ತಿಂಗಳ ಕೊನೆಗೆ ಮೋಡ ಬಿತ್ತನೆ ಬಗ್ಗೆ ಚಿಂತನೆ: ಸಚಿವ ಕೃಷ್ಣ ಭೈರೇಗೌಡ

ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಇದೆ. ಜುಲೈ ಕೊನೆಯ ವಾರದವರೆಗೆ ನೋಡಿ ಮೋಡ ಬಿತ್ತನೆ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

Thinking about cloud seeding at the end of this month says Minister Krishna Bhairegowda at karwar rav

ಕಾರವಾರ (ಜು.9) : ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಇದೆ. ಜುಲೈ ಕೊನೆಯ ವಾರದವರೆಗೆ ನೋಡಿ ಮೋಡ ಬಿತ್ತನೆ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಶನಿವಾರ ಕುಮಟಾ ತಾಲೂಕಿನ ಪೋಸ್ಟ್‌ ಬೆಟ್ಕುಳಿ ಗ್ರಾಮದ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಅಧಿಕಾರಿಗಳ ವರ್ಗಕ್ಕೆ ಚುರುಕು ಮುಟ್ಟಿಸಲು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದೇನೆ. ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಉಂಟಾಗಿದೆ. ಮಳೆಯಿಂದಾಗಿ ರಾಜ್ಯದಲ್ಲಿ 21 ಜನರು ಹಾಗೂ 40ಕ್ಕೂ ಹೆಚ್ಚು ಜಾನುವಾರಗಳು ಸಾವನ್ನಪ್ಪಿವೆ. ಹಲವು ಮನೆಗಳಿಗೆ ಹಾನಿಯಾಗಿದ್ದು, ಹಾನಿಯಾದ ಮನೆಗಳಿಗೆ 1.25 ಲಕ್ಷ ರು. ಪರಿಹಾರ ನೀಡಲಾಗುತ್ತಿದೆ. ಸಂಪೂರ್ಣ ಮನೆ ಹಾನಿಯಾದವರಿಗೆ ಮನೆ ಕಟ್ಟಿಸಿಕೊಡುವ ಕೆಲಸ ಕೂಡಾ ಸರ್ಕಾರ ಮಾಡಲಿದೆ. ಮಳೆ ಹಾನಿಗೆ ಸರ್ಕಾರ ಪರಿಹಾರ ಕೊಡಲು ಸಿದ್ಧವಿದೆ ಎಂದರು.

ವಿಪಕ್ಷ ನಾಯಕನ ಆಯ್ಕೆ ಮಾಡದ ಬಿಜೆಪಿಗೆ ಇದಕ್ಕಿಂತ ವೈಫಲ್ಯ ಬೇಕಾ?: ಸಚಿವ ಕೃಷ್ಣ ಬೈರೇಗೌಡ

ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಕೃಷ್ಣ ಭೈರೇಗೌಡ ಹೇಳಿದರು.

ಜೈನ ಮುನಿ ಹತ್ಯೆ ಮಾಡಿದವರ ವಿರುದ್ಧ ಕಾನೂನು ಕ್ರಮ:

ನಂದಿ ಪರ್ವತ ಆಶ್ರಮದ ಜೈನ ಮುನಿ ಹತ್ಯೆ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಸೂಕ್ತ ರೀತಿಯಲ್ಲಿ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಯಾರ ಮೇಲೂ ಹಲ್ಲೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ರಾಜ್ಯದಲ್ಲಿ ಶಾಂತಿ ಕಾಪಾಡುತ್ತೇವೆ ಎಂದು ಕಂದಾಯ ಸಚಿವರು ತಿಳಿಸಿದರು.

ತಲಾ 5 ಲಕ್ಷ ರು. ಪರಿಹಾರ ಘೋಷಣೆ:

ಕುಮಟಾ ತಾಲೂಕಿನ ಬೆಟ್ಕುಳಿಯಲ್ಲಿ ಪ್ರವಾಹಕ್ಕೆ ಬಲಿಯಾದ ಮೃತಪಟ್ಟಸತೀಶ ನಾಯ್ಕ ಹಾಗೂ ಉಲ್ಲಾಸ ಗಾವಡಿ ಮನೆಗಳಿಗೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಎರಡೂ ಕುಟುಂಬಗಳಿಗೆ ತಲಾ 5 ಲಕ್ಷ ರು. ಪರಿಹಾರ ಘೋಷಿಸಿದರು. ಕುಟುಂಬದವರಿಂದ ಮಾಹಿತಿ ಪಡೆದು ಅವರಿಗೆ ಸಾಂತ್ವನ ಹೇಳಿದರು.

ಜು.15 ಬಳಿಕ ಬರಪೀಡಿದ ಗ್ರಾಮಗಳ ಘೋಷಣೆ: ಸಚಿವ ಕೃಷ್ಣ ಬೈರೇಗೌಡ

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕುಮಟಾ ಶಾಸಕ ದಿನಕರ ಶೆಟ್ಟಿ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆಇದ್ದರು.

ಫೋಟೋ-7ಕೆ10- ಮೃತರ ನಿವಾಸಗಳಿಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದ ಸಚಿವರು.

Latest Videos
Follow Us:
Download App:
  • android
  • ios