ಜೂನ್ 12 ರಂದು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಜಿಲ್ಲಾಡಳಿತವು ರೆಡ್ ಅಲರ್ಟ್ ಘೋಷಿಸಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯದ ಇತರ ಜಿಲ್ಲೆಗಳಿಗೂ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Udupi Red Alert June 12, 2025: ರಾಜ್ಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಉಡುಪಿ ಜಿಲ್ಲೆಯಾದ್ಯಂತ ನಾಳೆ (ಜೂನ್ 12) ವ್ಯಾಪಕ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಂಜಾಗ್ರತಾ ಕ್ರಮವಾಗಿ, ನಿವಾಸಿಗಳು ಮತ್ತು ಪ್ರವಾಸಿಗರು ಕಡಲತೀರ, ನದಿಗಳು ಮತ್ತು ಜಲಪಾತಗಳಿಗೆ ಸಂಪರ್ಕಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಮತ್ತು ಈ ಪ್ರದೇಶಗಳಲ್ಲಿ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆಯದಂತೆ ಸೂಚಿಸಲಾಗಿದೆ.

ರಾಜ್ಯದ 10 ಜಿಲ್ಲೆಗಳಿಗೆ ರೆಡ್‌ ಅಲರ್ಟ್!

ರಾಜ್ಯದ 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಇದ್ದರೆ ಇತರೆ ಜಿಲ್ಲೆಗಳಿಗೆ ಆರೆಂಜ್-ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ಹವಾಮಾನ ಇಲಾಖೆಯ ಪ್ರಕಾರ, ಗುರುವಾರದಿಂದ (ಜೂನ್ 12) ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಗದಗ, ಬೆಳಗಾವಿ, ಕೊಪ್ಪಳ, ರಾಯಚೂರು, ಬಳ್ಳಾರಿ, ದಾವಣಗೆರೆ, ಮತ್ತು ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಜೊತೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಮಂಡ್ಯ, ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು ಬುಧವಾರದಿಂದ ಉತ್ತರ ಕನ್ನಡ, ಉಡುಪಿ, ಗದಗ, ರಾಯಚೂರು, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.

ಜನತೆಯು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸುರಕ್ಷಿತವಾಗಿರಲು ಜಿಲ್ಲಾಡಳಿತ ಮತ್ತು ಹವಾಮಾನ ಇಲಾಖೆ ಸೂಚಿಸಿದೆ.