ರಾಜ್ಯ ಸಚಿವರ ಜತೆ ಇಂದಿನ ರಾಹುಲ್ ಸಭೆ ಮತ್ತೆ ಮುಂದೂಡಿಕೆ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ರಾಜ್ಯ ಸರ್ಕಾರದ ಸಚಿವರೊಂದಿಗೆ ಬೆಂಗಳೂರಿನಲ್ಲಿ ನಡೆಸಬೇಕಿದ್ದ ಸಭೆ ಮತ್ತೊಮ್ಮೆ ಮುಂದೂಡಿಕೆಯಾಗಿದೆ.
ಬೆಂಗಳೂರು (ಜು.18) : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ರಾಜ್ಯ ಸರ್ಕಾರದ ಸಚಿವರೊಂದಿಗೆ ಬೆಂಗಳೂರಿನಲ್ಲಿ ನಡೆಸಬೇಕಿದ್ದ ಸಭೆ ಮತ್ತೊಮ್ಮೆ ಮುಂದೂಡಿಕೆಯಾಗಿದೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ. ಜು.18ರಂದು ಸಭೆ ಮುಗಿದ ಬಳಿಕ ಜು.19ರಂದು ಸಚಿವರೊಂದಿಗೆ ಸಭೆ ಆಯೋಜಿಸಲಾಗಿತ್ತು.
ದಲಿತರ ಜಮೀನು ಕಾಪಾಡಲು ಕಾಯ್ದೆ ಶೀಘ್ರ ತಿದ್ದುಪಡಿ: ಸಿದ್ದರಾಮಯ್ಯ
ಆದರೆ, ತುರ್ತು ಕಾರ್ಯದ ಪ್ರಯುಕ್ತ ಜು.18ರ ತಡರಾತ್ರಿ ಅವರು ದೆಹಲಿಗೆ ತೆರಳುವ ಸಾಧ್ಯತೆಯಿರುವುದರಿಂದ ಈ ಸಭೆ ಮುಂದೂಡಿಕೆ ಕಂಡಿದೆ ಎಂದು ಮೂಲಗಳು ಹೇಳಿವೆ.
ಮುಂದಿನ ದಿನಗಳಲ್ಲಿ ನಾಲ್ಕೈದು ಮಂದಿ ಸಚಿವರನ್ನು ಒಂದೊಂದು ತಂಡವಾಗಿ ಪ್ರತ್ಯೇಕವಾಗಿ ಕರೆಸಿಕೊಂಡು ಮಾತನಾಡಲಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯತಂತ್ರಗಳ ವಿರುದ್ಧ ರಾಜ್ಯದ ಸಚಿವರನ್ನು ಎಚ್ಚರಿಸುವ ಕೆಲಸ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ಪ್ರತಿಪಕ್ಷ ವಿರೋಧ ನಡುವೆ ಎಪಿಎಂಸಿ ತಿದ್ದುಪಡಿ ಪಾಸ್ !
ಭ್ರಷ್ಟಾಚಾರ ಕೇಸುಗಳಲ್ಲಿ ಸಿಲುಕಿಸಲು ಬಿಜೆಪಿ ಯತ್ನಿಸಬಹುದು, ಈ ಬಗ್ಗೆ ಎಚ್ಚರ ವಹಿಸಬೇಕು. ಚುನಾವಣೆಗೆ ಮುನ್ನ ನೀಡಿರುವ ಎಲ್ಲ ಭರವಸೆಗಳನ್ನೂ ಈಡೇರಿಸಬೇಕು. ಬಿಜೆಪಿ ನಾಯಕರ ಜತೆ ಹೊಂದಾಣಿಕೆ ರಾಜಕಾರಣ ಮಾಡಬಾರದು. ಲೋಕಸಭೆಗೆ ರಾಜ್ಯದಿಂದ ಹೆಚ್ಚು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಕೃಷಿ ಮಾಡಬೇಕು ಎಂಬಿತ್ಯಾದಿ ಸಲಹೆ ನೀಡುವ ನಿರೀಕ್ಷೆಯಿದೆ.