ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್: ಬಿಬಿಎಂಪಿ ವಿರುದ್ಧ ಹೈಕೋರ್ಟ್ ಕಿಡಿ
ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳನ್ನು ಹಾಕಿ ನಗರದ ಸೌಂದರ್ಯ ವಿರೂಪ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ನಿರ್ಲಕ್ಷ್ಯ ತೋರುತ್ತಿರುವ ಬಿಬಿಎಂಪಿ ವಿರುದ್ಧ ಹೈಕೋರ್ಟ್(Karnataka Highcourt) ಮತ್ತೆ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರು (ಮಾ.21) ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳನ್ನು ಹಾಕಿ ನಗರದ ಸೌಂದರ್ಯ ವಿರೂಪ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ನಿರ್ಲಕ್ಷ್ಯ ತೋರುತ್ತಿರುವ ಬಿಬಿಎಂಪಿ ವಿರುದ್ಧ ಹೈಕೋರ್ಟ್(Karnataka Highcourt) ಮತ್ತೆ ಅಸಮಾಧಾನ ವ್ಯಕ್ತಪಡಿಸಿದೆ.
ಸ್ವಯಂ ವೈಭವೀಕರಣ ಮತ್ತು ಬೇರೊಬ್ಬರ ಓಲೈಕೆಗಾಗಿ ಅನಧಿಕೃತ ಜಾಹೀರಾತು ಫಲಕಗಳನ್ನು ಅಳಡಿಸುವವರ ವಿರುದ್ಧ ಕ್ರಮ ಜರುಗಿಸದ ಬಿಬಿಎಂಪಿ(BBMP)ಯ ಕ್ರಮ ನಿಜಕ್ಕೂ ಆಘಾತಕಾರಿವಾಗಿದೆ. ಈ ವಿಚಾರದಲ್ಲಿ ಪಾಲಿಕೆ ಕೈಗೊಳ್ಳುತ್ತಿರುವ ಕ್ರಮಗಳು ಕೇವಲ ನಾಮ್‌ಕೆವಾಸ್ತೆ ಆಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ(justic PB Varale) ಅವರ ನೇತೃತ್ವದ ವಿಭಾಗೀಯ ಪೀಠ ಚಾಟಿ ಬೀಸಿದೆ.
ಬೆಂಗಳೂರು: ಅನಧಿಕೃತ ಫ್ಲೆಕ್ಸ್: ಅಧಿಕಾರಿಗಳ ವಿರುದ್ಧ ಕೇಸ್ ಹಾಕಿ: ಹೈಕೋರ್ಟ್
ಅಲ್ಲದೆ, ಪ್ರಕರಣದಲ್ಲಿ ನ್ಯಾಯಾಲಯ ನೀಡಿರುವ ಆದೇಶ ಪಾಲಿಸಿರುವ ಬಗ್ಗೆ ಬಿಬಿಎಂಪಿ ಸಲ್ಲಿಸಿರುವ ಅನುಪಾಲನಾ ವರದಿ ಒಂದಿಷ್ಟುಸಮಾಧಾನ ತಂದಿಲ್ಲ. ಬ್ಯಾನರ್, ಫ್ಲೆಕ್ಸ್ ಹಾಕಿ ನಗರದ ಸೌಂದರ್ಯವನ್ನು ಹಾಳು ಮಾಡುವವರ ವಿರುದ್ಧ ಕ್ರಮ ಕೈಗೊಂಡು ದಂಡ ವಿಧಿಸಬೇಕು. ಜಾಹೀರಾತು ಫಲಕಗಳನ್ನು ತೆರವುಗೊಳಿಸಿರುವ ಮತ್ತು ತಪ್ಪಿತಸ್ಥರ ವಿರುದ್ಧ ಕೈಗೊಳ್ಳುವ ಕ್ರಮಗಳ ಬಗ್ಗೆ ನಾಲ್ಕು ವಾರಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ತಾಕೀತು ಮಾಡಿದೆ.
ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಹಾವಳಿಗೆ ನಿಯಂತ್ರಣ ಹೇರಲು ಬಿಬಿಎಂಪಿ(BBMP)ಗೆ ನಿರ್ದೇಶಿಸುವಂತೆ ಕೋರಿ ಮಾಯ್ಗೆಗೌಡ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪ್ರಮಾಣಪತ್ರ ಸಲ್ಲಿಸಿ, 2023ರ ಜನವರಿಯಿಂದ ಇಲ್ಲಿವರೆಗೆ ಬಿಬಿಎಂಪಿಯ ಎಲ್ಲಾ ಎಂಟು ವಲಯಗಳಲ್ಲಿ ಒಟ್ಟಾರೆ 9,750 ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌್ಸ ಹಾಗೂ ಇತರೆ ಪ್ರದರ್ಶನ ಫಲಕ ಗುರುತಿಸಲಾಗಿದೆ. ಅದರಲ್ಲಿ 9,040 ತೆರವುಗೊಳಿಸಲಾಗಿದ್ದು, 41 ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ. 80 ದೂರು ದಾಖಲಿಸಿಕೊಂಡು, 53 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ.
9,750 ಪ್ರಕರಣಕ್ಕೆ ಕೇವಲ 53 ಕೇಸ್!
ಈ ಅಂಕಿ-ಅಂಶ ಗಮನಿಸಿದ ನ್ಯಾಯಪೀಠ, 9,750 ಪ್ರಕರಣಗಳಲ್ಲಿ ಕೇವಲ 53 ಎಫ್‌ಐಆರ್ ದಾಖಲಾಗಿದೆ. ವಲಯವಾರು ಗಮನಿಸಿದರೆ ಕನಿಷ್ಠ 448ರಿಂದ ಗರಿಷ್ಠ 2,525 ಅನಧಿಕೃತ ಫ್ಲೆಕ್ಸ್, ಬ್ಯಾನರ್(Flex banner holdings)ಗಳನ್ನು ಪತ್ತೆ ಹಚ್ಚಲಾಗಿದೆ. ಎಫ್‌ಐಆರ್ ಮಾತ್ರ ಒಂದಂಕಿಯಲ್ಲಿದೆ. ಕನಿಷ್ಠ 6 ಮತ್ತು ಗರಿಷ್ಠ 30 ಎಫ್‌ಐಆರ್‌ಗಳಾಗಿವೆ. ಇದರಿಂದ ಬಿಬಿಎಂಪಿಯ ಕ್ರಮ ಕೇವಲ ನಾಮಕಾವಾಸ್ತೆಯಾಗಿದೆ ಎನ್ನುವುದು ತಿಳಿಯುತ್ತದೆ ಎಂದು ಕಿಡಿಕಾರಿತು.
Chikkamagaluru: ಪರವಾನಗಿ ಪಡೆಯದೆ ಬ್ಯಾನರ್ಸ್, ಫ್ಲೆಕ್ಸ್, ಪೋಸ್ಟರ್ ಅಂಟಿಸುವುದು ನಿಷೇಧ: ಜಿಲ್ಲಾಧಿಕಾರಿ ರಮೇಶ್
ಜತೆಗೆ, ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವುಗೊಳಿಸಲು ಹೆಚ್ಚುವರಿ ಸಿಬ್ಬಂದಿ ಮತ್ತು ಯಂತ್ರಗಳು ಬೇಕಾಗುತ್ತದೆ. ಅದಕ್ಕಾಗಿ ಆರ್ಥಿಕ ವೆಚ್ಚವೂ ಇದೆ ಎಂದು ಬಿಬಿಎಂಪಿ ನೀಡಿದ ಹೇಳಿಕೆಗೆ ಮತ್ತಷ್ಟುಕೋಪಗೊಂಡ ಹೈಕೋರ್ಚ್, ತಪ್ಪಿತಸ್ಥರ ವಿರುದ್ಧ ದಂಡ ವಿಧಿಸಿರುವ ಬಗ್ಗೆ ಕೇಳಿದರೆ ಬಿಬಿಎಂಪಿ ಬಳಿ ಉತ್ತರವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು.