ಹೆಚ್.ಡಿ ರೇವಣ್ಣ- ಪ್ರಜ್ವಲ್ ಪ್ರಕರಣದಲ್ಲಿ ಅಂತರ ಕಾಪಾಡಿಕೊಂಡ ಅಮಿತ್ ಶಾ..!

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ಕಾಪಾಡಿಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದರು. ಇದೀಗ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಅಂತರ ಕಾಪಾಡಿಕೊಂಡಿದ್ದಾರೆ. 

Union Minister Amit Shah kept Distance in HD Revanna Prajwal Revanna case grg

ಬೆಂಗಳೂರು(ಮೇ.04): ಮಾಜಿ ಸಚಿವ ಹೆಚ್.ಡಿ ರೇವಣ್ಣ ಹಾಗೂ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂತರ ಕಾಪಾಡಿಕೊಂಡಿದ್ದಾರೆ. 

ಹೌದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ಕಾಪಾಡಿಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದರು. ಇದೀಗ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಅಂತರ ಕಾಪಾಡಿಕೊಂಡಿದ್ದಾರೆ. 
ಇಂದು(ಶನಿವಾರ) ಮಧ್ಯಾಹ್ನದಿಂದ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ವಾಸ್ತವ್ಯ ಹೂಡಿದ್ದರು. ಇದೇ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ರಾತ್ರಿ 8:15 ಕ್ಕೆ ಅಮಿತ್ ಶಾ ಆಗಮಿಸಿದ್ದರು. 

ದೇವೇಗೌಡರ ಮನೆಯಲ್ಲೇ ರೇವಣ್ಣ ಬಂಧನ, ಶರಣಾಗತಿಗೆ ಮುಂದಾದ್ರಾ ಪ್ರಜ್ವಲ್ ರೇವಣ್ಣ?

ಆಂಧ್ರಪ್ರದೇಶ ಚುನಾವಣಾ ಪ್ರಚಾರಕ್ಕೆ ಹೋಗುವುದಾಗಿ ಬೆಂಗಳೂರಿನ ಆಗಮಿಸಿ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಅಮಿತ್‌ ಶಾ ವಾಸ್ತವ್ಯ ಹೂಡಿದ್ದಾರೆ. ಅಮಿತ್ ಶಾ ಹೊಟೇಲ್‌ಗೆ ಬಂದು ಒಂದು ಗಂಟೆಯ ಬಳಿಕ ಕುಮಾರಸ್ವಾಮಿ ಹೋಟೆಲ್‌ನಿಂದ ತೆರಳಿದ್ದಾರೆ. ಅಮಿತ್ ಶಾ ಭೇಟಿಯಾಗದೆ ಹೆಚ್.ಡಿ‌ ಕುಮಾರಸ್ವಾಮಿ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ವಲ್‌ ರೇವಣ್ಣ ಕೇಸಿನಿಂದ ಬಿಜೆಪಿಗೂ ಮುಜುಗರವಾಗಿದೆ. ಹೀಗಾಗಿ ಈ ಪ್ರಕರಣದಿಂದ ಅಮಿತ್ ಶಾ ಅಂತರ ಕಾಪಾಡಿಕೊಂಡಿದ್ದಾರೆ. 

Latest Videos
Follow Us:
Download App:
  • android
  • ios