Asianet Suvarna News Asianet Suvarna News

7 ಜಿಲ್ಲೆಗಳಲ್ಲಿ ಉತ್ತಮ ಮಳೆ: ಸಿಡಿಲಿಗೆ ತಾಯಿ, ಪುತ್ರಿ ಬಲಿ

* ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಉತ್ತಮ ಮಳೆ
* ಸಿಡಿಲು ಬಡಿದು ಹೊಲದಲ್ಲಿದ್ದ ಇಬ್ಬರು ಮಹಿಳೆಯರ ದುರ್ಮರಣ
* ಶಿವಮೊಗ್ಗ ಜಿಲ್ಲೆಗಳಲ್ಲಿ ದಿನವಿಡೀ ಸಾಧಾರಣ ಮಳೆ

Two Killed in Karnataka Due to Heavy Rain on July 11th grg
Author
Bengaluru, First Published Jul 12, 2021, 7:27 AM IST
  • Facebook
  • Twitter
  • Whatsapp

ಬೆಂಗಳೂರು(ಜು.12): ರಾಜ್ಯದ ಕರಾವಳಿ ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಭಾನುವಾರವೂ ಮಳೆ ಮುಂದುವರಿದಿದ್ದು, ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ಸಿಡಿಲು ಬಡಿದು ತಾಯಿ-ಮಗಳು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಉತ್ತಮ ಮಳೆಯಾಗಿದ್ದರೆ, ಮಲೆನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ದಿನವಿಡೀ ಸಾಧಾರಣ ಮಳೆಯಾಗಿದೆ. ಇನ್ನು ಬೆಳಗಾವಿ, ಬೀದರ್‌ ಜಿಲ್ಲೆಯಲ್ಲಿ ಕೆಲ ಗಂಟೆಗಳ ಕಾಲ ಮಳೆ ಸುರಿದಿದೆ.

ಭಾರೀ ಮಳೆ : ಹಳ್ಳದಲ್ಲಿ ಬೈಕ್‌ ಸಮೇತ ಕೊಚ್ಚಿ ಹೋದ ದಂಪತಿ

ಬೀದರ್‌ನ ಭಾಲ್ಕಿ ತಾಲೂಕಿನ ಖುದಾವನಪೂರ ಗ್ರಾಮದಲ್ಲಿ ಹೊಲದಲ್ಲಿದ್ದಲ ಹೊಲದಲ್ಲಿದ್ದ ರೈತ ಮಹಿಳೆ ಭಾಗ್ಯಶ್ರೀ ಭೀಮರಾವ್‌ ಮೆತ್ರೆ (32) ಮತ್ತು ಪುತ್ರಿ ವೈಶಾಲಿ ಮೇತ್ರೆ (9) ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಳೆದೆರಡು ದಿನಗಳಿಂದ ಉತ್ತಮ ಮಳೆ ಕಾಣುತ್ತಿರುವ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರವೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
 

Follow Us:
Download App:
  • android
  • ios