ಪೇಜಾವರ ಶ್ರೀಗಳ ನಿಧನಕ್ಕೆ ಸಿಎಂ ಕಂಬನಿ, ರಾಜ್ಯದಲ್ಲಿ 3 ದಿನ ಶೋಕಾಚರಣೆ!
ಪೇಜಾವರ ಶ್ರೀಗಳ ನಿಧನ| ಕಂಬನಿ ಮಿಡಿದ ಸಿಎಂ ಬಿ. ಎಸ್. ಯಡಿಯೂರಪ್ಪ| ಶ್ರೀಗಳ ಗೌರವಾರ್ಥ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಿಸಿದ ಸಿಎಂ
ಉಡುಪಿ[ಡಿ.29]: ಅನಾರೋಗ್ಯದಿಂದ ಬಳಲುತ್ತಿದ್ದ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಠ ಪೇಜಾವರದ ಶ್ರೀಗಳು ಕೃಷ್ಣೈಕ್ಯರಾಗಿದ್ದಾರೆ. ಇವರ ಅಗಲುವಿಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಅನೇಕ ಗಣ್ಯರು ಶ್ರೀಗಳ ಅಗಲುವಿಕೆಗೆ ಸಂತಾಪ ಸೂಚಿಸಿದ್ದಾರೆ. ಸಿಎಂ ಬಿ. ಎಸ್. ಯಡಿಯೂರಪ್ಪ ಕೂಡಾ ಶ್ರೀಗಳ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಶ್ರೀಗಳ ಗೌರವಾರ್ಥ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಿಸಿದ್ದಾರೆ.
"
ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಸಂಸ್ಕಾರ
ಪೇಜಾವರ ಶ್ರೀ ನಿಧನ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ 3 ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ಕೇಂದ್ರ ನಾಯಕರು ಅಂತಿಮ ದರ್ಶನ ಪಡೆಯಲು ಬೆಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ.
ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಶ್ರೀಗಳ ವೃಂದಾನವಕ್ಕೂ ಮುನ್ನ 3 ತಾಸು ಅಂತಿಮ ದರ್ಶನಕ್ಕೆ ವ್ಯವಸ್ಥೆಗೆ ಅವಕಾಶ ಮಾಡಲಾಗಿದೆ. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ರವಾನೆ ಮಾಡಲಾಗುತ್ತದೆ.
ವಿಶ್ವಸಂತ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅಸ್ತಂಗತ
"
ಡಿಸೆಂಬರ್ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ