6ನೇ ತರಗತಿ ಪಠ್ಯದಲ್ಲಿ ಕನ್ನಡಕ್ಕೆ ಅವಮಾನ, ಚಕ್ರತೀರ್ಥ ವಿರುದ್ಧ ಹೊಸ ಆರೋಪ!

* ಪಠ್ಯ ಪರಿಷ್ಕರಣೆ ವಿವಾದ ಮುಗಿಯದ ಅಧ್ಯಾಯವಾದಂತಿದೆ

* ರಾಜ್ಯೋತ್ಸವ ಮೆರವಣಿಗೆಗೆ ಪಠ್ಯದಿಂದ ಕೊಕ್‌

* 6ನೇ ತರಗತಿ ಪಠ್ಯ ಪರಿಷ್ಕರಣೆ ವೇಳೆ ಕನ್ನಡಕ್ಕೆ ಅವಮಾನ ಆರೋಪ

Textbook Revision Row Insult To Kannada New Allegation On Rohith Chakrathirtha pod

ಬೆಂಗಳೂರು(ಜೂ.06): ಪಠ್ಯ ಪರಿಷ್ಕರಣೆ ವಿವಾದ ಮುಗಿಯದ ಅಧ್ಯಾಯವಾದಂತಿದೆ. ಇದೀಗ ಕನ್ನಡ ರಾಜ್ಯೋತ್ಸವದ ಕುರಿತು ಆರನೇ ತರಗತಿಯ ಕನ್ನಡ ಭಾಷಾ ಪಠ್ಯದಲ್ಲಿ ತಾಯಿ ಭುವನೇಶ್ವರಿಯ ‘ಮೆರವಣಿಗೆ’ ಕುರಿತ ಪಾಠವನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕೈಬಿಟ್ಟಿರುವ ಆರೋಪ ಕೇಳಿ ಬಂದಿದೆ.

6ನೇ ತರಗತಿ ‘ಸಿರಿಗನ್ನಡ’ ಪ್ರಥಮ ಭಾಷಾ ಪಠ್ಯಪುಸ್ತಕದಲ್ಲಿ ಆರನೇ ಗದ್ಯವಾಗಿ ಮೆರವಣಿಗೆ ಪಾಠವಿತ್ತು. ಈ ಪಠ್ಯವನ್ನು ಹಿಂದಿನ ಸಮಿತಿಯೇ ರೂಪಿಸಿತ್ತು. ಕನ್ನಡ ರಾಜ್ಯೋತ್ಸವಕ್ಕಾಗಿ ಶಾಲೆಯೊಂದರಲ್ಲಿ ನಡೆದ ಸಿದ್ಧತೆ, ನವೆಂಬರ್‌ 1ರ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಹಾಗೂ ಭುವನೇಶ್ವರಿ ತಾಯಿಯ ಮೆರವಣಿಗೆಯನ್ನು ತಿಳಿಸುವ ಪಾಠ ಇದಾಗಿತ್ತು. ಆದರೆ, ಈ ಪಾಠವನ್ನು ಕೈಬಿಟ್ಟು ಬದಲಾಗಿ ಹುಬ್ಬಳ್ಳಿಯ ಸಿದ್ಧಾರೂಢ ಮಠದಿಂದ ಪ್ರತಿ ವರ್ಷ ನಡೆಯುವ ‘ಸಿದ್ಧಾರೂಢ ಜಾತ್ರೆ’ ಪಾಠವನ್ನು ಸೇರಿಸಲಾಗಿದೆ ಎನ್ನಲಾಗುತ್ತಿದೆ.

ಭಾರತವು ನೂರಾರು ಮಠಮಾನ್ಯಗಳಿಂದ ತುಂಬಿರುವ ದೇಶ. ಇಲ್ಲಿ ಪ್ರತಿ ಧಾರ್ಮಿಕ ಸಂಸ್ಥೆಯೂ ತನ್ನ ಆಚರಣೆ, ಸಂಪ್ರದಾಯ, ಸಮಾಜಸೇವೆ ಇತ್ಯಾದಿ ಕೆಲಸಗಳಿಂದ ವಿಶಿಷ್ಟವಾಗಿ ನಿಲ್ಲುತ್ತದೆ.... ಹೀಗೆ ಹೊಸ ಪಾಠ ಆರಂಭವಾಗಿ ಆರಂಭವಾಗುತ್ತದೆ. ರುಸ್ತುಂ ಎಂಬ ಹುಡುಗ ಸಿದ್ಧಾರೂಢರ ಕುರಿತು ಹೇಳುತ್ತಾನೆ. ನಂತರ ಹಸೀನಾ ಎಂಬ ಹುಡುಗಿ ಕೂಡ ಮಠದ ಬಗ್ಗೆ ಮಾಹಿತಿ ಕೇಳುತ್ತಾಳೆ. ಗುರುಗಳು ವಿವರಿಸುತ್ತಾ ಹೋಗುವ ಪಾಠ ಇದಾಗಿದೆ.

ಸಿದ್ಧಾರೂಢರ ಜಾತ್ರೆಯನ್ನು ಪಠ್ಯದಲ್ಲಿ ಸೇರಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಯಾವುದೇ ಆಕ್ಷೇಪವಿಲ್ಲ. ಆದರೆ, ರಾಜ್ಯೋತ್ಸವ ಪಾಠವನ್ನು ತೆಗೆಯುವ ಬದಲು ಅದನ್ನು ಹಾಗೇ ಉಳಿಸಿಕೊಂಡು ಜಾತ್ರೆಯ ಪಾಠವನ್ನು ಬೇರೆಡೆ ಸೇರಿಸಬಹುದಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದಲ್ಲದೇ ಹೊಸದಾಗಿ ಸೇರಿಸಿರುವ ಸಿದ್ಧಾರೂಢ ಜಾತ್ರೆಯ ಪಾಠದಲ್ಲಿ ತೇರಿನ ಮುಂದೆ ಕೇಸರಿ ಬಾವುಟ ಹಾರಾಡುತ್ತಿರುವ ಚಿತ್ರವನ್ನು ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.

Latest Videos
Follow Us:
Download App:
  • android
  • ios