ಸಚಿವ ಸ್ಥಾನ ಕಳೆದುಕೊಂಡಿರುವ ಕೆ.ಎನ್. ರಾಜಣ್ಣ ಅವರಿಗೆ ಬೆಂಬಲ ಸೂಚಿಸಲು 15ಕ್ಕೂ ಹೆಚ್ಚು ಮಠಾಧೀಶರು ಇಂದು ಅವರ ಮನೆಗೆ ಭೇಟಿ ನೀಡಲಿದ್ದಾರೆ. ನ್ಯಾಯ ಒದಗಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡಲಿದ್ದಾರೆ. ಈ ಭೇಟಿಯ ನಂತರ ಸ್ವಾಮೀಜಿಗಳು ಸುದ್ದಿಗೋಷ್ಠಿ ನಡೆಸಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿದ್ದಾರೆ.

ತುಮಕೂರು (.31): ಕೆಎನ್‌ ರಾಜಣ್ಣ ಅವರ ಸಚಿವ ಸ್ಥಾನದಿಂದ ವಜಾದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ 15ಕ್ಕೂ ಹೆಚ್ಚು ವಿವಿಧ ಮಠಗಳ ಸ್ವಾಮೀಜಿಗಳು ತುಮಕೂರಿನ ಕ್ಯಾತಸಂದ್ರದಲ್ಲಿರುವ ಅವರ ಮನೆಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಮೂಲಕ 'ನಾವು ನಿಮ್ಮೊಂದಿಗೆ ಇದ್ದೇವೆ' ಎಂಬ ಸಂದೇಶವನ್ನು ಸ್ವಾಮೀಜಿಗಳು ರಾಜಣ್ಣ ಅವರಿಗೆ ಸೂಚಿಸಲಿದ್ದಾರೆ.

ಕೆ.ಎನ್. ರಾಜಣ್ಣ ಅವರಿಗೆ ಸಚಿವ ಸ್ಥಾನವನ್ನು ಮರಳಿ ನೀಡಬೇಕೆಂದು ಹೈಕಮಾಂಡ್ ನಾಯಕರ ಮನವೊಲಿಕೆಗೆ ಸ್ವಾಮೀಜಿಗಳು ಮುಂದಾಗಿದ್ದಾರೆ. ಈ ಭೇಟಿಯ ನಂತರ ಸ್ವಾಮೀಜಿಗಳು ಸುದ್ದಿಗೋಷ್ಠಿಯನ್ನು ಆಯೋಜಿಸಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿದ್ದಾರೆ.

ಇದನ್ನೂ ಓದಿ: ಬಿಹಾರ ಯಾತ್ರೆಯಲ್ಲಿ ಸಿಎಂ, ಡಿಸಿಎಂ ಪವರ್ ಪಾಲಿಟಿಕ್ಸ್; ರಾಹುಲ್ ಗಾಂಧಿ ಮುಂದೆ ತಕ್ಕಡಿ ತೂಗೋ ಆಟ ಜೋರು!

ನಿನ್ನೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಹಿಂದುಳಿದ ಜಾತಿ ಮತ್ತು ಸಮುದಾಯಗಳ ಮಠಾಧೀಶರು ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದ್ದರು. ಇದೀಗ ಕೆ.ಎನ್. ರಾಜಣ್ಣ ಅವರಿಗೆ ಬೆಂಬಲ ಸೂಚಿಸಲು ಮತ್ತು ಅವರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಲು ಸ್ವಾಮೀಜಿಗಳು ಒಗ್ಗಟ್ಟಾಗಿ ಮುಂದಾಗಿದ್ದಾರೆ.

ಈ ಘಟನೆಯು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಬೆಳವಣಿಗೆಗಳು ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಲಿವೆ ಎಂದು ತಿಳಿದುಬಂದಿದೆ.