ಟಿಎಸ್‌ಎಸ್ ಅಕ್ರಮ: ಶಿರಸಿಯ 6 ಉದ್ಯಮಿಗಳ ನಿವಾಸದ ಮೇಲೆ ಐಟಿ ದಾಳಿ

ಇಲ್ಲಿನ ಟಿಎಸ್‌ಎಸ್ (ತೋಟಗಾರ್ಸ್‌ ಸೇಲ್ಸ್‌ ಸೊಸೈಟಿ)ನಲ್ಲಿ ಈ ಹಿಂದಿನ ಆಡಳಿತ ಮಂಡಳಿ ಅವಧಿಯಲ್ಲಿ ನಡೆದ ಹಗರಣದ ಜಾಡು ಹಿಡಿದು ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಶಿರಸಿಯ 6 ಉದ್ಯಮಿಗಳ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿ, ಅಗತ್ಯ ದಾಖಲೆಪತ್ರಗಳನ್ನು ಪರಿಶೀಲಿಸಿದ್ದಾರೆ.

TSS Illegal IT raids on the residence of 6 businessmen in Sirsi gvd

ಶಿರಸಿ (ಮೇ.04): ಇಲ್ಲಿನ ಟಿಎಸ್‌ಎಸ್ (ತೋಟಗಾರ್ಸ್‌ ಸೇಲ್ಸ್‌ ಸೊಸೈಟಿ)ನಲ್ಲಿ ಈ ಹಿಂದಿನ ಆಡಳಿತ ಮಂಡಳಿ ಅವಧಿಯಲ್ಲಿ ನಡೆದ ಹಗರಣದ ಜಾಡು ಹಿಡಿದು ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಶಿರಸಿಯ 6 ಉದ್ಯಮಿಗಳ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿ, ಅಗತ್ಯ ದಾಖಲೆಪತ್ರಗಳನ್ನು ಪರಿಶೀಲಿಸಿದ್ದಾರೆ. ಶುಕ್ರವಾರ ಬೆಳಗ್ಗೆ 7 ಗಂಟೆಗೆ ಆಗಮಿಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಸಂಜೆಯವರೆಗೂ ಕಾಗದಪತ್ರಗಳ ಪರಿಶೀಲನೆ ನಡೆಸಿತು. 

ಜಯನಗರದಲ್ಲಿರುವ ಉದ್ಯಮಿ ದೀಪಕ ದೊಡ್ಡರ ಮನೆ ಮತ್ತು ಕಚೇರಿ, ಎಪಿಎಂಸಿ ಆವರಣದ ಸಮೀಪದಲ್ಲಿರುವ ಟಿಎಸ್‌ಎಸ್ ಮಾಜಿ ವ್ಯವಸ್ಥಾಪಕ ರವೀಶ ಹೆಗಡೆ ಮನೆ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ, ಸಂಜೆಯವರೆಗೂ ಆಸ್ತಿ ದಾಖಲೆಪತ್ರಗಳನ್ನು ಪರಿಶೀಲನೆ ನಡೆಸಿದೆ ಎಂಬುದಾಗಿ ತಿಳಿದು ಬಂದಿದೆ. ಟಿಎಸ್‌ಎಸ್ ಮಾಜಿ ಉದ್ಯೋಗಿ ಅನಿಲ ಮುಷ್ಟಗಿ ಅವರ ಯಲ್ಲಾಪುರ ರಸ್ತೆಯ ದೇವ ನಿಲಯ ಮತ್ತು ಚಿಪಗಿಯಲ್ಲಿರುವ ಮನೆ, ಟಿಎಸ್‌ಎಸ್ ನಿರ್ದೇಶಕ ರಾಮಕೃಷ್ಣ ಹೆಗಡೆ ಕಡವೆಯವರ ಯಲ್ಲಾಪುರ ರಸ್ತೆಯಲ್ಲಿರುವ ಮನೆ, ಟಿಎಸ್‌ಎಸ್‌ನಲ್ಲಿ ಅಡಕೆ ವಹಿವಾಟು ನಡೆಸುತ್ತಿದ್ದ ಪ್ರವೀಣ ಹೆಗಡೆ ಹೀಪನಳ್ಳಿ ಅವರ ವಿನಾಯಕ ಕಾಲನಿಯ ಮನೆ ಹಾಗೂ ಅಡಕೆ ವ್ಯಾಪಾರಿ ಶಿವರಾಮ ಹೆಗಡೆ ಅವರ ಅಡಕೆ ವಕಾರಿಯ ಮೇಲೆ ದಾಳಿ ನಡೆಸಲಾಗಿದೆ. 

ಹುಬ್ಬಳ್ಳಿ, ಬೆಂಗಳೂರು, ಮಂಗಳೂರು ಮತ್ತು ಕಾರವಾರ ಕಚೇರಿಯ ಆದಾಯ ತೆರಿಗೆ ಇಲಾಖೆಯ 20ಕ್ಕೂ ಅಧಿಕ ಅಧಿಕಾರಿಗಳು ಈ ದಾಳಿಯಲ್ಲಿ ಪಾಲ್ಗೊಂಡಿದ್ದರು. ಶುಕ್ರವಾರ ಏಕಕಾಲಕ್ಕೆ 6 ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ಬೆಳಗ್ಗೆಯಿಂದ ಸಂಜೆಯವರೆಗೂ ಸುಮಾರು 6 ಗಂಟೆಗಳ ಕಾಲ ಆಸ್ತಿಯ ದಾಖಲೆಪತ್ರ, ಬೆಲೆಬಾಳುವ ಆಭರಣ, ಬ್ಯಾಂಕ್ ಪಾಸ್‌ಬುಕ್ ಗಳ ವಿಚಾರಣೆ ನಡೆಸಿದೆ. ರಾಜ್ಯದ ಪ್ರತಿಷ್ಠಿತ ಅಡಕೆ ವಹಿವಾಟು ಸಂಸ್ಥೆ ಟಿಎಸ್ ಎಸ್ ಆಡಳಿತ ಮಂಡಳಿ ಈ ವರ್ಷ ಬದಲಾಗಿದ್ದು, ಹೊಸ ಆಡಳಿತ ಮಂಡಳಿ ಬಂದ ಬಳಿಕ ರವೀಶ ಹೆಗಡೆ ಸೇರಿ ಅನೇಕರನ್ನು ಸಂಸ್ಥೆಯ ಸೇವೆಯಿಂದ ಹೊರಗಿಟ್ಟಿದೆ. 

ಅಭಿನಯದ ವೇಳೆ ವೇದಿಕೆ ಮೇಲೆ‌ ಕುಸಿದು ಬಿದ್ದು ಶಕುನಿ ಪಾತ್ರಧಾರಿ ಸಾವು!

ಹಿಂದಿನ ಅವಧಿಯಲ್ಲಿ ಆದ ಅವ್ಯವಹಾರಗಳ ಬಗ್ಗೆ ಸಂಸ್ಥೆಯು ಆಂತರಿಕ ತನಿಖೆ ನಡೆಸುತ್ತಿದೆ. ಶುಕ್ರವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದವರಲ್ಲಿ ಹಿಂದೆ ಟಿಎಸ್‌ಎಸ್ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದವರು ಮತ್ತು ವ್ಯಾಪಾರ ವಹಿವಾಟು ನಡೆಸಿದವರೇ ಹೆಚ್ಚಿದ್ದಾರೆ. ಟಿಎಸ್ ಎಸ್ ನಲ್ಲಿ ನಡೆದ ಅವ್ಯವಹಾರ, ಭ್ರಷ್ಟಾಚಾರದ ಹಿನ್ನೆಲೆ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ವ್ಯಾಪಕ ಅವ್ಯವಹಾರದ ಆರೋಪದಿಂದಾಗಿ ಟಿಎಸ್‌ಎಸ್‌ ಗೆನಡೆದ ಚುನಾವಣೆಯಲ್ಲಿ ಹಿಂದಿನ ಆಡಳಿತ ಮಂಡಳಿಯ ಬಹುತೇಕ ಸದಸ್ಯರು ಪರಾಭವಗೊಂಡು, ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದಿತ್ತು.

Latest Videos
Follow Us:
Download App:
  • android
  • ios