Asianet Suvarna News Asianet Suvarna News

ರಾಜ್ಯದಲ್ಲಿಂದು 24 ಜನರಿಗೆ ಕೊರೋನಾ ಪಾಸಿಟಿವ್; ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆ!

ದೇಶದಲ್ಲಿ ಕೋವಿಡ್‌ ಉಪತಳಿ ಜೆಎನ್ 1 ಪ್ರಕರಣ ಪತ್ತೆಯಾಗಿದ್ದು, ಮತ್ತೆ ಕೊರೋನಾ ಆಂತಕ ಶುರುವಾಗಿದೆ. ರಾಜ್ಯದಲ್ಲಿ ಗುರುವಾರ 24 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.

today covid case update in karnataka Number of active cases increased to 105 bengaluru rav
Author
First Published Dec 21, 2023, 8:35 PM IST

ಬೆಂಗಳೂರು (ಡಿ.21): ದೇಶದಲ್ಲಿ ಕೋವಿಡ್‌ ಉಪತಳಿ ಜೆಎನ್ 1 ಪ್ರಕರಣ ಪತ್ತೆಯಾಗಿದ್ದು, ಮತ್ತೆ ಕೊರೋನಾ ಆಂತಕ ಶುರುವಾಗಿದೆ. ರಾಜ್ಯದಲ್ಲಿ ಗುರುವಾರ 24 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 24 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40,89,174 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮಂದಿಗೆ ಪಾಸಿಟಿವ್ ಬಂದಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿಯೇ 23 ಪ್ರಕರಣಗಳು ವರದಿಯಾಗಿದ್ದು, ನಗರದಲ್ಲಿ 93 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕೇರಳದ ಗಡಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪ್ರಕರಣ ವರದಿಯಾಗಿದೆ.

ಕಾಫಿನಾಡಲ್ಲಿ ಪಾಸಿಟಿವ್ ಖಾತೆ ತೆಗೆದ ಕೊವಿಡ್, ನಾಲ್ವರಿಗೆ ಸೋಂಕು ದೃಢ!

ಇಂದು ಆಸ್ಪತ್ರೆಯಿಂದ 11 ಮಂದಿ ಡಿಸ್ಜಾರ್ಜ್​ ಆಗಿದ್ದು, ರಾಜ್ಯದಲ್ಲಿ ಒಟ್ಟು 105 ಸಕ್ರಿಯ ಕೊರೋನಾ ಕೇಸ್​ಗಳಿನೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

105 ಪ್ರಕರಣಗಳಲ್ಲಿ, 85 ಜನರು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ ಮತ್ತು 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ 20 ಮಂದಿಯಲ್ಲಿ ಒಂಬತ್ತು ಮಂದಿ ಐಸಿಯುನಲ್ಲಿದ್ದಾರೆ.

 

ರಾಜ್ಯಕ್ಕೆ ಮತ್ತೆ ವಕ್ಕರಿಸಿದ ಮಹಾಮಾರಿ; ಮದ್ದೂರಿನಲ್ಲಿ ಒಬ್ಬ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ದೃಢ!

Follow Us:
Download App:
  • android
  • ios