ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು 1 ರಿಂದ 10ನೇ ತರಗತಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸಾರ್ವಜನಿಕರು ಸುರಕ್ಷಿತವಾಗಿರಲು ಜಿಲ್ಲಾಡಳಿತ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.

ಉಡುಪಿ(ಜೂ.12): ಶುಕ್ರವಾರ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಹಾಗೂ 1 ರಿಂದ 10ನೇ ತರಗತಿಯವರೆಗಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಿಸಲಾಗಿದೆ.

ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದು ಸಾರ್ವಜನಿಕರು ಸುರಕ್ಷಿತವಾಗಿರುವಂತೆ ಮತ್ತು ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ. ಮಾಹಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಘೋಷಿಸಲಾಗಿದೆ.

ಇದನ್ನೂ ಓದಿ: Udupi Red Alert: ಉಡುಪಿ ಜಿಲ್ಲೆಗೆ ನಾಳೆ ರೆಡ್‌ ಅಲರ್ಟ್; ಶಾಲೆಗಳಿಗೆ ರಜೆ ಘೋಷಣೆ!

ಮೀನುಗಾರರಿಗೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆಯಾಗಿದ್ದು, ಗುರುವಾರದಿಂದ 3 ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ಪ್ರಮಾಣ ತುಸು ಹೆಚ್ಚಳವಾಗಿದ್ದು, ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.