ಕಾಶ್ಮೀರದ ಪಹಲ್ಗಾಂನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಗ್ರರ ದಾಳಿ ಮಾಹಿತಿ ತಿಳಿಯದಿರುವುದು ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. 

ಬೆಂಗಳೂರು (ಏ.24): ಕಾಶ್ಮೀರದ ಪಹಲ್ಗಾಂನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಗ್ರರ ದಾಳಿ ಮಾಹಿತಿ ತಿಳಿಯದಿರುವುದು ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ದಾಳಿಯಲ್ಲೂ ಗುಪ್ತಚರ ವೈಫಲ್ಯವಿತ್ತು. ಕೇಂದ್ರ ಸರ್ಕಾರ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಕನ್ನಡಿಗರನ್ನು ಕರೆತರುವ ಕುರಿತು ಮಾತನಾಡಿದ ಸಿದ್ದರಾಮಯ್ಯ, ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್‌ರನ್ನು ಕಾಶ್ಮೀರಕ್ಕೆ ಕಳುಹಿಸಲಾಗಿದ್ದು, ವಿಶೇಷ ವಿಮಾನ ಮೂಲಕ ಕನ್ನಡಿಗರನ್ನು ಕರೆತರುವಂತೆ ಸೂಚಿಸಿದ್ದೇನೆ ಎಂದರು. 

ಸಿಎಂ-ಡಿಸಿಎಂ ಸಾಂತ್ವನ: ಮೃತಪಟ್ಟಿರುವ ರಾಜ್ಯದ ಮಂಜುನಾಥ ರಾವ್‌ ಮತ್ತು ಭರತ್‌ ಭೂಷಣ್‌ ಅವರ ಕುಟುಂಬದವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಸಿಎಂ ನಿರಂತರ ಸಭೆ ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರವೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದರು. ಈ ವೇಳೆ ಉಗ್ರರ ದಾಳಿಯಿಂದ ಮೃತಪಟ್ಟ ರಾಜ್ಯದ ಇಬ್ಬರ ಕುಟುಂಬಗಳಿಗೆ ತಲಾ 10 ಲಕ್ಷ ರು. ಪರಿಹಾರ ಘೋಷಿಸಿದರು. ಉಗ್ರರ ದಾಳಿಗೆ ಮೃತಪಟ್ಟ ರಾಜ್ಯದ ಇಬ್ಬರ ಮೃತದೇಹ ತರುವುದು ಹಾಗೂ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಸಂಬಂಧ ಸಿದ್ದರಾಮಯ್ಯ ಮಂಗಳವಾರ ಸಂಜೆಯಿಂದ ನಿರಂತವರಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.

ಪರಮಾಣು ವಿದ್ಯುತ್ ಉತ್ಪಾದನೆಯ 2 ಕೈಗಾ ಘಟಕ ನಿರ್ಮಾಣಕ್ಕೆ 12800 ಕೋಟಿ ಒಪ್ಪಂದ

ಮಾಹಿತಿ ಪಡೆಯಲು ಸಹಾಯವಾಣಿ: ಜಮ್ಮು-ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಕನ್ನಡಿಗರ ಮಾಹಿತಿ ಕಲೆಹಾಕಲು ರಾಜ್ಯ ಸರ್ಕಾರ ಸಹಾಯವಾಣಿ ಆರಂಭಿಸಿದೆ. ಸಹಾಯವಾಣಿ ಸಂಖ್ಯೆ: 080 43344334, 43344335, 43344336, 43344342.

ನಿವಾರಣೆಗೆ ಕ್ರಮ: ಜಾತಿಗಣತಿಯಲ್ಲಿ ನ್ಯೂನತೆಗಳಿದ್ದರೆ ಸರಿಪಡಿಸುತ್ತೇವೆ. ಅಭಿಪ್ರಾಯ ನೀಡುವಂತೆ ಸಂಪುಟ ಸಚಿವರನ್ನು ಕೇಳಲಾಗಿದ್ದು, ಯಾರೊಬ್ಬರೂ ಇನ್ನೂ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಮೇ 2ರಂದು ನಡೆವ ವಿಶೇಷ ಸಂಪುಟ ಸಭೆಯಲ್ಲಿ ಅಭಿಪ್ರಾಯ ತಿಳಿಸುವಂತೆ ಸೂಚಿಸಿದ್ದೇನೆ. ಅಭಿಪ್ರಾಯ ಪಡೆದು ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಬೆಲೆಯೇರಿಕೆಯೇ ಸಿದ್ದರಾಮಯ್ಯ ಸರ್ಕಾರದ 6ನೇ ಗ್ಯಾರಂಟಿ: ವಿಜಯೇಂದ್ರ

ಹಿಂದಿನ ಸಮೀಕ್ಷೆಗೂ ಈ ಸಮೀಕ್ಷೆಗೂ ವ್ಯತ್ಯಾಸವಿದೆ ಎಂಬ ಆರೋಪ ಕೇಳಿಬರುತ್ತಿದೆ. ಆದರೆ, ಜನಸಂಖ್ಯೆ ಹೆಚ್ಚು ಕಡಿಮೆ ಆಗಿರುವುದರಿಂದ ಸರ್ವೇನಲ್ಲಿ ವ್ಯತ್ಯಾಸವಾಗಿರಬಹುದು ಎಂದು ತಿಳಿಸಿದರು. ಬಿಜೆಪಿಯವರೇ ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಕ ಮಾಡಿದ್ದರು. ಅವರೇ ನೇಮಿಸಿದ ಅಧ್ಯಕ್ಷರು ವರದಿ ನೀಡಿದ್ದಾರೆ. ಇದನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ. ಕಾಂತರಾಜು ಕೊಟ್ಟಿರುವ ಅಂಕಿ-ಅಂಶಗಳ ಆಧಾರದ ಮೇಲೆ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.