ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಒಳ ಗುತ್ತಿಗೆ ನೌಕರರು ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಧರಣಿ 29ನೇ ದಿನಕ್ಕೆ ಕಾಲಿರಿಸಿದೆ.
ಬೆಂಗಳೂರು (ಮಾ.14) : ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ಒಳ ಗುತ್ತಿಗೆ ನೌಕರರು ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಧರಣಿ 29ನೇ ದಿನಕ್ಕೆ ಕಾಲಿರಿಸಿದೆ.
ಮಣಿಪುರ, ರಾಜಸ್ಥಾನದಲ್ಲಿ ಎನ್‌ಎಚ್‌ಎಂ ನೌಕರರನ್ನು ಕಾಯಂ ಮಾಡಲಾಗಿದೆ. ಪಂಜಾಬ್, ಒರಿಸ್ಸಾ, ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ಮಧ್ಯಪ್ರದೇಶ ರಾಜ್ಯಗಳಲ್ಲಿ ಕಾಯಂ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಹಾಗಾಗಿ 56 ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯದ 30 ಸಾವಿರ ನೌಕರರನ್ನೂ ಕರ್ನಾಟಕ ಸರ್ಕಾರ ಕಾಯಂ ಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ತಮಗೆ ಕನಿಷ್ಠ ವೇತನ ನೀಡುತ್ತಿಲ್ಲ. ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಲ್ಲ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ಇದರಿಂದ ಸರ್ಕಾರ ಇತ್ತೀಚೆಗೆ ಹೆಚ್ಚಳ ಮಾಡಿರುವ ಶೇ.15ರಷ್ಟುವೇತನ ಯಾವುದಕ್ಕೂ ಸಾಕಾಗುವುದಿಲ್ಲ. ಆದ್ದರಿಂದ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಫೆ.13ರಿಂದ ಧರಣಿ ನಡೆಸುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಆಸ್ಪತ್ರೆಗೆ ಹೋಗುವ ಸಾರ್ವಜನಿಕರೇ ಎಚ್ಚರ: ಇಂದಿನಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ವ್ಯತ್ಯಯ
