Asianet Suvarna News Asianet Suvarna News

ಪಿಎಫ್‌ಐ ಬ್ಯಾನ್‌ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್‌!

ಪ್ಯಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾ ನಿಷೇಧವನ್ನು ಪ್ರಶ್ನಿಸಿ  ಕರ್ನಾಕಟ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು, ಹೈಕೋರ್ಟ್‌ನ ಏಕಸದಸ್ಯ ಪೀಠ ಬುಧವಾರ ವಜಾ ಮಾಡಿದೆ. ಈ ಕುರಿತಾಗಿ ಪ್ರಕರಣದ ವಿಚಾರಣೆ ನಡೆಸಿ, ತೀರ್ಪನ್ನು ಕೋರ್ಟ್‌ ಕಾಯ್ದಿರಿಸಿತ್ತು.
 

The Karnataka High Court dismissed the petition challenging the PFI ban san
Author
First Published Nov 30, 2022, 3:32 PM IST

ಬೆಂಗಳೂರು (ನ.30): ದೇಶದಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ನಿಷೇಧವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು, ಏಕಸದಸ್ಯ ಪೀಠ ಬುಧವಾರ ವಜಾ ಮಾಡಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಸ್ನಿಸಿ ಕರ್ನಾಟಕದ ಪಿಎಫ್‌ಐ ಅಧ್ಯಕ್ಷ ನಾಸಿರ್‌ ಅಲಿ ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಕುರಿತಾಗಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಬುಧವಾರ ಮಹತ್ವದ ಆದೇಶ ಪ್ರಕಟಿಸಿದೆ. ಯುಎಪಿಎ ಅಡಿ ಪಿಎಫ್ಐ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು.ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು 5 ವರ್ಷದ ಅವಧಿಗೆ 'ತಕ್ಷಣದ ಪರಿಣಾಮ'ದೊಂದಿಗೆ "ಕಾನೂನುಬಾಹಿರ ಸಂಘಗಳು" ಎಂದು ಘೋಷಿಸಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತು. 

ಕರ್ನಾಟಕ ಪಿಎಫ್‌ಐ ಅಧ್ಯಕ್ಷ ನಾಸಿರ್‌ ಅಲಿ ಪ್ರಸ್ತುತ ಜೈಲಿನಲ್ಲಿದ್ದು, ಪತ್ನಿ ಮೂಲಕ ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದರು. ಕೋರ್ಟ್‌ ಇದರ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಲಾಗಿತ್ತು. 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್ (3)ರ ಉಪವಿಭಾಗ 3ರ ನಿಬಂಧನೆಗಳ ಪ್ರಕಾರ, ಸಕ್ಷಮ ಪ್ರಾಧಿಕಾರದ ಕಡೆಯಿಂದ ಇದು ಕಡ್ಡಾಯವಾಗಿದೆ ಎಂದು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಜಯಕುಮಾರ್ ಎಸ್.ಪಾಟೀಲ್ ವಾದಿಸಿದರು. ಅದಲ್ಲದೆ, ಕೇಂದ್ರ ಸರ್ಕಾರ ಕೂಡ ಯಾವ ಕಾರಣಕ್ಕಾಗಿ ನಿಷೇಧವನ್ನು ಮಾಡಲಾಗಿದೆ ಎನ್ನುವ ವಿಚಾರವನ್ನು ಸಮರ್ಥಿಸಿಕೊಳ್ಳಲು ವಿಫಲವಾಗಿದೆ ಎಂದು ಅರ್ಜಿದಾರರ ಪರ ವಕೀಲರು ಮಾತನಾಡಿದ್ದಾರೆ.

ಮಂಗಳೂರು ಬ್ಲಾಸ್ಟ್‌ ಆರೋಪಿ ಶಾರಿಕ್‌ಗೆ ಪಿಎಫ್ಐ ಸಂಪರ್ಕ..?

ಅಪರಾಧದ ವಿವಿಧ ಘಟನೆಗಳ ಬಗ್ಗೆ ಕೇಂದ್ರವು ನಿರ್ಧಾರವನ್ನು ತೆಗೆದುಕೊಂಡಿದೆ ಮತ್ತು ಇದು ಸಂವಿಧಾನದ 19 ನೇ ವಿಧಿಯ ಅಡಿಯಲ್ಲಿ ನೀಡಲಾದ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ನಿರ್ಬಂಧಿಸುತ್ತದೆ ಎಂದು ಮನವಿಯಲ್ಲಿ ಹೇಳಲಾಗಿತ್ತು.

ಮಂಗಳೂರು ಸ್ಫೋಟಕ್ಕೆ ಕಾಂಗ್ರೆಸ್‌ ನೇರ ಹೊಣೆ: ಮಹೇಶ್ ಟೆಂಗಿನಕಾಯಿ ಗಂಭೀರ ಆರೋಪ

ಪ್ರಕರಣದ ಕುರಿತಾಗಿ ಎಲ್ಲರ ವಾದವನ್ನೂ ಆಲಿಸಿದ ಕೋರ್ಟ್‌, ಸೋಮವಾರ ತೀರ್ಪನ್ನು ಕಾಯ್ದಿರಿಸಿತ್ತು. 2007-08ರಲ್ಲಿ ಕರ್ನಾಟಕ ಸೊಸೈಟೀಸ್‌ ರಿಜಿಸ್ಟ್ರೇಷನ್‌ ಕಾಯ್ದೆಯ ಅಡಿ ನೋಂದಣಿ ಮಾಡಲಾಗಿರುವ ಸಂಘಟನೆ. ಸಮಾಜದ  ಕೆಳ ಹಂತದ ನಾಗರೀಕರನ್ನು ಮೇಲೆತ್ತುವ ಸಲುವಾಗಿ ಈ ಸಂಘಟನೆ ಕೆಲಸ ಮಾಡುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಹಲವಾರು ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಸಂಸ್ಥೆಯನ್ನು ಸಾಕಷ್ಟು ಮಂದಿ ಫಾಲೋ ಮಾಡುತ್ತಿದ್ದಾರೆ. ಈ ಸಂಘಟನೆಯಿಂದ ಹಲವಾರು ಜನರಿಗೆ ಪ್ರಯೋಜನವಾಗಿದೆ. ಆದರೆ, ಸರ್ಕಾರ ಯಾವುದೇ ಕಾರಣ ನೀಡದೇ, ಯುಎಪಿಎ ಕಾಯ್ದೆಯಡಿ ಇದನ್ನು ನಿಷೇಧಿಸಿರುವುದು ಸಂವಿಧಾನ ಬಾಹಿರ ಎಂದು ತಿಳಿಸಲಾಗಿದೆ. ಸೆಪ್ಟೆಂಬರ್‌ನಲ್ಲಿ, ಕೇಂದ್ರವು PFI ಅನ್ನು 'ಕಾನೂನುಬಾಹಿರ ಸಂಘ' ಎಂದು ಘೋಷಿಸಿತು ಮತ್ತು ಅದನ್ನು ಮುಂದಿನ ಐದು ವರ್ಷಗಳವರೆಗೆ ನಿಷೇಧ ಹೇರಿತ್ತು.

Follow Us:
Download App:
  • android
  • ios