Asianet Suvarna News Asianet Suvarna News

 ಚಾ.ನಗರಕ್ಕೆ ಭೇಟಿ ಕೊಟ್ರೆ ಅಧಿಕಾರ ಹೋಗುತ್ತೆನ್ನುವುದು ಸುಳ್ಳು:ಸಿಎಂ

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತೆ ಅನ್ನೋ‌ ವಿಚಾರ ಸುಳ್ಳು. ನಾನು ಯಾವಾಗಲೂ ಗಟ್ಟಿಯಾಗಿಯೆ ಇದ್ದೇನೆ ಗಟ್ಟಿಯಾಗೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

The power will go away if you visit Chamarajanagar is false says cm siddaramaiah rav
Author
First Published Sep 27, 2023, 1:12 AM IST

ಮೈಸೂರು (ಸೆ.27):  ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತೆ ಅನ್ನೋ‌ ವಿಚಾರ ಸುಳ್ಳು. ನಾನು ಯಾವಾಗಲೂ ಗಟ್ಟಿಯಾಗಿಯೆ ಇದ್ದೇನೆ ಗಟ್ಟಿಯಾಗೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತಾವು ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗಾರರು ಮಂಗಳವಾರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಲ್ಲಿಗೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುವುದು ಸುಳ್ಳು ಅಪವಾದ ಎಂದರು.

ಇದೇ ವೇಳೆ ಸಿದ್ದರಾಮಯ್ಯ ಜತೆಗಿದ್ದ ಸಚಿವರಾದ ಡಾ.ಎಚ್‌.ಸಿ.ಮಹದೇವಪ್ಪ ಮತ್ತು ಕೆ.ವೆಂಕಟೇಶ್‌ ಕೂಡ, ಚಾಮರಾಜನಗರಕ್ಕೆ ಮುಖ್ಯಮಂತ್ರಿ ಹೋಗುತ್ತಿರುವುದು ಗಟ್ಟಿಯಾಗಿ ಇರುವುದಕ್ಕೆ ಎಂದು ಹಾಸ್ಯ ಚಟಾಕಿ ಹಾರಿಸಿದರು.

ದಲಿತಕೇರಿಯಲ್ಲಿ ಪೇಜಾವರ ಶ್ರೀ ಪಾದಯಾತ್ರೆ ಅದ್ಧೂರಿ ಸ್ವಾಗತ 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ರಾತ್ರಿ ಚಾಮರಾಜನಗರದಲ್ಲೇ ಉಳಿದುಕೊಳ್ಳಲಿದ್ದು, ಬುಧವಾರ ಬೆಳಗ್ಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಚಾಮರಾಜನಗರದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

Follow Us:
Download App:
  • android
  • ios