ವಿವಿಧ ಭೇಡಿಕೆಗಳನ್ನ ಈಡೇರಿಸುವಂತೆ ಫೆ.6ರಂದು ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ
ಬಜೆಟ್‌ಗೂ ಮುನ್ನ ಸರ್ಕಾರಕ್ಕೆ ಬೇಡಿಕೆಗಳ ಸುರಿಮಳೆ ಶುರುವಾಗಿದ್ದು, ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ಮತ್ತೆ ಸಾರಿಗೆ ನೌಕರರು ರಸ್ತೆಗಿಳಿಯಲಿದ್ದಾರೆ.
ಬೆಂಗಳೂರು (ಫೆ.05): ಬಜೆಟ್‌ಗೂ ಮುನ್ನ ಸರ್ಕಾರಕ್ಕೆ ಬೇಡಿಕೆಗಳ ಸುರಿಮಳೆ ಶುರುವಾಗಿದ್ದು, ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ಮತ್ತೆ ಸಾರಿಗೆ ನೌಕರರು ರಸ್ತೆಗಿಳಿಯಲಿದ್ದಾರೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ಇಲಾಖೆಯ 4 ನಿಗಮಗಳ ನೌಕರರಿಂದ ನಾಳೆ ಫ್ರೀಡಂಪಾರ್ಕ್‌ನಲ್ಲಿ ಕುಟುಂಬ ಸಮೇತ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯಲಿದ್ದು, ಈ ಹೋರಾಟದಲ್ಲಿ ಸಾವಿರಾರು ನೌಕರರು ಭಾಗಿಯಾಗಲಿದ್ದಾರೆ.
ಸಾರಿಗೆ ನೌಕರರ ಬೇಡಿಕೆಗಳೇನು?
* ದಿನಾಂಕ ಜ.1 2020ರಿಂದ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಬಾಕಿ ಇದ್ದು, ಕೂಡಲೆ ವೇತನ ಹೆಚ್ಚಳ ಮಾಡುವುದು.
* ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕು ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರುನೇಮಕಾತಿ ಮಾಡಿಕೊಳ್ಳುವುದು.
* ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು.
'ವೇಸ್ಟ್ ಫೆಲ್ಲೊ, ನಾನ್ ಸೆನ್ಸ್' ಎಂದು ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಸಿಡಿಮಿಡಿಗೊಂಡ ಸಿದ್ದರಾಮಯ್ಯ
* ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡಿರುವ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡುವುದು ಅವರಿಗೆ ಸರಿಯಾದ ರೀತಿ ಪಿಂಚಣೆ ಸೌಲಭ್ಯವನ್ನು ಒದಗಿಸುವುದು.
* ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ಉತ್ತಮವಾದ ಆರೋಗ್ಯ ಯೋಜನೆಗಳನ್ನು ಒದಗಿಸುವುದು.