Asianet Suvarna News Asianet Suvarna News

ರಾಜ್ಯದಲ್ಲೀಗ ಕುಡಿಯುವ ನೀರು ಸಮಸ್ಯೆ ಇಲ್ಲ: ಸಿದ್ದರಾಮಯ್ಯ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಶೇ.100ರಷ್ಟು ಬಿತ್ತನೆಯಾಗುವ ನಿರೀಕ್ಷೆಯಿದೆ. ಹಾವೇರಿಯಲ್ಲಿ ಈಗಾಗಲೇ ಶೇ.87ರಷ್ಟು ಬಿತ್ತನೆಯಾಗಿದೆ. ಬಹುತೇಕ ಜಲಾಶಯಗಳಿಗೆ ನೀರು ಹರಿದು ಬರುತ್ತಿರುವುದು ಸರ್ಕಾರ ಹಾಗೂ ರೈತರಿಗೆ ತೀವ್ರ ಸಂತಸ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

There is no drinking water problem in state Says CM Siddaramaiah gvd
Author
First Published Jul 27, 2023, 4:23 AM IST

ಬೆಂಗಳೂರು (ಜು.27): ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಶೇ.100ರಷ್ಟು ಬಿತ್ತನೆಯಾಗುವ ನಿರೀಕ್ಷೆಯಿದೆ. ಹಾವೇರಿಯಲ್ಲಿ ಈಗಾಗಲೇ ಶೇ.87ರಷ್ಟು ಬಿತ್ತನೆಯಾಗಿದೆ. ಬಹುತೇಕ ಜಲಾಶಯಗಳಿಗೆ ನೀರು ಹರಿದು ಬರುತ್ತಿರುವುದು ಸರ್ಕಾರ ಹಾಗೂ ರೈತರಿಗೆ ತೀವ್ರ ಸಂತಸ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕ ಉದ್ಯಾನದಲ್ಲಿ ರಾಷ್ಟ್ರೀಯ ಸೈನಿಕ ಸ್ಮಾರಕ ಟ್ರಸ್ಟ್‌ ವತಿಯಿಂದ ನಡೆದ ಕಾರ್ಗಿಲ್‌ ವಿಜಯ್‌ ದಿವಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾರ್ಗಿಲ್‌ ಯುದ್ಧದಲ್ಲಿ ಸುಮಾರು 524 ಯೋಧರು ದುರ್ಗಮ ಸ್ಥಳದಲ್ಲಿ ಹೋರಾಡಿ ದೇಶವನ್ನು ರಕ್ಷಣೆ ಮಾಡುವ ಕೆಲಸ ಮಾಡಿದ್ದಾರೆ. ತ್ಯಾಗ, ಬಲಿದಾನ ಮಾಡಿದ ಎಲ್ಲ ಸೈನಿಕರ ಆತ್ಮಕ್ಕೆ ಶಾಂತಿ ಕೋರು ಸ್ಮರಿಸುವುದು ನಮ್ಮ ಕರ್ತವ್ಯ. ಅವರ ಜೀವನ ಇಂದಿನ ಯುವಕರಿಗೆ ಸ್ಫೂರ್ತಿ ಹಾಗೂ ಮಾರ್ಗದರ್ಶನ ನೀಡುವಂತಹದ್ದು ಎಂದು ಹೇಳಿದರು. ಇನ್ನು ರಾಜ್ಯದ ಬಗ್ಗೆ ಹೇಳುವುದಾದರೆ ರಾಜ್ಯದಲ್ಲಿ ಮಳೆ ಜೋರಾಗಿ ಬಿತ್ತನೆ ಚುರುಕಾಗಿದೆ. ಮಳೆಯಿಂದಾಗಿ ಕೈ ಮೀರಿ ಹೋಗುವ ಸ್ಥಿತಿ ನಿರ್ಮಾಣವಾಗಿಲ್ಲ.

ಮಹದಾಯಿ ವಿಷಯದಲ್ಲಿ ರಾಜ್ಯದ ರೈತರಿಗೆ ಅನ್ಯಾಯವಾಗಲು ಬಿಡಲ್ಲ​​​​​: ಸಿದ್ದರಾಮಯ್ಯ

ಕೆಆರ್‌ಎಸ್‌, ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ ಸೇರಿದಂತೆ ಎಲ್ಲಾ ಜಲಾಶಯಗಳಿಗೆ ನೀರು ಬರುತ್ತಿರುವುದು ಖುಷಿ ನೀಡಿದೆ. ಎಲ್ಲೆಡೆ ಮಳೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಟ್ಯಾಂಕರ್‌ ನೀರಿನ ಸರಬರಾಜು ಮಾಡಲಾಗುತ್ತಿತ್ತು. ಆದರೆ ಈಗ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ. ರಾಜ್ಯದಲ್ಲಿ ಉಂಟಾಗಿದ್ದ ಬರದ ಲಕ್ಷಣಗಳು ನೀಗಿವೆ ಎಂದು ಹೇಳಿದರು.

ಶಾಸಕರ ಹೆಸರಿನಲ್ಲಿ ನಕಲಿ ಪತ್ರ: ಶಾಸಕರು ಪತ್ರ ಬರೆದಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪತ್ರವನ್ನು ಶಾಸಕ ಬಿ.ಆರ್‌.ಪಾಟೀಲ ಅವರೇ ನಕಲಿ ಪತ್ರ ಎಂದು ಹೇಳಿದ್ದಾರೆ. ಆದರೂ ಪತ್ರಿಕೆಗಳಲ್ಲಿ ಪ್ರಚಾರ ಮಾಡಲಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಬರೆದಿದ್ದಾರೆ. ಇಂತಹ ಮಂತ್ರಿ ಎಂದು ಹೆಸರಿಸಿಲ್ಲ. ಆ ಬಗ್ಗೆ ಶಾಸಕಾಂಗ ಪಕ್ಷದಲ್ಲಿ ಚರ್ಚಿಸುತ್ತೇವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್‌, ಕಾರ್ಗಿಲ್‌ ಯುದ್ದದಲ್ಲಿ ಮಡಿದವರ ಕುಟುಂಬ ಸದಸ್ಯರು ಸೇರಿ ಹಲವರು ಭಾಗವಹಿಸಿದ್ದರು. ಕಾರ್ಯಕ್ರಮದ ವೇಳೆ ಏರ್‌ ಕಮೋಡರ್‌ ಎಂ.ಕೆ. ಚಂದ್ರಶೇಖರ್‌ ಅವರ ಬಳಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್‌ ಅವರು ಉಭಯ ಕುಶಲೋಪರಿ ವಿಚಾರಿಸಿದರು.

ಸಂತ್ರಸ್ತರಿಗೆ ಕೂಡಲೇ ಸ್ಪಂದಿಸಿ, ಪರಿ​ಹಾ​ರ ಕಲ್ಪಿ​ಸಿ: ಸಚಿವ ಮಧು ಬಂಗಾರಪ್ಪ

31ಕ್ಕೆ 3 ಮಳೆ ಜಿಲ್ಲೆಗಳಿಗೆ ಭೇಟಿ: ರಾಜ್ಯದಲ್ಲಿ ತೀವ್ರ ಮಳೆಯಾಗುತ್ತಿದ್ದು ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಕಷ್ಟಗಳನ್ನು ಆಲಿಸುತ್ತೇನೆ. ಸೋಮವಾರ ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದೇನೆ. ಮಂಗಳವಾರ ಸಚಿವ ಕೃಷ್ಣ ಬೈರೇಗೌಡ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದರು. ಪ್ರವಾಹ ಪೀಡಿತರ ಸಮಸ್ಯೆಗಳ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Follow Us:
Download App:
  • android
  • ios