‘ರಾಷ್ಟ್ರೀಯ ಶಿಕ್ಷಣ ನೀತಿ- 2020’ ಅಡಿ ಬರುವ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಾಲಾ ಹಂತದಿಂದಲೇ ಮಕ್ಕಳಲ್ಲಿ ಪ್ರಯೋಗ ಆಧಾರಿತ ಕಲಿಕೆ ಮತ್ತು ತರಬೇತಿಗೆ ಹೆಚ್ಚಿನ ಆದ್ಯತೆ ನೀಡಿ ವಿಜ್ಞಾನ ಮತ್ತು ಸಂಶೋಧನಾ ಮನೋಭಾವ ಮೂಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಬೆಂಗಳೂರು (ಫೆ.26): ‘ರಾಷ್ಟ್ರೀಯ ಶಿಕ್ಷಣ ನೀತಿ- 2020’ ಅಡಿ ಬರುವ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಾಲಾ (Primary School) ಹಂತದಿಂದಲೇ ಮಕ್ಕಳಲ್ಲಿ (Childrens) ಪ್ರಯೋಗ ಆಧಾರಿತ ಕಲಿಕೆ ಮತ್ತು ತರಬೇತಿಗೆ ಹೆಚ್ಚಿನ ಆದ್ಯತೆ ನೀಡಿ ವಿಜ್ಞಾನ ಮತ್ತು ಸಂಶೋಧನಾ ಮನೋಭಾವ ಮೂಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಹೇಳಿದ್ದಾರೆ.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಶುಕ್ರವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ‘29ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ’ದಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಪ್ರೋತ್ಸಾಹಿಸಲು ಶಾಲೆಗಳಲ್ಲಿ ಸ್ಥಾಪಿಸಲಾಗಿರುವ 700 ಕ್ಕೂ ಹೆಚ್ಟು‘ಅಟಲ್ ಟಿಂಕರಿಂಗ್ ಲ್ಯಾಬ್’ಗಳು ಕಾರ್ಯ ನಿರ್ವಹಿಸುತ್ತಿವೆ. ಶಾಲೆ ಹಂತದಲ್ಲಿ ಲ್ಯಾಬ್ ತರಗತಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. 2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಶಿಕ್ಷಣದಲೇ ಎನ್‌ಇಪಿ ಜಾರಿಗೊಳಿಸಲು ಸಿದ್ಧತೆ ನಡೆಸಲಾಗಿದೆ. ಎನ್‌ಇಪಿ ಅಡಿ ಪ್ರಾಥಮಿಕ ಹಂತದಿಂದಲೇ ಮಕ್ಕಳಲ್ಲಿ ವೈಜ್ಞಾನಿಕ ಮತ್ತು ಸಂಶೋಧನೆ ಮನೋಭಾವ ಬೆಳೆಸುವ ಪ್ರಯತ್ನ ಮಾಡಲಾಗುವುದು ಎಂದರು.
Department of Education: ಅನುದಾನಿತ ಪ್ರೌಢಶಾಲೆ ಖಾಲಿ ಹುದ್ದೆ ಭರ್ತಿಗೆ ಕ್ರಮ: ನಾಗೇಶ್
ಐಟಿ-ಬಿಟಿ ಇಲಾಖೆಯಿಂದಲೇ ವಿಜ್ಞಾನ ದಿನ: ಉನ್ನತ ಶಿಕ್ಷಣ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ (Dr CN Ashwath Narayan) ಮಾತನಾಡಿ, ಮುಂದಿನ ವರ್ಷದಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದಲೇ ರಾಜ್ಯಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಹೇಳಿದರು.
ರಾಜ್ಯವು ಇಂದು ಗಳಿಸಿರುವ ಆರ್ಥಿಕ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳ ಪಾತ್ರ ಮಹತ್ವದ್ದು. ಬದುಕಿನ ಪ್ರತೀ ಸಮಸ್ಯೆಗೂ ವಿಜ್ಞಾನದಲ್ಲಿ ಪರಿಹಾರವಿದೆ. ಹಾಗಾಗಿ ಮಕ್ಕಳಲ್ಲಿ ಪೂರ್ವ ಪ್ರಾಥಮಿಕ ಹಂತದಿಂದಲೇ ಗಣಿತ ಮತ್ತು ವಿಜ್ಞಾನದ ಬಗ್ಗೆ ಒಲವು ಮೂಡಿಸಬೇಕು. ಈಗ ಮಾನವಿಕಗಳ ಕಲಿಕೆಯಲ್ಲೂ ತಂತ್ರಜ್ಞಾನ ನಿರ್ಣಾಯಕ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಏನೇ ಕಲಿತರೂ ವೈಜ್ಞಾನಿಕ ಮನೋಭಾವವನ್ನು ರೂಢಿಸಿಕೊಳ್ಳಬೇಕು, ಜತೆಗೆ ವಿಜ್ಞಾನವು ನಮ್ಮ ಸಂಸ್ಕೃತಿ ಮತ್ತು ಧರ್ಮಗಳ ಭಾಗವಾಗಬೇಕು ಎಂದು ಸಲಹೆ ನೀಡಿದರು.
ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಬಾಲ ವಿಜ್ಞಾನಿಗಳಿಗೆ ಸಚಿವರು ಪ್ರಶಸ್ತಿ ಪ್ರದಾನ ಮಾಡಿದರು. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಗಿರೀಶ್ ಕಡ್ಲೇವಾಡ, ವಿಜ್ಞಾನಿಗಳಾದ ಡಾ.ಅನುರಾಧಾ, ಕೆ.ವಿ. ಮಾಲಿನಿ, ಬಿ.ಎನ್.ಶ್ರೀನಾಥ್, ಶ್ರೀಮತಿ ಹರಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
Hijab row: ಬಳೆ, ಸಿಂಧೂರ, ಕುಂಕುಮ ಧರಿಸಿ ಬಂದರೆ ವಿದ್ಯಾರ್ಥಿಗಳನ್ನು ತಡೆಯುವಂತಿಲ್ಲ
ಪರೀಕ್ಷೆಗೆ ಗೈರಾದರೆ ಮರುಪರೀಕ್ಷೆ ಇಲ್ಲ: ಹಿಜಾಬ್(Hijab) ಕಾರಣದಿಂದ ವಿದ್ಯಾರ್ಥಿಗಳು (Students) ಪರೀಕ್ಷೆಗಳಿಗೆ ಗೈರು ಹಾಜರಾದರೆ ಅವರಿಗೆ ಬೇರೆ ಆಯ್ಕೆಗಳಿರುವುದಿಲ್ಲ. ಹಿಜಾಬ್ ತೆಗೆದು ಪರೀಕ್ಷಾ ಕೇಂದ್ರಕ್ಕೆ ಬರಬೇಕು. ಯಾರೂ ಕೂಡ ಹಟ ಮಾಡಿ ಶೈಕ್ಷಣಿಕ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನವಿ ಮಾಡಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ (High Court) ನೀಡಿರುವ ಆದೇಶವನ್ನು ಕೆಲವರು ವಿರೋಧಿಸಿದ್ದಾರೆ. ಅಂತಹವರ ಪರವಾಗಿ ಕಾಂಗ್ರೆಸ್‌ನವರು ಮಾತನಾಡುವುದು ಸರಿಯಲ್ಲ. ವಿದ್ಯಾರ್ಥಿಗಳು ಹೈಕೋರ್ಟ್ ಆದೇಶ ಪಾಲಿಸಿ, ಶಾಲೆ, ಕಾಲೇಜು, ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ತೆಗೆದು ಬರಬೇಕು. ಹಿಜಾಬ್‌ಗಾಗಿ ಹಟ ಹಿಡಿದು ಕೂತರೆ ಇಡೀ ವರ್ಷದ ಶೈಕ್ಷಣಿಕ ಜೀವನ ವ್ಯರ್ಥವಾಗುತ್ತದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.
