ಕಾಫಿನಾಡಿಗೆ ಹುಲಿ ಉಗುರಿನ ಕಂಟಕ; ಅರಣ್ಯಾಧಿಕಾರಿ ಕೊರಳಲ್ಲೇ ಪೆಂಡೆಂಟ್!
ಹುಲಿ ಉಗುರು ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಕಿರುತೆರೆ ರಿಯಾಲಿಟಿ ಶೋ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬಳಿಕ ಸಾಲು ಸಾಲು ಜನರಿಗೆ ಕಂಟಕ ಶುರುವಾಗಿದೆ.

ಚಿಕ್ಕಮಗಳೂರು (ಅ.26): ಹುಲಿ ಉಗುರು ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಕಿರುತೆರೆ ರಿಯಾಲಿಟಿ ಶೋ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬಳಿಕ ಸಾಲು ಸಾಲು ಜನರಿಗೆ ಕಂಟಕ ಶುರುವಾಗಿದೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹುಲಿ ಉಗುರು ಧರಿಸಿದ್ದ ಸಾಲು ಸಾಲು ಜನರ ಬಂಧನವಾಗ್ತಿದೆ. ಖಾಂಡ್ಯಾದ ಇತಿಹಾಸ ಪ್ರಸಿದ್ಧ ಮಾರ್ಕಂಡೇಯ ದೇವಸ್ಥಾನದ ಇಬ್ಬರು ಅರ್ಚಕರು ಬಂಧನವಾಗಿರುವ ಬೆನ್ನಲ್ಲೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದ್ದು. ಈ ಪ್ರಕರಣದಲ್ಲಿ ಸ್ವತಃ ಅರಣ್ಯ ಇಲಾಖೆಯ ಅಧಿಕಾರಿಯೇ ಹುಲಿ ಉಗುರು ಪೆಂಡೆಂಟ್ ಧರಿಸಿರುವ ಫೋಟೊ ವೈರಲ್ ಆಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ಕೊರಳಲ್ಲೂ ಹುಲಿ ಉಗುರು ಪೆಂಡೆಂಟ್; ಅರೆಸ್ಟ್ ಆಗ್ತಾರಾ ಮಗ, ಅಳಿಯ?
ಹುಲಿ ಉಗುರು ಧರಿಸಿದ ಆರೋಪ ಕಳಸದ ಡಿಆರ್‌ಎಫ್ಓ ದರ್ಶನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೂಲದ ದರ್ಶನ್. ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದೂರು. ಆಲ್ದೂರು ವಲಯ ಅರಣ್ಯಾಧಿಕಾರಿಗೆ ಅರೆನೂರು ಗ್ರಾಮದ ಸುಪ್ರೀತ್, ಅಬ್ದುಲ್ ಎಂಬುವವರಿಂದ ದೂರು ದೂರು ದಾಖಲಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರು! ಇಕ್ಕಟ್ಟಿಗೆ ಸಿಲುಕಿತಾ ಕಾಂಗ್ರೆಸ್ ಸರ್ಕಾರ?
ಕಾನೂನು ಎಲ್ಲರಿಗೂ ಒಂದೇ ಸಂತೋಷ್, ಮಾರ್ಕಂಡೇಯ ದೇವಸ್ಥಾನದ ಅರ್ಚಕರು ಸೇರಿದಂತೆ ಅಮಾಯಕರ ಮೇಲೆ ಕ್ರಮ ಕೈಗೊಳ್ಳುವ ಅರಣ್ಯ ಇಲಾಖೆಯವರು ಆರ್‌ಎಫ್‌ಒ ದರ್ಶನ ಮೇಲೆಯೂ ಕ್ರಮ ತೆಗೆದುಕೊಳ್ಳಬೇಕು.ದೂರುದಾರ ಸುಪ್ರೀತ್