Asianet Suvarna News Asianet Suvarna News

ತುಮಕೂರು: ಬೃಹತ್ ಬಂಡೆ ಬಿದ್ದು ಇಬ್ಬರು ಕಾರ್ಮಿಕರು ಸಾವು

ತುಮಕೂರು ತಾಲೂಕಿನ ಕ್ಯಾತಸಂದ್ರ ಪ್ರದೇಶದಲ್ಲಿರುವ ಕ್ವಾರಿ ಕಮ್ ಸ್ಟೋನ್ ಕ್ರಷರ್ ಘಟಕದಲ್ಲಿ ಮಂಗಳವಾರ ಬಂಡೆ ಸ್ಫೋಟಿಸುವ ಸಂದರ್ಭದಲ್ಲಿ ಬೃಹತ್ ಬಂಡೆಯೊಂದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Two labours killed in a huge rock fall in a quarry at tumakuru rav
Author
First Published Jan 24, 2024, 3:26 AM IST

ತುಮಕೂರು: ತುಮಕೂರು ತಾಲೂಕಿನ ಕ್ಯಾತಸಂದ್ರ ಪ್ರದೇಶದಲ್ಲಿರುವ ಕ್ವಾರಿ ಕಮ್ ಸ್ಟೋನ್ ಕ್ರಷರ್ ಘಟಕದಲ್ಲಿ ಮಂಗಳವಾರ ಬಂಡೆ ಸ್ಫೋಟಿಸುವ ಸಂದರ್ಭದಲ್ಲಿ ಬೃಹತ್ ಬಂಡೆಯೊಂದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಛತ್ತೀಸ್‌ಗಢದ  ಅಬ್ಬು ಮತ್ತು ಬಿಹಾರದ ಮನು ಎಂದು ಗುರುತಿಸಲಾಗಿದ್ದು,  ಇಬ್ಬರೂ 20ರ ಹರೆಯದವರು ಎಂದು ಪೊಲೀಸರು ಹೇಳಿದ್ದಾರೆ.

 

ಶಾಲಾ ಪ್ರವಾಸದಲ್ಲಿ ಭೀಕರ ಬೋಟ್ ದುರಂತ; 27 ವಿದ್ಯಾರ್ಥಿಗಳ ಪೈಕಿ 13 ಮಂದಿ ಮೃತ, ಹಲವರು ನಾಪತ್ತೆ!

ಬಂಡೆ ಸ್ಫೋಟಿಸುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಬಂಡೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಗೊಂಡ ವ್ಯಕ್ತಿ ಪ್ರಸ್ತುತ ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೃತ ಕಾರ್ಮಿಕರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತೀರ್ಥಯಾತ್ರೆ ಮುಗಿಸಿ ಸೌದಿಯಿಂದ ಬೆಂಗಳೂರಿಗೆ ಬಂದ ತುಮಕೂರು ವ್ಯಕ್ತಿಯ ಲಗೇಜ್ ಮಿಸ್ಸಿಂಗ್, 3 ತಿಂಗಳಾದ್ರೂ ಸುಳಿವಿಲ್ಲ!

"ಈ ಸಂಬಂಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ" ಎಂದು ಅವರು ತಿಳಿಸಿದ್ದಾರೆ.

Follow Us:
Download App:
  • android
  • ios