ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿದ್ದಾರೆ ಎಂದು ಆರೋಪಿಸಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರ ರಾಜಿನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (ಆಗ ವಿರೋಧಪಕ್ಷದ ನಾಯಕರಾಗಿದ್ದರು) ವಿರುದ್ಧ ದಾಖಲಾಗಿದ್ದ ಪ್ರಕರಣ ಹಾಗೂ ಆ ಕುರಿತ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಚ್ ಮಧ್ಯಂತರ ತಡೆ ನೀಡಿದೆ.
ಬೆಂಗಳೂರು (ಸೆ.9) : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿದ್ದಾರೆ ಎಂದು ಆರೋಪಿಸಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರ ರಾಜಿನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (ಆಗ ವಿರೋಧಪಕ್ಷದ ನಾಯಕರಾಗಿದ್ದರು) ವಿರುದ್ಧ ದಾಖಲಾಗಿದ್ದ ಪ್ರಕರಣ ಹಾಗೂ ಆ ಕುರಿತ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಚ್ ಮಧ್ಯಂತರ ತಡೆ ನೀಡಿದೆ.
ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ಅಲ್ಲದೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ವಕೀಲರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆ.15ಕ್ಕೆ ಮುಂದೂಡಿತು.
ಬಿಜೆಪಿ-ಜೆಡಿಎಸ್ ಮೈತ್ರಿಗೆ ಕಾಂಗ್ರೆಸ್ ಡೋಂಟ್‌ಕೇರ್ : ಡಿಕೆ ಶಿವಕುಮಾರ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿದ್ದಾರೆಂದು 2022ರ ಏ.14ರಂದು ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜಿನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿಯವರ ನಿವಾಸಕ್ಕೆ ಮುತ್ತಿಗೆ ಹಾಕಲು ಮೆರವಣಿಗೆ ನಡೆಸಲಾಗಿತ್ತು. ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಹಾಗೂ ಕಾನೂನು-ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪ ಸಂಬಂಧ ಪ್ರತಿಭಟನಾಕಾರರ ವಿರುದ್ಧ ಹೈಗ್ರೌಂಡ್‌್ಸ ಪೊಲೀಸ್ ಠಾಣಾ ಪೊಲೀಸರು ಎಐಆರ್ ದಾಖಲಿಸಿದ್ದರು. ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಪ್ರಮುಖ ಆರೋಪಿಯಾಗಿದ್ದರು.
ನಂತರ ತನಿಖೆ ನಡೆಸಿದ್ದ ಪೊಲೀಸರು 2023ರ ಫೆ.12ರಂದು ಸಿದ್ದರಾಮಯ್ಯ ವಿರುದ್ಧ ದೋಷಾರೋಪ ಪಟ್ಟಿಸಲ್ಲಿಸಿದ್ದರು. ಪ್ರಕರಣವನ್ನು ಜೂ.13ರಂದು 42ನೇ ಎಸಿಎಂಎಂ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿತ್ತು. ಪ್ರಕರಣ, ಎಫ್‌ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಚ್‌ಗೆ ಅರ್ಜಿ ಸಲ್ಲಿಸಿದ್ದರು.
ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ: ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದ ಸಂಸದ ಬಚ್ಚೇಗೌಡ!