Asianet Suvarna News Asianet Suvarna News

Hijab Controversy ಹಿಜಾಬ್ ಹಾಕದೇ ಬರಲಾಗುವುದಿಲ್ಲ ಅಂದ್ರೆ ಕಾಲೇಜಿಗೆ ಬರಬೇಡಿ ಎಂದ ಬಿಜೆಪಿ ಶಾಸಕ

*  ಉಡುಪಿ ಸರ್ಕಾರಿ ಮಹಿಳಾ ಕಾಲೇಜು ಹಿಜಾಬ್ ವಿವಾದ
* ಹಿಜಾಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ
* ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ  ತೀರ್ಮಾನ

udupi mla raghupathi bhat Takes Final decision In meeting on  students wearing hijab inside class rbj
Author
Bengaluru, First Published Jan 31, 2022, 8:00 PM IST

ಉಡುಪಿ, (ಜ.31):  ಸರ್ಕಾರಿ ಮಹಿಳಾ ಕಾಲೇಜು ಹಿಜಾಬ್ (Hijab ) ವಿವಾದಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ (MLA RaguPathi Bhat) ನೇತೃತ್ವದಲ್ಲಿ ನಡೆದ ಸಭೆ ಅಂತ್ಯವಾಗಿದ್ದು,  ಹಿಜಾಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ ಎಂದು ಸಭೆಯಲ್ಲಿ ತೀರ್ಮಾನವಾಗಿದೆ. 

ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಸೋಮವಾರ ಕಾಲೇಜು ಆಡಳಿತ ಮಂಡಳಿ, ಅಭಿವೃದ್ಧಿ ಸಮಿತಿ, ಪೋಷಕರು, ಉಪನ್ಯಾಸಕರ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜಿನ ತರಗತಿಗೆ ಹಿಜಾಬ್ ತೆಗೆದು ಹಾಜರಾಗುತ್ತೇನೆ ಎನ್ನುವ ನಿರ್ಧಾರ ತೆಗೆದುಕೊಂಡರಷ್ಟೇ ಕಾಲೇಜಿಗೆ ಬನ್ನಿ. ಹಿಜಾಬ್ ಹಾಕದೇ ಬರಲು ಸಿದ್ಧವಿಲ್ಲ ಎಂದಾದರೆ ಕಾಲೇಜು ಆವರಣದೊಳಗೂ ಬರಬೇಡಿ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.

Hijab Controversy: ಹಿಜಾಬ್‌ ಧರಿಸುವ ವಿದ್ಯಾರ್ಥಿನಿಯರಿಗೆ ಆನ್‌ಲೈನ್‌ ಪಾಠ ಎಂದ ಶಾಸಕ ರಘುಪತಿ ಭಟ್‌

ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿಷಯಕ್ಕೆ ಸಂಬಂಧಿಸಿ ಮೊನ್ನೆ ಕಾಲೇಜು ಅಭಿವೃದ್ಧಿ ಸಮಿತಿ, ಪೋಷಕರನ್ನೊಳಗೊಂಡಿರುವ ಸಮಿತಿ, ಉಪನ್ಯಾಾಸಕರ ಸಭೆ ಮಾಡಿದ್ದೇವೆ. ಹಿಜಾಬ್ ಬೇಕೆನ್ನುವ ನಾಲ್ವರು ವಿದ್ಯಾಾರ್ಥಿನಿಯರು, ಅವರ ಪೋಷಕರನ್ನು ಕರೆದಿದ್ದೇವೆ. ನಾವು ವಿವರವಾಗಿ ಮನವಿ ಮಾಡಿದ್ದೇವೆ. ಈ ಹಂತದಲ್ಲಿ ಹಿಜಾಬ್‌ಗೆ ಅವಕಾಶ ಕೊಡುವುದಕ್ಕೆ ಆಗಲ್ಲ. ಸರಕಾರ ಯಾವ ನಿರ್ಧಾರ ಮಾಡುತ್ತದೋ ಸಮಿತಿ ನಿರ್ಧಾರ ತನಕವೂ ಕಾಯಬೇಕು. ಕಾಂಪೌಂಡ್ ಆವರಣದವರೆಗೆ ಹಿಜಾಬ್ ಹಾಕಿಕೊಂಡು ಬಂದು ಕ್ಲಾಸ್‌ರೂಮ್‌ನಲ್ಲಿ ಹಿಜಾಬ್ ತೆಗೆದು ಹಾಜರಾಗಬೇಕು ಎಂದರು.

ಕಾಲೇಜು ಆವರಣದೊಳಗೆ ನಿಮ್ಮ ನಿರ್ಧಾರ ಮಾಡುವಂತಿಲ್ಲ. ನಮ್ಮ ನಿರ್ಧಾರ ಆಗಿದೆ. ಇಲ್ಲಿಗೆ ಬಂದು ಕಾಲೇಜಿನ ಶೈಕ್ಷಣಿಕ ವಾತಾವರಣ ಹಾಳು ಮಾಡಬಾರದೆಂದು ಹೇಳಿದ್ದೇವೆ. ಪೊಲೀಸ್ ಇಲಾಖೆಗೂ ತಿಳಿಸಿದ್ದೇವೆ. ಬೇರೆ ಬೇರೆ ಸಂಘ-ಸಂಸ್ಥೆಗಳು, ಮಾಧ್ಯಮದವರು, ಯಾರನ್ನು ನಾಳೆಯಿಂದ ಅವಕಾಶ ಬೇಡ. ಇನ್ನೆರಡು ತಿಂಗಳಲ್ಲಿ ಪರೀಕ್ಷೆ ಬರುತ್ತದೆ. ಉಳಿದ ಮಕ್ಕಳ ಪೋಷಕರು ದೂರುತ್ತಿದ್ದಾರೆ. ಈ ಸಮಸ್ಯೆಗಳನ್ನು ಪರಿಹರಿಸಿ. ಉಳಿದ ಮಕ್ಕಳಿಗೆ ಓದುವುದಕ್ಕೆ ಸಮಸ್ಯೆಯಗುತ್ತಿದೆ ಎಂದು ಶಾಸಕರು ಹೇಳಿದರು.

ರೈಲ್ವೆ ಕೂಲಿಗಳು ನಮಾಜ್ 
ಇತ್ತ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪ್ಲಾಟ್​ಫಾರ್ಮ್ 5 ರಲ್ಲಿ ಇರುವ ಕೊಠಡಿಯೊಂದರಲ್ಲಿ ರೈಲ್ವೆ ಕೂಲಿಗಳು ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲ್ವೇ ನಿಲ್ದಾಣದಲ್ಲಿರುವ ಕೂಲಿಗಳಿಗೆ ವಿಶ್ರಾಂತಿ ಪಡೆಯಲು ಮೀಸಲಿಡಲಾಗಿರುವ ಕೊಠಡಿಯಲ್ಲಿ ಸಿಬ್ಬಂದಿಗಳು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಕೊಠಡಿಯೊಳಗೆ ಮುಸ್ಲಿಂ ಸಮುದಾಯದ ಕೂಲಿಗಳು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋ ವೈರಲ್ ಹಿನ್ನಲೆ ರೈಲ್ವೆ ನಿಲ್ದಾಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Follow Us:
Download App:
  • android
  • ios