Asianet Suvarna News Asianet Suvarna News

5, 8 ಮತ್ತು 9ನೇ ತರಗತಿಗೆ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ತಡೆ, ಪರೀಕ್ಷೆ ಮುಂದೂಡಿದ ಶಿಕ್ಷಣ ಇಲಾಖೆ

ಮಹತ್ವದ ಬೆಳವಣಿಗೆಯಲ್ಲಿ ಈಗಾಗಲೇ ಆರಂಭವಾಗಿರುವ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ್ದು, ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ.

The Supreme Court stayed 5, 8 and 9 Class  board exam exams postponed at bengaluru rav
Author
First Published Mar 12, 2024, 10:14 PM IST

ಬೆಂಗಳೂರು (ಮಾ.12): ಮಹತ್ವದ ಬೆಳವಣಿಗೆಯಲ್ಲಿ ಈಗಾಗಲೇ ಆರಂಭವಾಗಿರುವ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ್ದು, ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ.

5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್‌ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪರೀಕ್ಷೆಗಳನ್ನು ನಡೆಸದಂತೆ ತಡೆ ನೀಡಿದೆ.

5, 8, 9ನೇತರಗತಿ ಮಕ್ಕಳಿಗೆ ಇಂದಿನಿಂದ ಬೋರ್ಡ್‌ ಪರೀಕ್ಷೆ: 28.14 ಲಕ್ಷ ವಿದ್ಯಾರ್ಥಿಗಳು ಭಾಗಿ

ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ 5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಶಿಕ್ಷಣ ಇಲಾಖೆ ಮುಂದೂಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ ಏಕ ಸದಸ್ಯ ಪೀಠ ಮಾರ್ಚ್ 6 ರಂದು ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು.

ಸರ್ಕಾರ ಹೊರಡಿಸಿದ್ದ ಸುತ್ತೋಲೆ ಎತ್ತಿ ಹಿಡಿದ ಹೈಕೋರ್ಟ್, 5,8,9,11ನೇ ತರಗತಿ ಬೋರ್ಡ್ ಪರೀಕ್ಷೆಗೆ ಅನುಮತಿ!

ರಾಜ್ಯಾದ್ಯಂತ 45,000 ಶಾಲೆಗಳ 28 ಲಕ್ಷ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯುತ್ತಿದ್ದು, ಅವರ ಭವಿಷ್ಯ ಈಗ ಅತಂತ್ರವಾಗಿದೆ. ಇನ್ನು 11 ತರಗತಿ ಪರೀಕ್ಷೆಗಳು ಈಗಾಗಲೇ ಫೆಬ್ರವರಿ 28 ರಂದೇ ಮುಕ್ತಾಯಗೊಂಡಿವೆ. 5, 8 ಮತ್ತು 9ನೇ ತರಗತಿಗೆ ಮಾರ್ಚ್ 11 ರಿಂದ ಪರೀಕ್ಷೆಗಳು ಆರಂಭವಾಗಿತ್ತು

Follow Us:
Download App:
  • android
  • ios