ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಿರುಗೇಟು ನೀಡಿದ್ದಾರೆ.
ನವದೆಹಲಿ: ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಿರುಗೇಟು ನೀಡಿದ್ದಾರೆ.
ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ‘ರಾಜ್ಯದಲ್ಲಿನ ದುರಾಡಳಿತವನ್ನು ಮರೆಮಾಚಲು ಕಾಂಗ್ರೆಸ್‌ನ ಹಲವಾರು ನಾಟಕಗಳು. 1. ಜಾತಿ ಸರ್ವೇ, 2. ಗ್ರೇಟರ್ ಬೆಂಗಳೂರು, 3. ಮಂತ್ರಿಮಂಡಲ ವಿಸ್ತಾರ, 4. ಮುಖ್ಯಮಂತ್ರಿ ಬದಲಾವಣೆ, ಈಗ ಆರೆಸ್ಸೆಸ್ ನಿಷೇಧ’ ಎಂದು ಪರೋಕ್ಷವಾಗಿ ಖರ್ಗೆ ವಿರುದ್ಧ ಹರಿಹಾಯ್ದಿದ್ದಾರೆ.
ಬೆದರಿಕೆ ಕರೆಗಳಿಗೆ ಜಗ್ಗಲಾರೆ, ಹೋರಾಟ ನಿಲ್ಲಿಸಲಾರೆ: ಸಚಿವ ಪ್ರಿಯಾಂಕ್ ಖರ್ಗೆ ಗುಡುಗು!
ಬೆಂಗಳೂರು: ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಹಾಗೂ ಕುಟುಂಬದ ವಿರುದ್ಧ ಬಂದಿರುವ ಬೆದರಿಕೆ ಕರೆಗಳ ಬಗ್ಗೆ ಗಂಭೀರವಾಗಿ ಪ್ರತಿಕ್ರಿಯಿಸಿದ್ದು, ಇಂತಹ ಬೆದರಿಕೆಗಳ ನಡುವೆಯೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂಬ ದೃಢ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಮಂಗಳವಾರ ಅವರು ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತನಾಡಿ ಈ ಕುರಿತು ವಿವರ ನೀಡಿದರು.
ಪ್ರಿಯಾಂಕ್ ಖರ್ಗೆ, ಹಿಂದಿನ ಸರ್ಕಾರದ ಅವಧಿಯಲ್ಲಿಯೇ ನಾವು ಧ್ವನಿ ಎತ್ತಿದಾಗಲೆಲ್ಲಾ ಬೆದರಿಕೆ ಕರೆಗಳು ಬಂದಿದ್ದವು. ನನ್ನ ತಂದೆ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸಹ ಲ್ಯಾಂಡ್ ಲೈನ್ ಫೋನ್ ಮೂಲಕ ಹಲವು ಬಾರಿ ಬೆದರಿಕೆ ಹಾಕಲಾಗಿತ್ತು. ಈಗಲೂ ಸಫ್ದರ್ ಜಂಗ್ ಪೊಲೀಸ್ ಠಾಣೆಯಲ್ಲಿ ನಮ್ಮ ದೂರು ದಾಖಲಾಗಿರುವುದು ಇದೆ. ಅವರು ಬೆಂಗಳೂರಿನ ಮನೆಯಲ್ಲಿ ಇದ್ದಾಗಲೂ ರಾತ್ರಿ ಒಂದು ಗಂಟೆಯ ಸಮಯದಲ್ಲಿ ಲ್ಯಾಂಡ್ ಲೈನ್‌ಗೆ ಕರೆ ಮಾಡಿ ಬೆದರಿಕೆ ಹಾಕಿದ ಘಟನೆಗಳೂ ನಡೆದಿವೆ,” ಎಂದು ಅವರು ಹೇಳಿದರು.
ಅವರು ಮುಂದುವರೆದು, “ಇದೇ ರೀತಿಯ ಘಟನೆಗಳು ನಮ್ಮ ಕುಟುಂಬಕ್ಕೆ ಹೊಸದಲ್ಲ. ಈ ಎಲ್ಲವನ್ನು ನಾವು ಎದುರಿಸುತ್ತಲೇ ಬಂದಿದ್ದೇವೆ. ಕುಟುಂಬದ ಇತರ ಸದಸ್ಯರಿಗೆ ಕರೆಗಳು ಬಂದಿಲ್ಲದಿದ್ದರೂ ನನಗೆ ಮಾತ್ರ ನಿರಂತರವಾಗಿ ವಾಟ್ಸಪ್ ಕಾಲ್‌ಗಳು ಹಾಗೂ ಬೆದರಿಕೆ ಕರೆಗಳು ಬರುತ್ತಿವೆ. ಎಫ್‌ಐಆರ್ ದಾಖಲಿಸುವ ಅವಕಾಶ ಇದ್ದರೂ, ಇವು ಎನ್‌ಕ್ರಿಪ್ಟೆಡ್ ಕಾಲ್‌ಗಳಾಗಿರುವುದರಿಂದ ಟ್ರೇಸ್ ಮಾಡುವುದು ಕಷ್ಟಕರ. ಆದ್ದರಿಂದ ಭಯಪಡುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷದಲ್ಲಿದ್ದಾಗಲೂ ಹಿಂದೆ ಸರಿಯಲಿಲ್ಲ, ಆಡಳಿತ ಪಕ್ಷದಲ್ಲಿರುವಾಗ ಹಿಂದೆ ಸರಿಯುವುದೆಂದರೆ ಪ್ರಶ್ನೆಯೇ ಇಲ್ಲ,” ಎಂದು ಖರ್ಗೆ ತೀವ್ರ ಪ್ರತಿಕ್ರಿಯೆ ನೀಡಿದರು.
