*   ಸಕಾಲ ಯೋಜನೆಯಡಿ ತತ್ಕಾಲ್‌ ಸೇವೆ ಜಾರಿಗೆ ಚಿಂತನೆ*  ತುರ್ತಾಗಿ ಸರ್ಕಾರಿ ಸೇವೆ ಬೇಕಿದ್ದರೆ ಈ ವ್ಯವಸ್ಥೆಯಡಿ ಲಭ್ಯ*  ನೌಕರರು ಅನಗತ್ಯವಾಗಿ ಮಾಡುವ ವಿಳಂಬದಿಂದ ಜನರಿಗೆ ಸಮಸ್ಯೆ  

ಬೆಂಗಳೂರು(ಏ.05): ಕಾಲಮಿತಿಯಲ್ಲಿ ಸರ್ಕಾರಿ ಸೇವೆಗಳನ್ನು ನೀಡುವ ಭರವಸೆಯ ‘ಸಕಾಲ ಸೇವೆ’(Sakala Service) ಯೋಜನೆಯಲ್ಲಿ ತುರ್ತಾಗಿ ಸೇವೆ ಅಗತ್ಯವಿರುವವರಿಗೆ ‘ತತ್ಕಾಲ್‌ ಸೇವೆ’(Tatkal Service) ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ್‌(BC Nagesh) ಹೇಳಿದ್ದಾರೆ.

ಸಕಾಲ ಸೇವೆ ಆರಂಭವಾಗಿ 10 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನವೀಕೃತ ಸಕಾಲ ವೆಬ್‌ಸೈಟ್‌ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ(Government of Karnataka) 99 ಇಲಾಖೆಗಳ 1,115 ಸೇವೆಗಳು ಸಕಾಲ ವ್ಯಾಪ್ತಿಯಲ್ಲಿ ಲಭ್ಯ ಇವೆ. ವಿವಿಧ ಇಲಾಖೆಗಳ ಒಂದೊಂದು ಸೇವೆಗೆ ಒಂದೊಂದು ಕಾಲಮಿತಿ ನಿಗದಿಪಡಿಸಲಾಗಿದೆ. ಸಕಾಲ ಯೋಜನೆಯಿಂದಾಗಿ ಅರ್ಜಿಗಳು ಕಾಲಮಿತಿಯಲ್ಲಿ ವಿಲೇವಾರಿ ಆಗುತ್ತಿವೆ. ಆದರೆ, ಕೆಲವು ಸಂದರ್ಭಗಳಲ್ಲಿ ಅರ್ಜಿದಾರರಿಗೆ ತುರ್ತಾಗಿ ಒಂದೆರಡು ದಿನಗಳಲ್ಲೇ ದಾಖಲೆಗಳು, ಪ್ರಮಾಣ ಪತ್ರಗಳು ಬೇಕಾಗುತ್ತವೆ. ಅಂತಹ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಸೇವೆ ಒದಗಿಸಲು ತತ್ಕಾಲ್‌ ಸೇವೆಯನ್ನು ಜಾರಿಗೆ ತರುವ ಚಿಂತನೆ ಇದೆ. ಈ ಕುರಿತು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಪರಿಣಾಮಕಾರಿಯಾಗಿ ಜಾರಿಯಾಗಬೇಕು

ಪಠ್ಯದಿಂದ ಟಿಪ್ಪು ಮಾಹಿತಿ ಕೈ ಬಿಡುವ ಬಗ್ಗೆ ಸಮಿತಿ ಪರಿಶೀಲನೆ: ಸಚಿವ ನಾಗೇಶ್‌

2012ರ ಏಪ್ರಿಲ್‌ 2ರಿಂದ ಈ ವರ್ಷದ ಫೆಬ್ರವರಿ 28ರವರೆಗೆ 26.56 ಕೋಟಿ ಅರ್ಜಿಗಳು ಸ್ವೀಕೃತವಾಗಿದ್ದು, 26.41 ಕೋಟಿ ಅರ್ಜಿಗಳು ವಿಲೇವಾರಿಗೊಂಡಿವೆ. ಸಕಾಲ ಸೇವೆಯಡಿ ಕಾಲಮಿತಿಯಲ್ಲಿ ಸೇವೆ ಒದಗಿಸದ ಅಧಿಕಾರಿ ಅಥವಾ ಸಿಬ್ಬಂದಿಗೆ ದಂಡ ವಿಧಿಸಲು ಅವಕಾಶ ಇದೆ. ಆದರೆ ಅದು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ. ಈ ವಿಚಾರದಲ್ಲಿ ಅಧಿಕಾರಿಗಳು ಗಮನ ಹರಿಸಬೇಕಿದೆ ಎಂದು ಸ್ಪಷ್ಟ ಸೂಚನೆ ನೀಡಿದರು.

ನೌಕರರು ಅನಗತ್ಯವಾಗಿ ಮಾಡುವ ವಿಳಂಬದಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಸರ್ಕಾರಿ ಉದ್ಯೋಗ(Government Job) ಪಡೆದ ಬಳಿಕ ಸೇವಕರಾಗಿ ಜನರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರಿ ಸೇವೆಗಳನ್ನು ಒದಗಿಸುವುದರಲ್ಲಿ ಪಾರದರ್ಶಕತೆ, ಬದ್ಧತೆ ಮತ್ತು ಜವಾಬ್ದಾರಿ ಇರಬೇಕು. ಕಾಲಮಿತಿಯಲ್ಲಿ ಸೇವೆ ಒದಗಿಸಬೇಕು. ಇಲ್ಲದಿದ್ದರೆ ಅದಕ್ಕೆ ಕಾರಣವನ್ನು ತಿಳಿಸುವ ವ್ಯವಸ್ಥೆಯು ಜಾರಿಗೆ ತರಬೇಕು ಎನ್ನುವ ಉದ್ದೇಶವೂ ಸರ್ಕಾರದ ಮುಂದಿದೆ. ಮುಂದಿನ ದಿನಗಳಲ್ಲಿ ಅದನ್ನು ಜಾರಿಗೆ ತರುವ ಬಗ್ಗೆಯು ಚರ್ಚಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸಕಾಲ ಸೇವೆಗಳ ಕುರಿತು ಪೋಸ್ಟರ್‌ ಬಿಡುಗಡೆ ಮಾಡಲಾಯಿತು. ಸಕಾಲ ಸೇವೆಗಳ ಜಾರಿಯಲ್ಲಿ ಉತ್ತಮ ಸಾಧನೆ ಮಾಡಿದ ಮೊದಲ ಮೂರು ಸ್ಥಾನಗಳಲ್ಲಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಅಧಿಕಾರಿಗಳಿಗೆ ಪ್ರಶಂಸನಾ ಪತ್ರಗಳನ್ನು ವಿತರಿಸಲಾಯಿತು. ಸಕಾಲ ಯೋಜನೆ ಅನುಷ್ಠಾನಗೊಳಿಸಲು ಶ್ರಮಿಸಿದ ಅಧಿಕಾರಿಗಳಿಗೆ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ಸಿಎಂಗೆ ಬುದ್ದಿಜೀವಿಗಳು ಬರೆದ ಪತ್ರಕ್ಕೆ ಸಚಿವ ನಾಗೇಶ್ ವ್ಯಂಗ್ಯ

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಎಸ್‌. ಸುರೇಶ್‌ ಕುಮಾರ್‌(Suresh Kumar), ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಸಕಾಲ ಮಿಷನ್‌ ನಿರ್ದೇಶಕ ಪೊನ್ನುರಾಜ್‌, ಹೆಚ್ಚುವರಿ ನಿರ್ದೇಶಕಿ ಡಾ.ಬಿ.ಆರ್‌.ಮಮತಾ ಸೇರಿದಂತೆ ಹಲವರು ಹಾಜರಿದ್ದರು.

ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಶೀಘ್ರವೇ ದೊರೆಯಲಿದೆ ಸಾರಿಗೆ ಸೌಲಭ್ಯ

ರಾಜ್ಯದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಒದಗಿಸಲು ಹಲವು ಖಾಸಗಿ ಕಂಪನಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ಅವರು ಹೇಳಿದ್ದರು. ಕೆನರಾ ಬ್ಯಾಂಕ್ (Canara Bank) ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಅಡಿ ಒದಗಿಸಲಾಗಿರುವ 2 ಮಾರುತಿ ಇಕೋ ವಾಹನಗಳನ್ನು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM basavaraj bommai) ಅವರ ಸಮ್ಮುಖದಲ್ಲಿ ಮಾ.29 ರಂದು ಕೆನರಾ ಬ್ಯಾಂಕ್ ಅಧಿಕಾರಿಗಳು ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿದರು.