Asianet Suvarna News Asianet Suvarna News

ಉದ್ಯಮಿಗಳಿಂದ 2000 ಕೋಟಿ ವಸೂಲಿಗೆ ತಂಡ: ಸಚಿವ ಖಂಡ್ರೆ

2000 ಕೋಟಿ ರು. ವಸೂಲಿ ಮಾಡಲು ಪರಿಸರ ಇಲಾಖೆಯ ಪ್ರಧಾನ ಕಾರ್ಯ ದರ್ಶಿ ಬಿ.ಪಿ.ರವಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲು ತೀರ್ಮಾನಿಸಲಾಗಿದೆ. ಅಲ್ಲದೇ, ಕೋರ್ಟ್‌ನಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕಾನೂನು ಹೋರಾಟ ನಡೆಸಲು ವಿಶೇಷ ಕಾನೂನು ಕೋಶ ರಚಿಸಲಾಗುವುದು: ಸಚಿವ ಈಶ್ವರ್ ಖಂಡ್ರೆ 

Team to Recover 2000 crores from Businessmen in Karnataka Says Minister Eshwar Khandre grg
Author
First Published Jan 10, 2024, 12:00 PM IST

ಬೆಂಗಳೂರು(ಜ.10):  ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅರಣ್ಯ ಭೂಮಿ ಯನ್ನು ಸ್ವಾತಂತ್ರ್ಯಪೂರ್ವದಿಂದಲೂ ಗುತ್ತಿ ಗೆಗೆ ಪಡೆದು ಕಾಫಿ, ಟೀ, ರಬ್ಬರ್‌ಬೆಳೆಯುತ್ತಿ ರುವ ಪ್ರತಿಷ್ಠಿತ ಕಂಪನಿಗಳಿಂದ ಸರ್ಕಾರಕ್ಕೆ ಸುಮಾರು 2000 ಕೋಟಿ ರು. ಗುತ್ತಿಗೆ ಹಣ ಮತ್ತು ಬಡ್ಡಿ ಬಾಕಿ ಬರಬೇಕಿದೆ ಎಂದು ಅರಣ್ಯ ಸಚಿವ ಈಶ್ವ‌ರ್ ಖಂಡ್ರೆ ಹೇಳಿದ್ದಾರೆ. 

ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2000 ಕೋಟಿ ರು. ವಸೂಲಿ ಮಾಡಲು ಪರಿಸರ ಇಲಾಖೆಯ ಪ್ರಧಾನ ಕಾರ್ಯ ದರ್ಶಿ ಬಿ.ಪಿ.ರವಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲು ತೀರ್ಮಾನಿಸಲಾಗಿದೆ. ಅಲ್ಲದೇ, ಕೋರ್ಟ್‌ನಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕಾನೂನು ಹೋರಾಟ ನಡೆಸಲು ವಿಶೇಷ ಕಾನೂನು ಕೋಶ ರಚಿಸಲಾಗುವುದು ಎಂದು ತಿಳಿಸಿದರು.

ಅರಣ್ಯ ಇಲಾಖೆ ಅಕ್ರಮಕ್ಕೆ ದಾಖಲೆ ಕೊಡುವೆ, ತನಿಖೆ ನಡೆಸುವ ತಾಕತ್ತು ಖಂಡ್ರೆಗೆ ಇದೆಯಾ?: ಕುಮಾರಸ್ವಾಮಿ

3 ತಿಂಗಳಲ್ಲಿ ವನ್ಯ ಜೀವಿ ಅಂಗಾಂಗ ಮರಳಿಸಿ: 

ಹುಲಿ, ಚಿರತೆ ಉಗುರು, ಜಿಂಕೆ ಕೊಂಬು, ಆನೆ ದಂತ, ಕೂದಲು ಇತ್ಯಾದಿ ವನ್ಯಜೀವಿ ಅಂಗಾಂಗಗಳನ್ನು ಅಕ್ರಮವಾಗಿ ಸಂಗ್ರಹಿಸಿ ಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ. ಇವುಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ ಕಲ್ಪಿಸಲಾಗಿದ್ದು, ಜ.16ರಿಂದ 3 ತಿಂಗಳುಗಳ ಕಾಲ ಈ ವಸ್ತುಗಳನ್ನು ಹತ್ತಿರದ ಅರಣ್ಯ ಇಲಾಖೆಯ ಕಚೇರಿಗೆ ಮರಳಿಸಬಹುದು ಮತ್ತು ಮರಳಿಸಿದಾಗ ಅವರಿಗೆ ಸ್ವೀಕೃತಿ ನೀಡಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

Latest Videos
Follow Us:
Download App:
  • android
  • ios