ಭಕ್ತರಿಗೆ ತಿಳಿಸದೇ ಮಠದ ಆಸ್ತಿ ಮಾರಾಟ ಆರೋಪ; ರಾಮೇನಹಳ್ಳಿ ಶಿವಪಂಚಾಕ್ಷರಿ ಸ್ವಾಮೀಜಿ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು!
ಗ್ರಾಮಸ್ಥರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಮಠದ ಸ್ವಾಮೀಜಿ ವಿರುದ್ಧ ಗ್ರಾಮಸ್ಥರು ರೊಚ್ಚಿಗೆದ್ದ ಘಟನೆ ತುಮಕೂರು ತಾಲೂಕಿನ ಹೆಬ್ಬೂರು ಬಳಿಯಿರು ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತುಮಕೂರು (ನ.3): ಗ್ರಾಮಸ್ಥರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಮಠದ ಸ್ವಾಮೀಜಿ ವಿರುದ್ಧ ಗ್ರಾಮಸ್ಥರು ರೊಚ್ಚಿಗೆದ್ದ ಘಟನೆ ತುಮಕೂರು ತಾಲೂಕಿನ ಹೆಬ್ಬೂರು ಬಳಿಯಿರು ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಠದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಶಿವಪಂಚಾಕ್ಷರಿ ಸ್ವಾಮೀಜಿ ವಿರುದ್ಧ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು. ಅಷ್ಟಕ್ಕೂ ಯಾಕೆ ಸ್ವಾಮೀಜಿ ವಿರುದ್ಧ ರೊಚ್ಚಿಗೆದ್ದರು ಅಂತೀರಾ? ಗ್ರಾಮಸ್ಥರ ಕೋಪಕ್ಕೆ ಕಾರಣವಿದೆ. ರಾಮೇನಹಳ್ಳಿ ಮಠ ತನ್ನದೇ ಆದ ಇತಿಹಾಸ ಹೊಂದಿ. ಮಠಕ್ಕೆ ಸಾವಿರಾರು ಭಕ್ತರು ಇದ್ದಾರೆ. ಹೀಗಾಗಿ ಮಠದ ಹೆಸರಿನಲ್ಲಿ ನೂರಾರು ಎಕರೆ ಜಮೀನು ಕೂಡ ಇದೆ. ಈ ಮಠದ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಶಿವ ಪಂಚಾಕ್ಷರಿ ಸ್ವಾಮೀಜಿ. ಮಠದಲ್ಲಿ ಏನೇ ನಿರ್ಧಾರ ಮಾಡಬೇಕೆಂದರೂ ಮಠದ ಭಕ್ತರು , ಗ್ರಾಮಸ್ಥರಿಗೆ ಮಾಹಿತಿ ನೀಡಬೇಕು ಅಲ್ಲವೇ? ಆದರೆ ಸ್ವಾಮೀಜಿ ಗ್ರಾಮಸ್ಥರಿಗೆ ತಿಳಿಯದಂತೆ ಮಠಕ್ಕೆ ಸೇರಿದ ಹತ್ತಾರು ಎಕರೆ ಜಮೀನು ಮಾರಾಟ ಮಾಡಿರುವ ಆರೋಪ ಕೇಳಿಬಂದಿದೆ. ಇದನ್ನ ಪ್ರಶ್ನೆ ಮಾಡಿದ ಗ್ರಾಮಸ್ಥರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆನ್ನಲಾಗಿದೆ. ಹೀಗಾಗಿ ಮಠಕ್ಕೆ ನುಗ್ಗಿ ಸ್ವಾಮೀಜಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿಯವ್ರು ರಾಜಕೀಯ ಮಾಡುತ್ತಿದ್ದಾರೆ : ಗೃಹ ಸಚಿವ ಪರಮೇಶ್ವರ್
ಮಠದಲ್ಲಿ ಸ್ವಾಮೀಜಿ ಕುಟುಂಬಸ್ಥರು ಸಂಸಾರ:
ಮಠದ ಉಸ್ತುವಾರಿ ವಹಿಸಿಕೊಂಡಿರುವ ಶಿವಪಂಚಾಕ್ಷರಿ ಸ್ವಾಮೀಜಿ ಭಕ್ತರಿಗೆ ತಿಳಿಯದೆ ಮಠದ ಆಸ್ತಿ ಮಾರಾಟ ಮಾಡಿದ್ದಲ್ಲದೆ, ಮಠದೊಳಗೆ ಸಹೋದರನ ಕುಟುಂಬಸ್ಥರು ಕರೆತಂದು ಇಟ್ಟುಕೊಂಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಯಾರನ್ನ ಕೇಳಿ ಮಠದ ಜಮೀನು ಮಾರಾಟ ಮಾಡಿದ್ದೀರಿ, ಯಾರನ್ನ ಕೇಳಿ ಕುಟುಂಬಸ್ಥರನ್ನು ಮಠದೊಳಗೆ ಕರೆತಂದಿದ್ದೀರಿ? ಇದೇನು ನಿಮ್ಮ ಸ್ವಂತ ಆಸ್ತಿಯೇನು ಎಂದು ಪ್ರಶ್ನಿಸಿರುವ ಗ್ರಾಮಸ್ಥರು. ಇದರಿಂದ ಕೋಪಗೊಂಡು ಗ್ರಾಮಸ್ಥರ ವಿರುದ್ಧವೇ ಸ್ವಾಮೀಜಿ ಅವಾಚ್ಯವಾಗಿ ನಿಂದಿಸಿದ್ದಾರೆಂದು ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ.
ಘಟನೆ ಬಳಿಕ ಸ್ಥಳಕ್ಕೆ ಹೆಬ್ಬೂರು ಠಾಣೆ ಪೊಲೀಸರು ಭೇಟಿ ನೀಡಿದ್ದು ಘಟನೆ ಮಾಹಿತಿ ಪಡೆದುಕೊಂಡು ವಿಚಾರಣೆ ಮುಂದುವರಿಸಿದ್ದಾರೆ.