ದೇಗುಲಗಳನ್ನು ಆರ್‌ಟಿಐನಿಂದ ಹೊರಗಿಡಲಾಗದು: ಹೈಕೋರ್ಟ್

ಅರ್ಜಿದಾರರು ಅರ್ಚಕರಾಗಿರುವ ದೇವಾಲಯಗಳು ರಾಜ್ಯ ಧಾರ್ಮಿಕದತ್ತಿ ಇಲಾಖೆಯ ಅಧೀನದಲ್ಲಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿಗೆ ಬರುವ ಸಾರ್ವಜನಿಕ ಪ್ರಾಧಿಕಾರಗಳಾಗಿವೆ. ಆದ್ದರಿಂದ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳುವುದು ಅರ್ಚಕರಿಗೆ ತೊಂದರೆ ನೀಡಿದಂತಾಗುವುದಿಲ್ಲ. ಆದ್ದರಿಂದ ಅರ್ಜಿದಾರರ ಮನವಿ ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟು ವಜಾಗೊಳಿಸಿದ ನ್ಯಾಯಪೀಠ ಅರ್ಜಿ 

Temples cannot be Excluded from RTI Says High Court of Karnataka grg

ಬೆಂಗಳೂರು(ಜೂ.13):  ರಾಜ್ಯದಲ್ಲಿ ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿ ಆದೇಶಿಸಿದೆ. 

ಅಖಿಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು ಹಾಗೂ ಅರ್ಚಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. 

ಎಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆಗೆ ಹೈಕೋರ್ಟ್‌ ಅಸ್ತು

ಅರ್ಜಿದಾರರು ಅರ್ಚಕರಾಗಿರುವ ದೇವಾಲಯಗಳು ರಾಜ್ಯ ಧಾರ್ಮಿಕದತ್ತಿ ಇಲಾಖೆಯ ಅಧೀನದಲ್ಲಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿಗೆ ಬರುವ ಸಾರ್ವಜನಿಕ ಪ್ರಾಧಿಕಾರಗಳಾಗಿವೆ. ಆದ್ದರಿಂದ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳುವುದು ಅರ್ಚಕರಿಗೆ ತೊಂದರೆ ನೀಡಿದಂತಾಗುವುದಿಲ್ಲ. ಆದ್ದರಿಂದ ಅರ್ಜಿದಾರರ ಮನವಿ ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ.

Latest Videos
Follow Us:
Download App:
  • android
  • ios