ಮಂಗಳೂರಿನಲ್ಲಿ ಹುಲಿವೇಷ ಕುಣಿತ ಸ್ಪರ್ಧೆ: ಪಿಲಿ ಪರ್ಬ ಕಾರ್ಯಕ್ರಮದಲ್ಲಿ ಭಾಗಿಯಾದ ನಟ ರಿಷಬ್ ಶೆಟ್ಟಿ

ಮಂಗಳೂರಿನಲ್ಲಿ ಹುಲಿವೇಷ ಕುಣಿತ ಸ್ಪರ್ಧೆ ನಡೆಯುತ್ತಿದ್ದು, ಸ್ಪರ್ಧಾಕೂಟಕ್ಕೆ ಅತಿಥಿಯಾಗಿ ನಟ ನಿರ್ದೇಶಕ ರಿಷಬ್ ಶೆಟ್ಟಿ ಆಗಮಿಸಿದ್ದಾರೆ. ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯುತ್ತಿರುವ ಪಿಲಿ ಪರ್ಬ ಕಾರ್ಯಕ್ರಮದಲ್ಲಿ ಕಾರ್ಯಕ್ರಮವು ನವರಾತ್ರಿ ಸಂದರ್ಭದಲ್ಲಿ ನಡೆಯಲಿದೆ. 

Tiger costume dance competition in Mangaluru Actor Rishab Shetty participates in Pili Parba event gvd

ಮಂಗಳೂರು (ಅ.12): ಮಂಗಳೂರಿನಲ್ಲಿ ಹುಲಿವೇಷ ಕುಣಿತ ಸ್ಪರ್ಧೆ ನಡೆಯುತ್ತಿದ್ದು, ಸ್ಪರ್ಧಾಕೂಟಕ್ಕೆ ಅತಿಥಿಯಾಗಿ ನಟ ನಿರ್ದೇಶಕ ರಿಷಬ್ ಶೆಟ್ಟಿ ಆಗಮಿಸಿದ್ದಾರೆ. ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯುತ್ತಿರುವ ಪಿಲಿ ಪರ್ಬ ಕಾರ್ಯಕ್ರಮದಲ್ಲಿ ಕಾರ್ಯಕ್ರಮವು ನವರಾತ್ರಿ ಸಂದರ್ಭದಲ್ಲಿ ನಡೆಯಲಿದೆ. ನಟ ರಿಷಬ್ ಶೆಟ್ಟಿಗೆ ನಟ ಪ್ರಮೋದ್ ಶೆಟ್ಟಿ ಸಾಥ್ ಕೊಟ್ಟಿದ್ದು, ಹುಲಿ ಕುಣಿತವನ್ನು ರಿಷಬ್ ಶೆಟ್ಟಿ ವೀಕ್ಷಿಸಿದ್ದಾರೆ. 

ಇನ್ನು ಥಾಸೆ ಸದ್ದಿಗೆ ವೇದಿಕೆಯಲ್ಲಿ ನಟ ಪ್ರಮೋದ್ ಶೆಟ್ಟಿ ಹೆಜ್ಜೆ ಹಾಕಿದ್ದಾರೆ. ನಟ ರಿಷಬ್ ಶೆಟ್ಟಿ ಜೊತೆ ಫೋಟೋಗೆ ಅಭಿಮಾನಿಗಳು ಮುಗಿಬಿದ್ದಿದ್ದು, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ಪಿಲಿಪರ್ಬ ಹೆಸರಿನಲ್ಲಿ ಸ್ಪರ್ಧೆ ನಡೆಯುತ್ತಿದ್ದು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ ಕಾಮತ್ ಉಸ್ತುವಾರಿಯಲ್ಲಿ ಭಾಗಿಯಾಗಿದ್ದಾರೆ. 

18 ಲಕ್ಷ ರು. ಬಹುಮಾನ: ಹುಲಿ ವೇಷದ ಸಂಪ್ರದಾಯ ಹಾಗೂ ಮೂಲ ಸೊಗಡನ್ನು ಉಳಿಸಿ ಬೆಳೆಸುವ ಸದುದ್ದೇಶದಿಂದ ಪ್ರತಿವರ್ಷ ಈ ಪಿಲಿನಲಿಕೆ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಸ್ಪರ್ಧೆಯಲ್ಲಿ ಒಟ್ಟು 18 ಲಕ್ಷ ರು. ಬಹುಮಾನ ನಿಗದಿಗೊಳಿಸಲಾಗಿದೆ. ಪ್ರಥಮ ಬಹುಮಾನ ವಿಜೇತ ತಂಡಕ್ಕೆ 5 ಲಕ್ಷ ರು. ಹಾಗೂ ಪ್ರಶಸ್ತಿ ಪತ್ರ ದೊರೆಯಲಿದೆ. ಅಲ್ಲದೆ ಈ ತಂಡ ಬಹರೇನ್‌ನ ರಾಷ್ಟ್ರೀಯ ಉತ್ಸವದಲ್ಲಿ ಭಾಗವಹಿಸುವ ಅವಕಾಶ ಪಡೆಯಲಿದೆ.

ಅಬ್ಬಬ್ಬಾ.. ಈ ಚಿತ್ರಕ್ಕಾಗಿ 25 ಕೆಜಿ ತೂಕ ಇಳಿಸಿಕೊಂಡ ನಟ ಚಿಯಾನ್ ವಿಕ್ರಮ್: ಇಲ್ಲಿದೆ ಸೀಕ್ರೆಟ್‌ ಡಯಟ್‌ ಪ್ಲಾನ್‌?

ವಿದ್ಯಾರ್ಥಿ ‘ಪಿಲಿ’ಗಳಿಗೆ ವಿದ್ಯಾನಿಧಿ: ಪಿಲಿ ನಲಿಕೆ ಸ್ಪರ್ಧೆಗೆ ಆಯ್ಕೆಯಾದ ಪ್ರತಿ ತಂಡದಲ್ಲಿ ಒಬ್ಬೊಬ್ಬ ಬಡ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ ಅವರ ವೃತ್ತಿ ಶಿಕ್ಷಣ, ಉನ್ನತ ಶಿಕ್ಷಣ ಪಡೆಯುತ್ತಿದ್ದರೆ ಅಂತವರಿಗೆ 25 ಸಾವಿರದಿಂದ 1 ಲಕ್ಷ ರು.ವರೆಗೆ ವಿದ್ಯಾನಿಧಿ ನೀಡಲು ಪ್ರತಿಷ್ಠಾನ ನಿರ್ಧರಿಸಿದೆ.

Latest Videos
Follow Us:
Download App:
  • android
  • ios