ಬೆಂಗಳೂರು[ಅ.19]: ವೀರ್‌ ಸಾವರ್ಕರ್‌ಗೆ ಭಾರತ ರತ್ನ ನೀಡುವ ಸಂಬಂಧ ಸಚಿವ ಸಿ. ಟಿ. ರವಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಆರಂಭವಾದ ಟ್ವೀಟ್ ವಾರ್ ಜೋರಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇಬ್ಬರು ನಾಯಕರ ಮಾತಿನ ಚಕಮಕಿ ಭಾರೀ ಸೌಂಡ್ ಮಾಡುತ್ತಿದೆ.

"

ಹೌದು ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿ ಅಮಾಯಕರನ್ನು ಕೊಂದವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕೆಂದು ತಿವಿದಿದ್ದ ಸಿದ್ದರಾಮಯ್ಯಗೆ ಸಚಿವ ಸಿ. ಟಿ. ರವಿ ತಿರುಗೇಟು ನೀಡಿದ್ದು, ವಿದೇಶದಲ್ಲಿ ಕುಡಿದು ಸತ್ತವರ ಕುರಿತ ಸತ್ಯವನ್ನು ಸಹ ನೀವು ತಿಳಿದು ಮಾತನಾಡುತ್ತೀರಿ ಎಂದು ತಿರುಗೇಟು ನೀಡಿದ್ದಾರೆ.

'ಅಧಿಕಾರ ಇಲ್ಲದಾಗ ಕಂಠಪೂರ್ತಿ ಕುಡಿದು ಅಮಾಯಕರನ್ನು ಸಾಯಿಸ್ತಾರೆ'

'ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ!' ಎಂದಿದ್ದ ಸಿದ್ದರಾಮ್ಯಯಗೆ ಟಾಂಗ್ ನೀಡಿರುವ ಸಿ. ಟಿ. ರವಿ 'ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅಂತ ಮಹಾ ಕ್ರೂರಿಗಳ ಇತಿಹಾಸ ಓದುವ ನಡುವೆ ವಿದೇಶದಲ್ಲಿ ಕುಡಿದು ಸತ್ತವರ ಕುರಿತ ಸತ್ಯವನ್ನು ಸಹ ನೀವು ತಿಳಿದು ಮಾತನಾಡುತ್ತೀರಿ ಎಂದು ನಂಬಿದ್ದೇನೆ’ ಎಂದಿದ್ದಾರೆ.

'ಸಾವರ್ಕರ್‌ಗೆ ಆಮೇಲೆ ಕೊಡುವಿರಂತೆ, ಮೊದಲು ಸಿದ್ದಗಂಗಾ ಶ್ರೀಗೆ ಭಾರತರತ್ನ ನೀಡಿ'

ಮಹಾತ್ಮ ಗಾಂಧಿ ಹತ್ಯೆಗೆ ಸ್ಕೆಚ್‌ (ರೂಪರೇಷೆ) ಸಿದ್ಧಪಡಿಸಿದವರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌ಗೆ ಭಾರತ ರತ್ನ ನೀಡುತ್ತಾರೆ. ಹಾಗಾದ್ರೆ ಗಾಂಧಿ ಕೊಲೆ ಮಾಡಿರುವ ನಾಥೂರಾಮ್‌ ಗೋಡ್ಸೆಗೂ ಭಾರತ ರತ್ನ ಕೊಡಲಿ ಎಂಬಲ್ಲಿಂದ ಆರಂಭವಾದ ಈ ಟ್ವೀಟ್ ವಾರ್ ಜೋರಾಗುತ್ತಿದ್ದು, ಮುಂದೆ ಯಾವ ತಿರುವು ಪಡೆಯುತ್ತೆ ಕಾದು ನೋಡಬೇಕಷ್ಟೇ

ಗೋಡ್ಸೆಗೂ ಭಾರತರತ್ನ ಕೊಡಿ: ಸಿದ್ದರಾಮಯ್ಯ ವಿವಾದ