ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬೆನ್ನಲ್ಲೇ ನಗರದಲ್ಲಿ ತೀವ್ರ ಕಟ್ಟೆಚ್ಚರ
ನಗರದ ಕುಂದನಹಳ್ಳಿಯಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬೆನ್ನಲ್ಲೇ ನಗರ ಪೊಲೀಸರು ರಾಜಧಾನಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಬಾಂಬ್ ಸ್ಫೋಟದ ಸುದ್ದಿ ಹೊರಬಿದ್ದ ಕೂಡಲೇ ನಗರ ಪೊಲೀಸರು ಕೂಡಲೇ ಎಚ್ಚೆತ್ತುಕೊಂಡು ನಗರದ ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಮೆಟ್ರೋ ರೈಲು ನಿಲ್ದಾಣಗಳು, ಮಾರುಕಟ್ಟೆಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಪ್ರದೇಶಗಳಲ್ಲಿ ನಿಗಾವಹಿಸಿದ್ದಾರೆ.
ಬೆಂಗಳೂರು (ಮಾ.2): ನಗರದ ಕುಂದನಹಳ್ಳಿಯಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬೆನ್ನಲ್ಲೇ ನಗರ ಪೊಲೀಸರು ರಾಜಧಾನಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.
ಬಾಂಬ್ ಸ್ಫೋಟದ ಸುದ್ದಿ ಹೊರಬಿದ್ದ ಕೂಡಲೇ ನಗರ ಪೊಲೀಸರು ಕೂಡಲೇ ಎಚ್ಚೆತ್ತುಕೊಂಡು ನಗರದ ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಮೆಟ್ರೋ ರೈಲು ನಿಲ್ದಾಣಗಳು, ಮಾರುಕಟ್ಟೆಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಪ್ರದೇಶಗಳಲ್ಲಿ ನಿಗಾವಹಿಸಿದ್ದಾರೆ. ವಿಧಾನಸೌಧ, ಹೈಕೋರ್ಟ್, ವಿಕಾಸ ಸೌಧ, ರಾಜಭವನ ಸೇರಿದಂತೆ ಪ್ರಮುಖ ಸರ್ಕಾರಿ ಕಟ್ಟಡಗಳಿಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಗಾಯಾಳು ಮಹಿಳೆಗೆ ಯಶಸ್ವಿ ಸರ್ಜರಿ
ಜನನಿಬಿಡ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುವವರು ಹಾಗೂ ಅನುಮಾನಾಸ್ಪದ ವಸ್ತುಗಳ ಬಗ್ಗೆ ನಿಗಾವಹಿಸಿದ್ದಾರೆ. ಅಂತೆಯೇ ಪೊಲೀಸರ ಗಸ್ತು ಹೆಚ್ಚಿಸಿ, ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಕಣ್ಣಿಡಲಾಗಿದೆ. ಇನ್ನು ಬಸ್ ನಿಲ್ದಾಣಗಳು ಹಾಗೂ ರೈಲು ನಿಲ್ದಾಣಗಳಲ್ಲಿ ಅನುಮಾನಾಸ್ಪವಾಗಿ ಕಂಡುಬರುವ ಲಗೇಜ್‌ಗಳನ್ನು ತಪಾಸಣೆ ಮಾಡಲು ಸೂಚಿಸಲಾಗಿದೆ.
ಒಂದೇ ತಿಂಗಳಲ್ಲಿ ನಿಜವಾಯ್ತು ಕೋಡಿಮಠದ ಶ್ರೀಗಳ 'ಸ್ಫೋಟಕ' ಭವಿಷ್ಯ! ಮುಂದೆ ಕಾದಿದೆ ಮತ್ತೊಂದು ಗಂಡಾಂತರ!
ಈಗಾಗಲೇ ರಾಮೇಶ್ವರಂ ಕೆಫೆ ಬಾಂಬ್ ಸ್ಫೊಟದ ಶಂಕಿತನ ಪತ್ತೆಗೆ ಪೊಲೀಸರ ವಿಶೇಷ ತಂಡಗಳು ಕಾರ್ಯಾಚರಣೆ ತೀವ್ರಗೊಳಿಸಿವೆ. ಈ ನಡುವೆ ರೈಲು ನಿಲ್ದಾಣಗಳು, ಬಸ್ ನಿಲ್ದಾಣಗಳು ಹಾಗೂ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳದ ಜತೆಗೆ ಪ್ರತಿ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇರಿಸಲಾಗಿದೆ.