ನವದೆಹಲಿ/ಉಡುಪಿ,[ಫೆ.05]: ಅಯೋಧ್ಯೆಯಲ್ಲಿ ಶ್ರೀರಾಮ ಮಂದರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಟ್ರಸ್ಟ್ ನಿರ್ಮಿಸಿದ್ದು, ಇದಕ್ಕೆ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಎಂದು ನಾಮಕರಣ ಮಾಡಲಾಗಿದೆ. 

ಸುಪ್ರೀಂ ಕೋರ್ಟ್ ಆದೇಶದಂತೆ ಈ ಟ್ರಸ್ಟ್ ರಚಿಸಲಾಗಿದ್ದು,  ರಾಮಮಂದಿರ ನಿರ್ಮಾಣದ ಎಲ್ಲಾ ಕಾರ್ಯಗಳನ್ನು ಇದೇ ಟ್ರಸ್ಟ್ ನೋಡಿಕೊಳ್ಳಬೇಕು. ಇದು ಸಂಪೂರ್ಣವಾಗಿ ಸ್ವಾಯತ್ತ ಟ್ರಸ್ಟ್ ಆಗಿ ಕಾರ್ಯ ನಿರ್ವಹಿಸಲಿದೆ. 

'ಪೇಜಾವರ ಶ್ರೀಗಳಿಂದ ರಾಮಮಂದಿರ ಶಂಕು ಸ್ಥಾಪನೆ ಮಾಡಿಸುವ ಇಚ್ಛೆ ಇತ್ತು'

 ರಾಮ ಮಂದಿರ ನಿರ್ಮಾಣವಾಗುವ ಜಾಗದ ಪಕ್ಕದಲ್ಲೇ ಕೇಂದ್ರ ಸರ್ಕಾರ ಟ್ರಸ್ಟ್ ಗೆ 67 ಹೆಕ್ಟೇರ್ ಜಾಗವನ್ನು ನೀಡಿದೆ. ಈ ಟ್ರಸ್ಟ್ ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರ ನಿರ್ಮಾಣ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಯಗಳನ್ನು ತೆಗೆದುಕೊಳ್ಳಲಿದೆ.

ಇನ್ನು ಅಯೋಧ್ಯೆ ರಾಮಮಂದಿರ ಟ್ರಸ್ಟ್ ಗೆ  ವಿಶ್ವಸ್ಥರಾಗಿ ಪೇಜಾವರ ಮಠದ, ವಿಶ್ವಪ್ರಸನ್ನತೀರ್ಥ ಶ್ರೀಪಾದರು ನೇಮಕರಾಗಿದ್ದಾರೆ. ಕೃಷ್ಣೈಕ್ಯರಾದ ವಿಶ್ವೇಶ ತೀರ್ಥರ ಶಿಷ್ಯರಾಗಿರೋ ವಿಶ್ವಪ್ರಸನ್ನ ತೀರ್ಥರನ್ನು ಈ ಪುಣ್ಯ ಕಾರ್ಯಕ್ಕೆ ಕೇಂದ್ರ ಸರ್ಕಾರ ನೇಮಿಸಿದೆ. 

ಅಯೋಧ್ಯೆಯ ರಾಮ ಮಂದಿರ ವಿಷಯವಾಗಿ ಸುಪ್ರೀಂಕೋರ್ಟ್ ನ ಮಾರ್ಗಸೂಚಿಯಂತೆ 'ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್' ಸ್ಥಾಪಿಸುವ ಕೇಂದ್ರದ ತೀರ್ಮಾನವನ್ನು ಮುಖ್ಯಮಂತ್ರಿ ಶ್ರೀ @BSYBJP ಅವರು ಸ್ವಾಗತಿಸಿದ್ದಾರೆ.
ಪ್ರಧಾನಿಯವರನ್ನು ವೈಯಕ್ತಿಕವಾಗಿ ಹಾಗೂ ಜನತೆ ಪರವಾಗಿ ಅಭಿನಂದಿಸುವುದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

— CM of Karnataka (@CMofKarnataka) February 5, 2020