ಬೆಂಗಳೂರು(ನ.21): ರಾಜ್ಯದಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿರುವ ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸಲು ಶೀಘ್ರವೇ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಆನ್‌ಲೈನ್ ಬೆಟ್ಟಿಂಗ್‌ ನಿಷೇಧಿಸಿದ ಸರ್ಕಾರ, ಸಿಕ್ಕಾಕೊಂಡ್ರೆ 2 ವರ್ಷ ಜೈಲು!

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಲ ಆನ್‌ಲೈನ್‌ ಗೇಮ್‌ಗಳ ದುಶ್ಚಟಗಳಿಗೆ ಯುವಕರು ಬಲಿಯಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯ ಇದೆ. ಕಾನೂನು ಬಾಹಿರವಾಗಿ ನಡೆಯುತ್ತಿರುವ ಆನ್‌ಲೈನ್‌ ಗೇಮ್‌ಗಳನ್ನು ನಿರ್ಬಂಧಿಸುವ ಸಂಬಂಧ ಶೀಘ್ರದಲ್ಲಿಯೇ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದರು.

ಆನ್‌ಲೈನ್ ಬೆಟ್ಟಿಂಗ್‌ ನಿಷೇಧಿಸಿದ ಸರ್ಕಾರ, ಸಿಕ್ಕಾಕೊಂಡ್ರೆ 2 ವರ್ಷ ಜೈಲು!

ದೇಶದ ಕೆಲ ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸಲಾಗಿದೆ. ಆ ರಾಜ್ಯಗಳು ಈ ನೀತಿಯನ್ನು ಯಾವ ರೀತಿ ಜಾರಿಗೆ ತಂದಿವೆ ಎಂಬುದನ್ನು ಅಧ್ಯಯನ ಮಾಡುತ್ತಿದ್ದೇವೆ. ಶೀಘ್ರದಲ್ಲಿಯೇ ರಾಜ್ಯದಲ್ಲಿಯೂ ನಿಷೇಧ ಹೇರುವುದು ಖಚಿತ. ಹಲವೆಡೆ ಆನ್‌ಲೈನ್‌ ಗೇಮ್‌ಗಳಿಗೆ ಯುವಕರು ಮನೆ, ಆಸ್ತಿ-ಪಾಸ್ತಿಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಪೋಷಕರು ಸೇರಿದಂತೆ ಸಾರ್ವಜನಿಕ ವಲಯದಿಂದಲೂ ವ್ಯಾಪಕ ದೂರುಗಳು ಬರುತ್ತಿವೆ. ಹೀಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅಧಿಕಾರಿಗಳ ಜತೆ ಸಭೆ ಕೂಡ ನಡೆಸಲಾಗಿದೆ ಎಂದರು.