ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆ
ನಗರದ ಚಾಮರಾಜಪೇಟೆ (ಈದ್ಗಾ) ಮೈದಾನದಲ್ಲಿ ಎರಡನೇ ಬಾರಿಗೆ ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದ್ದು, ಉತ್ತರ ವಿಭಾಗದ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಆ.15ರಂದು ಬೆಳಗ್ಗೆ 9ಕ್ಕೆ ಧ್ವಜಾರೋಹಣ ನೆರವೇರಲಿದೆ.

ಬೆಂಗಳೂರು (ಆ.15) : ನಗರದ ಚಾಮರಾಜಪೇಟೆ (ಈದ್ಗಾ) ಮೈದಾನದಲ್ಲಿ ಎರಡನೇ ಬಾರಿಗೆ ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದ್ದು, ಉತ್ತರ ವಿಭಾಗದ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಆ.15ರಂದು ಬೆಳಗ್ಗೆ 9ಕ್ಕೆ ಧ್ವಜಾರೋಹಣ ನೆರವೇರಲಿದೆ.
500 ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗಲು ಪೊಲೀಸ್ ಇಲಾಖೆ ಸೂಕ್ತ ಭದ್ರತೆ ನೀಡಿದೆ. ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸೇರಿ ವಿವಿಧ ಹಿಂದೂ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಒಗ್ಗಟ್ಟಿನಲ್ಲಿ ಹೋರಾಟ ಮಾಡಿದ ಫಲವಾಗಿ ಕಳೆದ ವರ್ಷದಿಂದ ಜಿಲ್ಲಾಡಳಿತದಿಂದ ಚಾಮರಾಜಪೇಟೆ ಮೈದಾನದಲ್ಲಿ ಬಿಗಿ ಭದ್ರತೆಯ ನಡುವೆ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ.
ಬೆಂಗಳೂರಿನ ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆ
ಇಂದು ಲಾಲ್‌ಬಾಗ್‌ನಿಂದ ಮೆಟ್ರೋ ಟಿಕೆಟ್ ₹30
ಲಾಲ್‌ಬಾಗ್(Lalbagh)ನಲ್ಲಿ ಪುಷ್ಪಪ್ರದರ್ಶನ(flower show)ಕ್ಕೆ ತೆರಳಿ ಮೆಟ್ರೋ(Namma metro) ಮೂಲಕ ವಾಪಸ್ಸಾಗುವವರಿಗೆ ಬಿಎಂಆರ್‌ಸಿಎಲ್ ಮಂಗಳವಾರ ಹಿಂದಿರುಗುವ ಪೇಪರ್ ಟಿಕೆಟನ್ನು .30 ನಿಗದಿ ಮಾಡಿದೆ.
ಸ್ವಾತಂತ್ರ್ಯ ದಿನಾಚರಣೆ(Independence day) ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಹಿಂದಿರುಗಲು ಈ ಟಿಕೆಟ್ ಬಳಸಿ ಪ್ರಯಾಣಿಸಬಹುದು. ಈ ಪೇಪರ್ ಟಿಕೆಟನ್ನು ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಸಂಜೆ 6ರವರೆಗೆ ಪಡೆಯಲು ಅವಕಾಶವಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
Bengaluru: ಕೆಂಗೇರಿ-ಬೈಯಪ್ಪನಹಳ್ಳಿ, ಕೆಆರ್‌ಪುರ-ವೈಟ್‌ಫೀಲ್ಡ್ ಮೆಟ್ರೋ ಸಂಚಾರ ವ್ಯತ್ಯಯ