ರಾಜ್ಯದ ಆರೋಗ್ಯ ಸಚಿವರಾಗಿ ಇತ್ತೀಚೆಗಷ್ಟೇ ಜವಾಬ್ದಾರಿ ವಹಿಸಿಕೊಂಡ ಡಾ. ಸುಧಾಕರ್ ಅವರಿಗೆ ಕೇಂದ್ರದಿಮದ ಪ್ರಶಂಸೆ ದೊರಕಿದೆ. 

ಬೆಂಗಳೂರು (ನ.05): ಕೋವಿಡ್‌ ನಿಯಂತ್ರಣ ವಿಷಯದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳು ಸಮಾಧಾನಕರವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರು ಸಂಪೂರ್ಣ ಸೋಂಕು ನಿಯಂತ್ರಣಕ್ಕೆ ಇನ್ನಷ್ಟುಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಸಲಹೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ ಹಾಗೂ ವ್ಯಾಕ್ಸಿನ್‌ ವಿತರಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾಡಳಿತಗಳೊಂದಿಗೆ ಬುಧವಾರ ವಿಡಿಯೋ ಸಂವಾದ ನಡೆಸಿದ ಅವರು, ಕರ್ನಾಟಕದಲ್ಲಿ ಲಾಕ್‌ಡೌನ್‌ ಸಡಿಲಿಕೆ ಬಳಿಕ ಹೆಚ್ಚಳವಾಗಿದ್ದ ಸೋಂಕು ಮತ್ತು ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದು ಸಮಾಧಾನಕರ ಸಂಗತಿ ಎಂದರು.

ಮುಂದಿನ ದಿನಗಳಲ್ಲಿ ಇನ್ನಷ್ಟುಸುಧಾರಣಾ ಕ್ರಮಗಳ ಮೂಲಕ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಮುಂಬರುವ ಚಳಿಗಾಲ ಮತ್ತು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಕಾರ್ಯತಂತ್ರ ರೂಪಿಸಬೇಕು. ಅಂತಾರಾಷ್ಟ್ರೀಯ ಮತ್ತು ಅಂತರಾಜ್ಯ ಪ್ರಯಾಣಿಕರ ಮೇಲೆ ನಿಗಾವಹಿಸಬೇಕು. ಹಾಗೆಯೇ ಐಎಲ್‌ಐ ಮತ್ತು ಸಾರಿ ಪ್ರಕರಣಗಳನ್ನು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸಿ ಸೋಂಕು ಹರಡುವಿಕೆ ನಿಯಂತ್ರಿಸಬೇಕು. ವ್ಯಾಕ್ಸಿನ್‌ ವಿಷಯದಲ್ಲಿ ನೀಡಲಾಗಿರುವ ಸೂಚನೆ ಸಂಬಂಧ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

"

ಮಹಾಮಾರಿಗೆ ಸಿಕ್ತು ಬ್ರಹ್ಮಾಸ್ತ್ರ : ಈ ಲಸಿಕೆಯಿಂದ ತಡೆಯಬಹುದು ಕೊರೋನಾ .

ಇನ್ನು, ರಾಜ್ಯದ ಸಚಿವ ಸುಧಾಕರ್‌ ಅವರು ರಾಜ್ಯ ಸರ್ಕಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹಂತ ಹಂತವಾಗಿ ಹೊರಡಿಸಿದ ಎಲ್ಲಾ ಮಾರ್ಗಸೂಚಿಗಳ ಅನುಷ್ಠಾನಕ್ಕೆ ಕೈಗೊಂಡಿರುವ ಕ್ರಮಗಳನ್ನು ಕೇಂದ್ರ ಸಚಿವರಿಗೆ ಸವಿವರವಾಗಿ ವಿವರಿಸಿದರು. ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಕೇಂದ್ರ ನೀಡಿರುವ ಸಹಕಾರಕ್ಕೆ ಕೃತಜ್ಞತೆಗಳನ್ನು ತಿಳಿಸಿದರು.

ಲಾಕ್‌ಡೌನ್‌ಗೆ ಮುಂಚೆ ಉತ್ತಮವಾಗಿ ನಿಯಂತ್ರಣದಲ್ಲಿದ್ದ ಕೋವಿಡ್‌ ಬಳಿಕ ಅಂತಾರಾಷ್ಟ್ರೀಯ ಮತ್ತು ಅಂತಾರಾಜ್ಯ ಪ್ರಯಾಣಿಕರು ಮತ್ತು ನೆರೆಯ ಐದು ರಾಜ್ಯಗಳ ಸಂಚಾರ ಸಂಪರ್ಕದಿಂದ ಹೆಚ್ಚಳವಾಯಿತು. ಆದರೂ ಕಟ್ಟುನಿಟ್ಟಿನ ಕ್ರಮ ಮತ್ತು ಪರೀಕ್ಷಾ ಸಂಖ್ಯೆ ಹೆಚ್ಚಳದ ಈಗ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ. ಮರಣದ ಪ್ರಮಾಣವನ್ನು ಶೇಕಡಾ ಒಂದಕ್ಕಿಂತ ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ. ಮುಂದಿನ ಚಳಿಗಾಲ ಮತ್ತು ಹಬ್ಬದ ದಿನಗಳಲ್ಲಿ ನಮ್ಮ ಕಾರ್ಯತಂತ್ರದಲ್ಲಿ ರಾಜಿ ಮಾಡಿಕೊಳ್ಳದೆ ಎಚ್ಚರಿಕೆ ಯಿಂದ ಮುಂದುವರಿಯಲಾಗುವುದು. ಸಾರ್ವಜನಿಕ ಜಾಗೃತಿಗೆ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಕೇಂದ್ರ ಸಚಿವರ ಗಮನಕ್ಕೆ ತಂದರು.

ಸಂವಾದದಲ್ಲಿ ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್‌ ಕುಮಾರ್‌ ಇದ್ದರು