Asianet Suvarna News Asianet Suvarna News

ಮೂವರು ಡಿಸಿಎಂ ನೇಮಕ:ಲೋಕ ಚುನಾವಣೆಗೆ ಮುನ್ನವೇ ಕೈ ಪಾಳಯದಲ್ಲಿ ಕಲಹ!

2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಉಪಮುಖ್ಯಮಂತ್ರಿಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಆದರೆ, ಪಕ್ಷದ ನಾಯಕರು ಮಾತ್ರ ಕಲಹಗಳ ಮರೆ ಮಾಚರು ಲೋಕಸಭಾ ಚುನಾವಣೆಗೆ ಪಕ್ಷ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಮಾತುಕತೆ ನಡೆಸಿದ್ದಾರೆಂದು ಹೇಳಿದ್ದಾರೆ.

Three DCM demand issue An explosion of dissension in the Congress government at bengaluru rav
Author
First Published Dec 30, 2023, 2:14 PM IST

ಬೆಂಗಳೂರು (ಡಿ.30): 2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.

ಉಪಮುಖ್ಯಮಂತ್ರಿಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಆದರೆ, ಪಕ್ಷದ ನಾಯಕರು ಮಾತ್ರ ಕಲಹಗಳ ಮರೆ ಮಾಚರು ಲೋಕಸಭಾ ಚುನಾವಣೆಗೆ ಪಕ್ಷ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಮಾತುಕತೆ ನಡೆಸಿದ್ದಾರೆಂದು ಹೇಳಿದ್ದಾರೆ.

ಮಾತುಕತೆ ವೇಳೆ ಜಾರಿಕಿಹೊಳಿಯವರು ಎಸ್‌ಸಿ/ಎಸ್‌ಟಿ ಮತ್ತು ವೀರಶೈವ-ಲಿಂಗಾಯತ ಸಮುದಾಯಗಳ ನಾಯಕರಿಗೆ ಉಪ ಮುಖ್ಯಮಂತ್ರಿಗಳ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಸೂಚಿಸಿರುವ ಸಾಧ್ಯತೆಗಳಿವೆ ಎಂದು ಬಲ್ಲ ಮೂಲಗಳು ಮಾಹಿತಿ ನೀಡಿವೆ. ಹೀಗಾಗಿ ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ಮೋದಿಯವರ ವರ್ಚಸನ್ನು ಎದುರಿಸಬೇಕಾದ ಅಗತ್ಯವಿದ್ದು, ಈ ವೇಳೆ ಪಕ್ಷ ಕೂಡ ಜಾತಿ ಲೆಕ್ಕಾಚಾರದಲ್ಲಿಯೇ ತಂತ್ರ ರೂಪಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ರಾಮಮಂದಿರ ಉದ್ಘಾಟನೆ ಒಂದು ಸ್ಟಂಟ್; ಕೇಂದ್ರ ಸರ್ಕಾರದ ವಿರುದ್ಧ ಸಚಿವ ಡಿ ಸುಧಾಕರ್ ಕಿಡಿ

ಈ ನಡುವೆ ಜಾರಕಿಹೊಳಿಯವರ ಆಗ್ರಹವನ್ನು ಗೃಹ ಸಚಿವ ಪರಮೇಶ್ವರ್ ಅವರು ಸಮರ್ಥಿಸಿಕೊಂಡಿದ್ದಾರೆ. ಡಿಸಿಎಂ ಹುದ್ದೆ ಸಂಬಂಧಿಸಿ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯವನ್ನು ಹೈಕಮಾಂಡ್‌ ಮುಂದೆ ಹೇಳಿದ್ದಾರೆ. ಅದನ್ನು ಪರಿಗಣಿಸೋದು, ಬಿಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಅವರ ದೃಷ್ಟಿಯಲ್ಲಿ ಆಯಾ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಹುದ್ದೆ ಕೊಟ್ಟರೆ ಉತ್ತಮ. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಕಾಂಗ್ರೆಸ್‌ನತ್ತ ವಾಲಬಹುದು ಎಂಬ ಅಭಿಪ್ರಾಯ ಅವರಲ್ಲಿದೆ‌ ಎಂದು ಹೇಳಿದ್ದಾರೆ.

ಪರಮೇಶ್ವರ, ಸತೀಶ್ ಜಾರಕಿಹೊಳಿ ಮತ್ತು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಉಪಮುಖ್ಯಮಂತ್ರಿ ಸ್ಥಾನದ ರೇಸ್ ನಲ್ಲಿದ್ದಾರೆಂಬುದು ಇಲ್ಲಿ ಗಮನಾರ್ಹ ವಿಚಾರವಾಗಿದೆ.

ಎಸ್‌ಟಿ ಸಮುದಾಯದ ನಾಯಕ ಬಿ.ಶ್ರೀರಾಮುಲು ಅವರಿಗೆ ಡಿಸಿಎಂ ಹುದ್ದೆ ಭರವಸೆ ನೀಡಿದ್ದ ಬಿಜೆಪಿ, ಅಧಿಕಾರಕ್ಕೆ ಬಂದ ನಂತರ ಅವರಿಗೆ ಆ ಸ್ಥಾನವನ್ನು ನೀಡಿರಲಿಲ್ಲ. ಈ ನಡುವೆ ಸತೀಶ್ ಜಾರಕಿಹೊಳಿಯವರು ಸಮುದಾಯದ ಪ್ರಬಲ ನಾಯಕರಾಗಿ ಹೊರಹೊಮ್ಮುತ್ತಿರುವುದರಿಂದ ಕಾಂಗ್ರೆಸ್ ಇದನ್ನು ತಮ್ಮ ಲಾಭವಾಗಿ ಬಳಸಿಕೊಳ್ಳುವ ಸಾಧ್ಯತೆಗಳಿವೆ  ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರಿದ ಮಹಿಳೆಯರ 'ಶಕ್ತಿ' ಪ್ರದರ್ಶನ; ಕಂಡಕ್ಟರ್, ಡ್ರೈವರ್ ಮೇಲೆಯೇ ಮನಬಂದಂತೆ ಹಲ್ಲೆ ನಡೆಸಿದ ರೌಡಿ ಗ್ಯಾಂಗ್!

ಈ ಕುರಿತು ಪ್ರಶ್ನೆಗೆ ಉತ್ತರಿಸಿದ ಎಂ.ಬಿ.ಪಾಟೀಲ್ ಅವರು, ಹೆಚ್ಚುವರಿ ಉಪ ಮುಖ್ಯಮಂತ್ರಿ ಸ್ಥಾನದ ಕುರಿತು ಪಕ್ಷದೊಳಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಸತೀಶ್ ಅವರು ಈ ಹಿಂದೆಯೂ ಹೆಚ್ಚಿನ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವಂತೆ ಒತ್ತಾಯಿಸಿದ್ದರು. ನಾನು ಸಾರ್ವಜನಿಕವಾಗಿ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವುದಿಲ್ಲ. ಪಕ್ಷದ ಹೈಕಮಾಂಡ್ ಜೊತೆ ಮಾತನಾಡುತ್ತೇನೆಂದು ತಿಳಿಸಿದರು.

Follow Us:
Download App:
  • android
  • ios