Asianet Suvarna News Asianet Suvarna News

ಶ್ರೀ ಲಿಂಗೈಕ್ಯ : ಜ.22 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ

 ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ.

Tumkur Siddaganga Sri Death Govt Holiday Declared
Author
Bengaluru, First Published Jan 21, 2019, 2:16 PM IST

ಬೆಂಗಳೂರು : ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ. ಸರ್ಕಾರ ರಜೆ ಘೋಷಿಸಿ ಅಧಿಕೃತ ಆದೇಶ ನೀಡಿದೆ.

"

ಮಠದಲ್ಲಿಯೇ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ರಜೆ ಘೋಷಿಸಿದ್ದು, ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಇರಲಿದೆ ಎಂದು ಅಧಿಕೃತವಾಗಿ ತಿಳಿಸಿದರು.

ಭಿಗಿ ಭದ್ರತೆ :  ಸಿದ್ಧಗಂಗಾ ಮಠದ ಸುತ್ತಮುತ್ತ ಪೊಲೀಸ್ ಭಿಗಿಭದ್ರೆಯನ್ನು  ಹೆಚ್ಚಿಸಲಾಗಿದ್ದು, ಭಾರಿ ಸಂಖ್ಯೆಯಲ್ಲಿ ಬ್ಯಾರಿಕೇಡ್ ಗಳನ್ನೂ ಅಳವಡಿಸಲಾಗಿದೆ. ತುಮಕೂರು ನಗರದಾದ್ಯಂತ 20 ಸಾವಿರ ಪೊಲೀಸರ ನಿಯೋಜಿಸಿದ್ದಲ್ಲದೇ, ಬೇರೆ ಜಿಲ್ಲೆಗಳಿಂದ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಸಿದ್ದಗಂಗಾ ಮಠಕ್ಕೆ ಎಸ್ ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ 10 ಪಿಎಸ್‌ಐ, 150 ಸಿವಿಲ್ ಪೇದೆಗಳು, 4 ಡಿಆರ್ ತುಕಡಿಯನ್ನು ಬಂದೊಬಸ್ತ್‌ಗಾಗಿ ನಿಯೋಜಿಸಲಾಗಿದೆ.

ಸಂತ, ಶ್ರೀ ಶ್ರೀ ಶ್ರೀ ತುಮಕೂರು ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ಗುರು ಕೈವಲ್ಯ

ತುಮಕೂರು, ಬೆಂಗಳೂರು ಗ್ರಾಮಾಂತರ, ದೊಡ್ಡ ಬಳ್ಳಾಪುರ, ರಾಮನಗರ, ಚಿತ್ರದುರ್ಗ ಜಿಲ್ಲೆಗಳ ಮಾರ್ಗಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. 

Follow Us:
Download App:
  • android
  • ios