ಬೆಂಗಳೂರು ವಿಮಾನ ನಿಲ್ದಾಣದ ಒತ್ತಡ ಕಡಿಮೆ ಮಾಡಲು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರವು 10 ಸ್ಥಳಗಳ ಪೈಕಿ 3 ಸ್ಥಳಗಳನ್ನು ಅಂತಿಮಗೊಳಿಸಿ ಕೇಂದ್ರಕ್ಕೆ ವರದಿ ಸಲ್ಲಿಸಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಚೂಡಹಳ್ಳಿ ಮತ್ತು ಸೋಮನಹಳ್ಳಿ, ಹಾಗೂ ಮಾಗಡಿ ತಾಲೂಕಿನ ನೆಲಮಂಗಲದ ಹತ್ತಿರದ ಸ್ಥಳಗಳನ್ನು ಗುರುತಿಸಲಾಗಿದೆ. ಐಡೆಕ್ ಸಂಸ್ಥೆಯು ತಾಂತ್ರಿಕ ಅಧ್ಯಯನ ನಡೆಸಿ ಈ ಸ್ಥಳಗಳನ್ನು ಶಿಫಾರಸು ಮಾಡಿದೆ.

ಬೆಂಗಳೂರು (ಮಾ.20): ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, 10 ಸ್ಥಳಗಳಲ್ಲಿ ಇದೀಗ ಕೇವಲ 3 ಸ್ಥಳಗಳನ್ನು ಅಂತಿಮಗೊಳಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ವರದಿ ಕಳುಹಿಸಿದ್ದು, ಈ ಮೂರು ಸ್ಥಳಗಳಲ್ಲಿ ಕೇಂದ್ರ ನಿಗದಿ ಮಾಡಿದ ಸ್ಥಳದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತದೆ.

ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ನಿಗದಿ ಮಾಡಲಾಗಿದೆ. ಈಗ ರಾಜ್ಯ ಸರ್ಕಾರದಿಂದ ಅಂತಿಮವಾಗಿ 3 ಸ್ಥಳ ಗುರುತು ಮಾಡಿದೆ. ಈ ಮೂರು ಸ್ಥಳ ಗುರುತಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದು, ಇದು ಅಂತಿಮಗೊಳಿಸಿದ ಸ್ಥಳದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತದೆ. ಹಾಗಾದರೆ, ರಾಜ್ಯ ಸರ್ಕಾರ ಗುರುತು ಮಾಡಿರುವ 3 ಅಂತಿಮ ಸ್ಥಳಗಳು ಯಾವುವು? ಎಂಬ ಮಾಹಿತಿ ಇಲ್ಲಿದೆ ನೋಡಿ..

* ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ಚೂಡಹಳ್ಳಿ ಹತ್ತಿರ
* ಬೆಂಗಳೂರು ದಕ್ಷಿಣ ತಾಲೂಕಿನ ಸೋಮನಹಳ್ಳಿ ಹತ್ತಿರ
* ಮಾಗಡಿ ತಾಲೂಕಿನ ನೆಲಮಂಗಲದ ಹತ್ತಿರ

ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2033ಕ್ಕೆ ವಿಮಾನ ಸಂಚಾರ ಆರಂಭ: ಸಚಿವ ಎಂ.ಬಿ. ಪಾಟೀಲ್

ಐಡೆಕ್ ಸಂಸ್ಥೆ ಗುರುತಿಸಿರುವ ಸ್ಥಳಗಳನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿ ಆಯ್ಕೆ ಮಾಡಿದೆ. ಈ ಬಗ್ಗೆ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ನೀಡಿದ್ದ ಐಡೆಕ್ ಸಂಸ್ಥೆ. ತಾಂತ್ರಿಕ ಸಂಭಾವ್ಯತೆ, ರಸ್ತೆ ಸಂಪರ್ಕ, ಮೆಟ್ರೋ ಸೇರಿದಂತೆ ಎಲ್ಲಾ ರೀತಿಯ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಕೆ ಮಾಡಿತ್ತು. ಈ ವರದಿ ಆಧರಿಸಿ ರಾಜಗ್ಯದಿಂದ ಕೇಂದ್ರ ಸರ್ಕಾರಕ್ಕೆ ಈ ಸ್ಥಳಗಳನ್ನು ಅಂತಿಮಗೊಳಿಸಿ ಪ್ರಸ್ತಾವನೆ ಸಲ್ಲಿಕ ಮಾಡಲಾಗಿದೆ.

ಹೆಚ್‌ಎಎಲ್ ವಿಮಾನ ನಿಲ್ದಾಣ ಅಭಿವೃದ್ಧಿ ಮಾಡಿ: ಹೆಚ್.ಎ.ಎಲ್. ವಿಮಾನ ನಿಲ್ದಾಣವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (Airports Authority of India) ಹಾಗೂ ಹೆಚ್.ಎ.ಎಲ್. ಇವರ ವ್ಯಾಪ್ತಿಯಲ್ಲಿರುತ್ತದೆ. ಹೆಚ್.ಎ.ಎಲ್. ವಿಮಾನ ನಿಲ್ದಾಣವನ್ನು ಡೊಮೆಸ್ಟಿಕ್ ವಿಮಾನ ನಿಲ್ದಾಣವನ್ನಾಗಿ ಅಭಿವೃದ್ಧಿಪಡಿಸುವ ಬಗ್ಗೆ ದಿನಾಂಕ: 16.01.2025 ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವನ್ನು (Ministry of Civil Aviation, Government of India) ಕೋರಲಾಗಿದೆ.