Asianet Suvarna News Asianet Suvarna News

ಸಿಎಂ ಸಿದ್ದರಾಮಯ್ಯ ಸೇರಿ ಹಲವರಿಗೆ ₹10 ಸಾವಿರ ದಂಡ ವಿಧಿಸಿದ ಹೈಕೋರ್ಟ್; ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಸೂಚನೆ ಏನಿದು ಪ್ರಕರಣ?

ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್  10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಿದೆ.

The highcourt fined 10000 to CM Siddaramaiah and others at bengaluru rav
Author
First Published Feb 6, 2024, 2:57 PM IST

ಬೆಂಗಳೂರು (ಫೆ.6): ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್  10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಿದೆ.

ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾರ್ಚ್ 7 ರಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, 11 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆರ್ ಎಸ್ ಸುರ್ಜೇವಾಲಾ ಮತ್ತು ಮಾರ್ಚ್ 15 ರಂದು ಭಾರೀ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್  ಹಾಜರಾಗುವಂತೆ ಸೂಚಿಸಲಾಗಿದೆ.

ಕೇಂದ್ರದ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಎಚ್‌ಡಿಕೆ, ದೇವೇಗೌಡರಿಗೆಕ ಪತ್ರ ಬರೆದ ಸಿಎಂ

ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸಕ್ಕೆ ಕಾನೂನು ಬಾಹಿರವಾಗಿ ಪಾದಯಾತ್ರೆ ನಡೆಸಿದ ಆರೋಪದ ಮೇಲೆ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠ ವಜಾಗೊಳಿಸಿದೆ.

ನಗರ ಜೀವನ ಈಗಾಗಲೇ ಚಿತ್ರಹಿಂಸೆಯಾಗಿರುವಾಗ ಪ್ರತಿನಿಧಿಗಳು ನಿಯಮವನ್ನು ಅನುಸರಿಸದಿದ್ದರೆ ಮತ್ತು ರಸ್ತೆಗಳನ್ನು ನಿರ್ಬಂಧಿಸಿದರೆ ಏನಾಗುತ್ತದೆ? ಪ್ರತಿನಿಧಿಗಳು ಮೊದಲು ನಿಯಮವನ್ನು ಅನುಸರಿಸಬೇಕು ಎಂದು ಹೈಕೋರ್ಟ್ ತಾಕೀತು ಮಾಡಿತು. 

ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ರಾಜಕೀಯ ಸ್ಟಂಟ್: ಬಿಜೆಪಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ 2022 ರ ಏಪ್ರಿಲ್‌ನಲ್ಲಿ ಈಗಿನ ಸಿಎಂ ಸೇರಿದಂತೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow Us:
Download App:
  • android
  • ios