ಉಡುಪಿ ಕಾಲೇಜು ವಿಡಿಯೋ ವಿವಾದ ವಿರುದ್ಧ ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ
ಉಡುಪಿ ನಗರದ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ವಿಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು (ಜು.28): ಉಡುಪಿ ನಗರದ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ವಿಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಕಾಲೇಜಿನ ಶೌಚಗೃಹದಲ್ಲಿ ವಿಡಿಯೋ ಮಾಡಿದ ಪ್ರಕರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಅವಹೇಳನ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವಿಟರ್ ಹಾಗೂ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಉಡುಪಿಯ ವಿಚಾರದ ಕುರಿತಾಗಿ ವಿದ್ಯಾರ್ಥಿನಿಯರ ಮಕ್ಕಳಾಟವನ್ನ, ಬಿಜೆಪಿ ರಾಜಕೀಯ ಕಳ್ಳಾಟವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ್ದರು. ಟ್ವೀಟ್ ಮಾಡಿದ ಬೆನ್ನಲ್ಲೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದನ್ನ ಶಕುಂತಲಾ (ಬಿಜೆಪಿ ಕಾರ್ಯಕರ್ತೆ) ಶೇರ್ ಮಾಡಿ ಮರು ಟ್ವೀಟ್ ಮೂಲಕ ಪೋಸ್ಟ್ ಮಾಡಿದ್ದರು.
ಉಡುಪಿ ಕಾಲೇಜು ಶೌಚಗೃಹದಲ್ಲಿ ಹಿಂದೂ ಹುಡ್ಗೀರ ಚಿತ್ರೀಕರಣ: ಮುಸ್ಲಿಂ ಯುವತಿಯರ ಕೃತ್ಯ ಒಪ್ಪಿಕೊಂಡ ಕಾಲೇಜು
ಸಿಎಂ ಸೊಸೆ, ಹೆಂಡ್ತಿ ವೀಡಿಯೋ ಮಾಡಿದ್ರೆ ಹೀಗೆ ಹೇಳ್ತಿದ್ರಾ?
ಜೊತೆಗೆ, ಟ್ವೀಟ್‌ಗೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡತಿಗೆ ಆಗಿದ್ರೆ ಹೀಗೆ ಹೇಳುತ್ತಿದ್ದರಾ ಎಂದು ಪ್ರಶ್ನೆ ಮಾಡಿದ್ದಾರೆ. ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿದ ದೂರು ದಾಖಲು ಮಾಡಲಾಗಿತ್ತು. ದೂರು ದಾಖಲಿಸಿಕೊಂಡು ಹೈಗ್ರೌಂಡ್ಸ್ ಪೊಲೀಸರು ಬಿಜೆಪಿ ಕಾರ್ಯಕರ್ತೆ ಶಕುಂತಲಾಳನ್ನ ಬಂಧಿಸಿದ್ದಾರೆ.
ತುಮಕೂರಿನ ಪ್ರತಿಭಟನೆಯಲ್ಲೂ ಭಾಗಿ: ಉಡುಪಿಯ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ರಹಸ್ಯ ಚಿತ್ರೀಕರಣವನ್ನು ಮಾಡಿರುವ ಘಟನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದನ್ನು ಖಂಡಿಸಿ ಮತ್ತು ಈ ಪ್ರಕರಣದ ಉನ್ನತಮಟ್ಟದ ತನಿಖೆಗೆ ಆಗ್ರಹಿಸಿ ತುಮಕೂರು ಬಿಜೆಪಿ ಜಿಲ್ಲಾ ಮಹಿಳಾಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆಯಲ್ಲಿ ಶಕುಂತಲಾ ಭಾಗಿಯಾಗಿದ್ದರು. ಮುಂದುರೆದು, ಟ್ವೀಟ್‌ನಲ್ಲಿ ಮುಸ್ಲಿಂ ಯುವತಿಯರು ಹಿಂದೂ ಹುಡುಗಿಯರ ನಗ್ನ ಚಿತ್ರ ವೀಡಿಯೋ ಮಾಡಿದ್ದು ತಮಾಷೆ,ಮಕ್ಕಳಾಟ ಎನ್ನುತ್ತಿರುವ ಕಾಂಗ್ರೆಸ್ ಮತ್ತದರ ಅನುಯಾಯಿಗಳು, ಅನ್ಯಾಯವಾದ ಹೆಣ್ಣುಮಕ್ಕಳು ಬರೆದಿರುವ ದೂರು ಕೂಡ ನಕಲಿ ಎಂದು ಹೇಳುತ್ತಾರೆಯೇ? ಎಂದು ಪ್ರಶ್ನೆ ಮಾಡಿದ್ದರು.
ಉಡುಪಿ ಕಾಲೇಜು ಶೌಚಗೃಹದಲ್ಲಿ ಹಿಂದೂ ಹುಡ್ಗೀರ ವಿಡಿಯೋ: 3 ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್
ಜೈಲಿನಿಂದ ಬಿಡುಗಡೆ: ಇನ್ನು ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನವಾದ ಬೆನ್ನಲ್ಲಿಯೇ ಹಲವು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ತೆರಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ನಂತರ, ಸ್ಟೇಷನ್ ಬೇಲ್ ಮೇಲೆ ಶಕುಂತಲಾ ಅವರನ್ನು ಬಿಡುಗಡೆ ಮಾಡಲಾಗಿದೆ. ಆದರೆ, ಟ್ವೀಟ್ ಮಾಡುವ ಮುನ್ನ ರಾಜ್ಯದ ಗಣ್ಯರಿಗೆ ಹಾಗೂ ಅವರ ಕುಟುಂಬಕ್ಕೆ ಅವಹೇಳನ ಮಾಡಿ ಪೋಸ್ಟ್ ಮಾಡಬಾರದು ಎಂದು ನೆಟ್ಟಿಗರು ಕಮೆಂಟ್‌ನಲ್ಲಿ ಸಲಹೆ ನೀಡಿದ್ದಾರೆ.