Asianet Suvarna News Asianet Suvarna News

'ಹಿಂದೆ ನಾನು ಮೇಷ್ಟ್ರಾಗಿದ್ದೆ' ಅಂತಾ ಹೇಳೋ ಮುನ್ನ ವಿದ್ಯಾರ್ಥಿ ಶಿಕ್ಷಕರ ಸಮಸ್ಯೆ ಅರ್ಥಮಾಡ್ಕೊಳ್ಳಿ: ಸಿಎಂಗೆ ಸುನೀಲ್ ಸಲಹೆ

ಮುಖ್ಯಮಂತ್ರಿಗಳೇ, ನಿಮ್ಮನ್ನು ಎರಡನೇ ಬಾರಿಗೆ ಸಿಎಂ ಮಾಡಿದ್ದಾರೆಂಬ ಋಣ ತೀರಿಸಿಕೊಳ್ಳುವುದಕ್ಕಾಗಿ  ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ ?  ಪಠ್ಯ ಪರಿಷ್ಕರಣೆ ಬಗ್ಗೆ ನಿಮಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿದ್ದಾರೆಂದು ಅನುಮಾನ ಬರುತ್ತಿದೆ ಎಂದು ಮಾಜಿ ಸಚಿವ ವಿ.ಸುನಿಲ್ ಕುಮಾರ್ ಟ್ವೀಟ್ ಮಾಡುವ ಮೂಲಕ ಖಂಡಿಸಿದ್ದಾರೆ.

Text revision issue Sunilkumar karkal series tweets against CM Siddaramaiah rav
Author
First Published Jun 7, 2023, 3:41 PM IST

ಬೆಂಗಳೂರು (ಜೂ.7) ಮುಖ್ಯಮಂತ್ರಿಗಳೇ, ನಿಮ್ಮನ್ನು ಎರಡನೇ ಬಾರಿಗೆ ಸಿಎಂ ಮಾಡಿದ್ದಾರೆಂಬ ಋಣ ತೀರಿಸಿಕೊಳ್ಳುವುದಕ್ಕಾಗಿ  ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ ?  ಪಠ್ಯ ಪರಿಷ್ಕರಣೆ ಬಗ್ಗೆ ನಿಮಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿದ್ದಾರೆಂದು ಅನುಮಾನ ಬರುತ್ತಿದೆ ಎಂದು ಮಾಜಿ ಸಚಿವ ವಿ.ಸುನಿಲ್ ಕುಮಾರ್ ಟ್ವೀಟ್ ಮಾಡುವ ಮೂಲಕ ಖಂಡಿಸಿದ್ದಾರೆ.
ಆರೆಎಸ್ಸೆಸ್ ಸಂಸ್ಥಾಪಕ ಹೆಡ್ಗೇವಾರ್, ಚಕ್ರವರ್ತಿ ಸೂಲಿಬೆಲೆ, ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಪಠ್ಯ ವನ್ನು ಸರಕಾರ ಕೈಬಿಟ್ಟಿದೆ. ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಟೀಕೆ ಮಾಡಿರುವ ಸುನೀಲ್ ಕುಮಾರ್, ಅಧಿಕಾರಕ್ಕೆ ಬಂದು ತಿಂಗಳು ಕಳೆಯುವಷ್ಟರಲ್ಲೇ ಸಿದ್ದರಾಮಯ್ಯ(Siddaramaiah)ಸರ್ಕಾರ ಪಠ್ಯ-ಪುಸ್ತಕ ಪರಿಷ್ಕರಣೆಗೆ ಕೈ ಹಾಕಿದ್ದಾರೆ. ಪಠ್ಯದಲ್ಲಿ ಭಾರತೀಯತೆ, ಸಂಸ್ಕೃತಿ ಹಾಗೂ ಇತಿಹಾಸದ
ನೈಜ್ಯ ಸತ್ಯಗಳೇನು ಎಂಬುದು ವಿದ್ಯಾರ್ಥಿಗಳಿಗೆ ತಿಳಿಯದಂತೆ ಮುಚ್ಚಿಡುವುದು ಸರ್ಕಾರದ ಉದ್ದೇಶವೇ? ಎಂದು ಪ್ರಶ್ನಿಸಿದ್ದಾರೆ.

ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ

ಶಾಲೆಗಳಿಗೆ ಪಠ್ಯ- ಪುಸ್ತಕ ಪೂರೈಕೆಯಾದ ನಂತರ ಪರಿಷ್ಕರಣೆಯ ಹಠವೇಕೆ? ಮಾನ್ಯ ಸಿದ್ದರಾಮಯ್ಯನವರೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu bangarappa)ನವರಿಗೆ
ಇಲಾಖೆಯ ಇತರೆ ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಕ್ಕಾದರೂ ಅವಕಾಶ ಕೊಡಿ ಎಂದಿದ್ದಾರೆ.

ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಕಲಿಸುವ ಪಾಠ ಯಾವುದೆಂದು ನಿರ್ಧರಿಸಿ ಎಂದು ನೀವು ಪಾಠ ಮಾಡಬೇಡಿ. ನಾನು ಮೇಷ್ಟ್ರಾಗಿದ್ದೆ ಕಣ್ರಿ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡುವುದಕ್ಕೆ ಮುನ್ನ ವಿದ್ಯಾರ್ಥಿ ಹಾಗೂ
ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ. ಪಠ್ಯ ಪರಿಷ್ಕರಣೆ ಬಗ್ಗೆ ನಿಮಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಅನುಮಾನ ಬರುತ್ತಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಪಠ್ಯ ಪರಿಷ್ಕರಣೆ ಗೊಂದಲ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಸಿದ್ದರಾಮಯ್ಯನವರೇ ನಿಮಗೆ ಶ್ರೇಷ್ಠ ಭಾರತೀಯ ಚಿಂತನೆಗಳು, ನಿಜವಾದ ಆದರ್ಶ ಪುರುಷ ಯಾರಾಗಬೇಕು ?  ತಾಯಿ ಭಾರತಿಯ ಅಮರಪುತ್ರರು ಎಂಬ ವಿಚಾರಗಳು ಹೇಗೆ ಇಷ್ಟವಾಗುತ್ತದೆ ಹೇಳಿ?ನಿಮ್ಮ ದೃಷ್ಟಿಯಲ್ಲಿ ಶಾಲಾ ಪಠ್ಯದಲ್ಲಿ ನಕಲಿ ಗಾಂಧಿ, ಕುಟುಂಬದ ಚರಿತ್ರೆ, ವಿದೇಶಿ ದಾಳಿಯ ವಿಕೃತಿಗಳು ಮಾತ್ರ ತುಂಬಿರಬೇಕಲ್ಲವೇ ? ಎಂದು ಪ್ರಶ್ನಿಸಿದ್ದಾರೆ.

Follow Us:
Download App:
  • android
  • ios