Asianet Suvarna News Asianet Suvarna News

ಮಂಗಳೂರಿನಲ್ಲಿ ಒಂದಲ್ಲ 3 ಕಡೆ ಬಾಂಬ್: ವಿಮಾನ ಸ್ಥಗಿತಗೊಳಿಸಿ ತಪಾಸಣೆ!

ಒಂದಲ್ಲ, ಮೂರು ಕಡೆ ಬಾಂಬ್| ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಬೆನ್ನಲ್ಲೇ ಬೆದರಿಕೆ ಕರೆ| ಇಂಡಿಗೋ ವಿಮಾನ ಪ್ರಯಾಣ ಸ್ಥಗಿತ| ಎಲ್ಲಾ ಪ್ರಯಾಣಿಕರ ಬ್ಯಾಗ್ ತಪಾಸಣೆ

Threat Calls Of keeping Bomb in 3 Places Of Mangaluru international Airport
Author
Bangalore, First Published Jan 20, 2020, 4:55 PM IST

ಮಂಗಳೂರು[ಜ.20]: ಇಂದು ಸೋಮವಾರ ಬೆಳಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜೀವಂತ್ ಬಾಂಬ್ ಪತ್ತೆಯಾಗಿದ್ದು, ಕರಾವಳಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

"

ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ ಪೊಲೀಸರು, ವಿಮಾನ ನಿಲ್ದಾಣವನ್ನು ಸುತ್ತುವರೆದು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಈಗಾಗಲೇ ವಿಮಾನ ನಿಲ್ದಾಣದಿಂದ ಬಾಂಬನ್ನು ಕೆಂಜಾರು ಮೈದಾನಕ್ಕೆ ಯಶಶಸ್ವಿಯಾಗಿ ರವಾನಿಸಲಾಗಿದ್ದು, ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಆದರೀಗ ಈ ಆತಂಕದ ನಡುವೆಯೇ ಮತ್ತೊಂದು ಶಾಕಿಂಗ್ ಸುದ್ದಿ ಬಂದೆರಗಿದೆ.

ಮಂಗಳೂರು ಕೆಂಜಾರು ಮೈದಾನದಲ್ಲಿ ಬಾಂಬ್ ನಿಷ್ಕ್ರಿಯ ಪ್ರಕ್ರಿಯೆ!

ಹೌದು ಬಾಂಬ್ ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ನಡುವೆಯೇ ಸುಮಾರು 2 ಗಂಟೆ 57 ನಿಮಿಷಕ್ಕೆ ಪೊಲೀಸರಿಗೆ ಬೆದರಿಕೆ ಕರೆಯೊಂದು ಬಂದಿದೆ. ಕರೆ ಮಾಡಿದ ಅನಾಮಿಕರು ತಾವು ಒಟ್ಟು ಮೂರು ಕಡೆ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾರೆ. ಇದರಿಂದ ಮತ್ತಷ್ಟು ಆತಂಕ ನಿರ್ಮಾಣವಾಗಿದೆ. ಹೀಗಾಗಿ 3 ಗಂಟೆಗೆ ಮಂಗಳೂರಿನಿಂದ ಹೈದರಾಬಾದ್ ಗೆ ಟೇಕಾಫ್ ಆಗಬೇಕಿದ್ದ ವಿಮಾನವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸುಮಾರು  3 ಗಂಟೆಗೆ ಹೊರಡಬೇಕಿದ್ದ ಇಂಡಿಗೋ ಫ್ಲೈಟ್ ಸ್ಥಗಿತಗೊಳಿಸಿ, 160 ಪ್ರಯಾಣಿಕರನ್ನು ಇಳಿಸಿ ತಪಾಸಣೆ ನಡೆಸಲಾಗಿದೆ. ಅಲ್ಲದೇ ಎಲ್ಲಾ ಪ್ರಯಾಣಿಕರ ಬ್ಯಾಗ್ ಕೂಡಾ ತಪಾಸಣೆ ನಡೆಸಲಾಗಿದೆ.

ಮಂಗಳೂರು ಕೆಂಜಾರು ಮೈದಾನದಲ್ಲಿ ಬಾಂಬ್ ನಿಷ್ಕ್ರಿಯ ಪ್ರಕ್ರಿಯೆ!

ಗಣರಾಜ್ಯೋತ್ಸವ ಸಮೀಪಿಸುತ್ತಿರುವಾಗಲೇ ಜೀವಂತ ಬಾಂಬ್ ಪತ್ತೆಯಾಗಿರುವುದರಿಂದ ಎಲ್ಲೆಡೆ ಭದ್ರತೆ ಹಾಗೂ ತಪಾಸಣೆ ಹೆಚ್ಚಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಚಾಮರಾಜನಗರ ಜಿಲ್ಲೆಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಹೊರರಾಜ್ಯದಿಂದ ಬರುವ ವಾಹನಗಳ ತಪಾಸಣೆ ಆರಂಭಿಸಲಾಗಿದೆ. 

ಕೇರಳ, ತಮಿಳುನಾಡು, ಮೂಲೆಹೊಳೆ,ಕೆಕ್ಕನಹಳ್ಳ, ಪುಣಜನೂರು, ಪಾಲಾರ್, ಅರ್ಧನಾರಿಪುರ ಗಡಿ ಭಾಗದ ಚೆಕ್ ಪೋಸ್ಟ್ಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಅನುಮಾನಾಸ್ಪದ ವಾಹನಗಳ ತೀವ್ರ ತಪಾಸಣೆ ನಡೆಸಲಾಗುತ್ತಿದೆ.

ಮಂಗಳೂರು ಏರ್ಪೋರ್ಟ್‌ನಲ್ಲಿ ಸಜೀವ ಬಾಂಬ್ ಪತ್ತೆ!

ಜನವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us:
Download App:
  • android
  • ios