ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕ್ಷೀಣಿಸುತ್ತಿರುವ ಸೂಚನೆ ಬೆನ್ನಲ್ಲೇ ಬಿಸಿಲ ತಾಪ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳ ಕಂಡು ಬಂದಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 2 ಸೆಲ್ಸಿಯಸ್‌ ಡಿಗ್ರಿವರೆಗೆ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರು(ಏ.12): ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಮುಂದಿನ ಒಂದೆರಡು ದಿನ ಗರಿಷ್ಠ ಉಷ್ಣಾಂಶದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕ್ಷೀಣಿಸುತ್ತಿರುವ ಸೂಚನೆ ಬೆನ್ನಲ್ಲೇ ಬಿಸಿಲ ತಾಪ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳ ಕಂಡು ಬಂದಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 2 ಸೆಲ್ಸಿಯಸ್‌ ಡಿಗ್ರಿವರೆಗೆ ಹೆಚ್ಚಾಗುವ ಸಾಧ್ಯತೆ ಇದೆ.

ದಕ್ಷಿಣ ಭಾರತ ಹೊರತುಪಡಿಸಿ ಉಳಿದೆಡೆ ಈ ವರ್ಷ ಭಾರೀ ಬಿಸಿಲು

ಕಲಬುರಗಿಯಲ್ಲಿ 40.1 ಡಿಗ್ರಿ:

ಕಳೆದ ವಾರದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ದಾಖಲಾಗಿತ್ತು. ಮತ್ತೆ ಮಳೆ ವಾತಾವರಣ ಕಂಡು ಬಂದ ಹಿನ್ನೆಲೆಯಲ್ಲಿ ಇಳಿಕೆ ಆಗಿತ್ತು. ಸೋಮವಾರ 40.1 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.
ಮುಂದಿನ ಒಂದೆರಡು ದಿನ ಹಾಸನ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.