ ಮುಚ್ಚಬೇಕು.

* ಎ.ಸಿ. ಇಲ್ಲದ ಎಲ್ಲ ಅಂಗಡಿಗಳನ್ನು ತೆರೆಯಬಹುದು.

* ಐಟಿ, ಬಿಟಿ ಉದ್ಯಮಗಳು, ಅತ್ಯಾವಶ್ಯಕ ಸೇವೆ ಒದಗಿಸುವ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳಲ್ಲಿ ಶೇ. 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಬಹುದು.

* ಅಂತರರಾಜ್ಯ ಗಡಿಗಳಲ್ಲಿ ಸರಕು ಸಾಗಣೆ ವಾಹನಗಳಿಗೆ ಮಾತ್ರ ಪ್ರವೇಶ ನೀಡಬೇಕು.

* ಸ್ಥಳೀಯ ಅಂಗಡಿಗಳು ಹೆಚ್ಚಿನ ಅವಧಿಗೆ ತೆರೆದಿಡುವ ಮೂಲಕ ಜನ ಸಂದಣಿಯಾಗದಂತೆ ಎಚ್ಚರ ವಹಿಸಬೇಕು.

* ಅಂತರರಾಜ್ಯ ರೈಲು ಸೇವೆ, ವಿಮಾನ ಸೇವೆಗಳನ್ನು ಸದ್ಯ ಪ್ರಾರಂಭಿಸಬಾರದು.

* ಕೋವಿಡ್ ಪ್ರಕರಣಗಳು ವರದಿಯಾದಾಗ ಚಿಕಿತ್ಸೆಗೆ ವೈದ್ಯರು, ದಾದಿಯರು, ಇತರ ಅರೆ ವೈದ್ಯಕೀಯ ಸಿಬ್ಬಂದಿ
ಜನರ ಅನವಶ್ಯಕ ಓಡಾಟಕ್ಕೆ ಕಡಿವಾಣ ಹಾಕಬೇಕು.

* ಏಪ್ರಿಲ್ 30 ರವರೆಗೆ ಎಸಿ ಬಸ್ ಮತ್ತು ಮೆಟ್ರೋ ಸೇವೆ ಬೇಡ.

* ಖಾಸಗಿ ವಾಹನಗಳ ಓಡಾಟಕ್ಕೆ ಸರಿ-ಬೆಸ ಸಂಖ್ಯೆಯ ಸೂತ್ರವನ್ನು ಅನುಸರಿಸಬೇಕು.

Follow Us:
Download App:
  • android
  • ios