ಬೆಂಗಳೂರು ಜಿಲ್ಲಾಧಿಕಾರಿ ಹುದ್ದೆ ವರ್ಗಾವಣೆಗೆ ಹರಾಜು ನಡೆಯುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ ಆರೋಪ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹುದ್ದೆ ಸೇರಿದಂತೆ ಹಲವು ಪ್ರಮುಖ ಹುದ್ದೆಗಳ ವರ್ಗಾವಣೆಗೆ ಹರಾಜು ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರು (ಆ.29): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೂವರೆ ತಿಂಗಳಿಂದಲೇ ವರ್ಗಾವಣೆ ದಂಧೆಯನ್ನು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಂದು ಹೆಜ್ಜೆ ಮುಂದೆ ಹೋಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹುದ್ದೆ ಸೇರಿದಂತೆ ಹಲವು ಪ್ರಮುಖ ಹುದ್ದೆಗಳ ವರ್ಗಾವಣೆಗೆ ಹರಾಜು ನಡೆಯುತ್ತಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಶಿಕ್ಷಣ, ಆರೋಗ್ಯ, ಕೃಷಿ ಗೆ ಪ್ರೋತ್ಸಾಹ ಇಲ್ಲ. ರಾಜ್ಯದ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ರಾಜ್ಯದಲ್ಲಿ ಮುಕ್ತ ಮುಕ್ತವಾಗಿಯೇ ಭ್ರಷ್ಟಾಚಾರ ನಡೆಯುತ್ತಿದೆ. ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವಾಡುತ್ತಿದೆ. ಮಂತ್ರಿಗಳು, ಸಿಎಂ ಕಚೇರಿ ನಡುವೆ ಭ್ರಷ್ಟಾಚಾರಕ್ಕಾಗಿ ಗಲಾಟೆ ನಡೆಯುತ್ತಿದೆ. ಅದರಲ್ಲಿಯೂ ಮುಖ್ಯವಾಗಿ ಬೆಂಗಳೂರು ಗ್ರಾಮೀಣ ಜಿಲ್ಲೆಯ ಜಿಲ್ಲಾಧಿಕಾರಿ ಸೇರಿದಂತೆ ಪ್ರಮುಖ ಹುದ್ದೆಗಳ ವರ್ಗಾವಣೆಗೆ ಹರಾಜು ನಡೆಯುತ್ತಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿಗೆ ಅರ್ಜಿ ಹಾಕಿದ 15 ಲಕ್ಷ ಮಹಿಳೆಯರು 2000 ರೂ. ಪಡೆಯಲು ಅರ್ಹರಲ್ಲ: ತಿದ್ದುಪಡಿಗೆ ಇಲ್ಲಿದೆ ಮಾಹಿತಿ
ಈಗಾಗಲೇ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ಕೊಟ್ಟಿದ್ದರು. ಆದರೆ, ದೂರು ಕೊಟ್ಟವರ ಮೇಲೆಯೇ ಈ ಸರ್ಕಾರ ಕೇಸ್ ಮಾಡತ್ತದೆ. ಕೆಂಪಣ್ಣ ಪ್ರಧಾನಿಗೆ ಪತ್ರಬರೆದ್ರು ನಾವೇನು ಕೇಸ್ ಹಾಕಿರಲಿಲ್ಲ. ತನಿಖೆ ಮಾಡದೆ ದೂರು ಕೊಟ್ಟವರ ಮೇಲೆಯೇ ಕ್ರಮ ತೆಗೆದುಕೊಳ್ಳುವುದು ಕಾಂಗ್ರೆಸ್ ಸರ್ಕಾರನ ಕ್ರಮವಾಗಿದೆ. ಇನ್ನು ಶಾಸಕ ಬಿ.ಆರ್. ಪಾಟೀಲ್ ನಕಲಿ ಪತ್ರ ಎಂದರು. ಅವರ ಶಾಸಕರೇ ತಾವು ಸಹಿ ಮಾಡಿದ್ದೇವೆ ಎಂದರು. ತನಿಖೆ ಮಾಡದೆ, ಪತ್ರಕರ್ತರ ಮೇಲೆ ಪ್ರಶ್ನೆ ಮಾಡಿದರು. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯವೂ ಇಲ್ಲ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಎಲ್ಲದಕ್ಕೂ ಕೇಸ್ ಹಾಕಿದ್ರೆ ಜೈಲಿನಲ್ಲಿ ಜಾಗ ಸಾಕಾಗಲ್ಲ. ಭ್ರಷ್ಟಾಚಾರ ಮಾಡಿ, ಪ್ರಶ್ನಿಸಿದವರ ಮೇಲೆ ದಬ್ಬಾಳಿಕೆ ಮಾಡುವ ಸರ್ಕಾರ ಅಧಿಕಾರದಲ್ಲಿದೆ. ನಮ್ಮ ಕಾಲದಲ್ಲಿ ಬೆಂಗಳೂರಿನಲ್ಲಿ ಕ್ಲಬ್ ಎಲ್ಲ ಬಂದ್ ಮಾಡಲಾಗಿತ್ತು. ಈಗ ಮತ್ತೆ ಎಲ್ಲ ಓಪನ್ ಆಗಿದೆ. ಎಲ್ಲರಿಗೂ ಮಾಮೂಲಿ ಕೊಟ್ಟು ಓಪನ್ ಮಾಡಿದ್ದಾರೆ. ಕೈಗಾರಿಕೆಗೆ ಬಂಡವಾಳ ಹೂಡಿಕೆ ಮೂರು ತಿಂಗಳಿಂದ ನಿಂತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪ ಮಾಡಿದರು.
ಕಾವೇರಿ ವಿಚಾರದಲ್ಲಿ ಕಾನೂನು ಹೋರಾಟವನ್ನೇ ಆರಂಭಿಸಿಲ್ಲ: ಸಿಡಬ್ಲುಆರ್‌ಇ ಸಭೆಯಲ್ಲಿ ರಾಜ್ಯದ ಹಿತ ಕಾಪಾಡುವಲ್ಲಿ ವಿಫಲವಾಗಿದೆ. ನೀರು ಬಿಟ್ಟು, ರಿವ್ಯುಪಿಟಿಷನ್ ಹಾಕಲು ಹೊರಟಿದ್ದಾರೆ. ಸುಪ್ರಿಂ ಕೋರ್ಟ್ ಗೆ ಇನ್ನೂ ಪಿಟಿಷನ್ ಹಾಕಿಲ್ಲ. ತಮಿಳುನಾಡು ಪ್ರಕರಣ ದಾಖಲಿಸಿ ಎರಡು ಹಿಯರಿಂಗ್ ಆಗಿದೆ. ಕಾನೂನು ಹೋರಾಟ ಮಾಡುತ್ತಲೇ ಇಲ್ಲ. ರೈತರ ಹಿತ ಕಾಪಾಡುತ್ತೇವೆ ಎನ್ನುವುದು ಕೇವಲ ಘೋಷಣೆ ಅಷ್ಟೆ. ಕುಡಿಯುವ ನೀರಿಗೆ ಸಮಸ್ಯೆ ಆಗಲಿದೆ. ಈ ಬಗ್ಗೆ ಸರ್ಕಸರಕ್ಕೆ ಕಾಳಜಿಯೇ ಇಲ್ಲ. ಒಂದೆರಡು ತಿಂಗಳ ಬಳಿಕ ವಿದ್ಯುತ್ ಕೊರತೆ ಆಗಲಿದೆ. ಝೀರೋ ಬಿಲ್ ಅಲ್ಲ ಝೀರೋ ಕರೆಂಟ್ ಆಗಲಿದೆ ಎಂದರು.
ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ವಿಮಾನ ಸಂಚಾರಕ್ಕೆ ಆ.31 ರಂದು ಮುಹೂರ್ತ ಫಿಕ್ಸ್: ಇಲ್ಲಿದೆ ಪಕ್ಷಿ ನೋಟ
ಇನ್ನು ಕಾಂಗ್ರೆಸ್ ಗ್ಯಾರಂಟಿಯಾದ ಶಕ್ತಿ ಯೋಜನೆ ಜಾರಿಗೊಳಿಸಿದ ನಂತರ ಸಾರಿಗೆ ಇಲಾಖೆಗೆ ಅರ್ಧ ಹಣ ಕೊಟ್ಟಿದ್ದಾರೆ. ಗ್ಯಾರಂಟಿ ಯೋಜನೆಗೆ ದಲಿತರಿಗೆ ಮೀಸಲಿಟ್ಟ ಹಣ ಡೈವರ್ಟ್ ಮಾಡಿದ್ದಾರೆ. 7D ತೆಗೆದುಹಾಕ್ತಿವಿ ಎಂದರು, ಆದರೆ ಅಧಿವೇಶನದಲ್ಲಿ ಈ ವಿಚಾರ ತರಲೇ ಇಲ್ಲ. ದಲಿತರಿಗೆ 11 ಸಾವಿರ ಕೋಟಿ ಹಣ ಕೋತಾ ಆಯ್ತು , ಯಾರು ಕೊಡ್ತಾರೆ? ಇವರೇನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉದ್ದಾರಕರಾ? ವರ್ಗಾವಣೆ ದಂಧೆ ನಿಂತಿಲ್ಲ. ಪೊಲೀಸರಿಂದ ಹಪ್ತಾ ವಸೂಲಿ ಮಾಡಿಸುತ್ತಿದ್ದಾರೆ. ಪೊಲಿಸ್ ಒಬ್ಬ ಆತ್ಮಹತ್ಯೆ ಮಾಡಿಕೊಳ್ತೇನೆ ಎನ್ನುತ್ತಿದ್ದಾನೆ. ವಸೂಲಿ ಮಾಡಿ ಪೋಲಿಸರೇ ಈಗ ಬೇಜಾರಾಗಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವವರು ಯಾರು? ವಸೂಲಿ ಕೆಲಸ, ವರ್ಗಾವಣೆ ಭಯ ಇದರ ನಡುವೆ ಕಳ್ಳರನ್ನ ಪೊಲಿಸರು ಹಿಡಿಯೊದು ಯಾವಾಗ? ನೀರಾವರಿ ಸೇರಿದಂತೆ ಎಲ್ಲ ಇಲಾಖೆ ಯೋಜನೆ ಸ್ತಬ್ದವಾಗಿವೆ. ಗ್ಯಾರಂಟಿಯನ್ನೂ ಸರಿಯಾಗಿ ಕೊಟ್ಟಿಲ್ಲ ಎಂದು ಆರೋಪ ಮಾಡಿದರು.