ಯೋಗೇಶ್ ಗೌಡ ಕೊ*ಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಭವಿಷ್ಯವನ್ನು ಸುಪ್ರೀಂ ಕೋರ್ಟ್ ಇಂದು ನಿರ್ಧರಿಸಲಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮೇಲ್ಮನವಿಯ ತೀರ್ಪು ಪ್ರಕಟವಾಗಲಿದೆ.

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊ*ಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಅಥವಾ ಜೈಲು ಶಿಕ್ಷೆಯ ಬಗ್ಗೆ ಬುಧವಾರ ತೀರ್ಮಾನ ಆಗಲಿದೆ. ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಕುಲಕರ್ಣಿ ಭವಿಷ್ಯ ನಿರ್ಧಾರ ಆಗಲಿದೆ. ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ 2026ರ ಏಪ್ರಿಲ್‌ನಲ್ಲಿ ವಿನಯ್‌ ಕುಲಕರ್ಣಿ ಅಪರಾಧಿ ಎಂದು ಜನಪ್ರತಿನಿಧಿ ನ್ಯಾಯಾಲಯ ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದರಿಂದಾಗಿ ಅವರು ಜೈಲಿಗೆ ಹೋಗಿದ್ದರು. ಇದನ್ನು ಪ್ರಶ್ನಿಸಿ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಜೂನ್‌ ತಿಂಗಳಲ್ಲಿನಲ್ಲಿ ಹೈಕೋರ್ಟ್‌ ಜಾಮೀನು ನೀಡಿತ್ತು. ಇದರಿಂದಾಗಿ ವಿನಯ್‌ ಜೈಲಿನಿಂದ ಬಿಡುಗಡೆ ಆಗಿದ್ದರು. ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿತ್ತು.

ನ್ಯಾ.ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿತ್ತು. ಪೀಠವು ಬುಧವಾರ ತೀರ್ಪು ಪ್ರಕಟಿಸಲಿದೆ.