ಭೂ ಒತ್ತುವರಿ: ಕೇಂದ್ರ ಸಚಿವ ಕುಮಾರಸ್ವಾಮಿಗೆ ಹೈಕೋರ್ಟ್‌ನಲ್ಲಿ ಸಂಕಷ್ಟ?
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತ್ರತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಹೊರಡಿಸಿರುವ ಆದೇಶ ಜಾರಿಗೊಳಿಸುವಂತೆ ಹೈಕೋರ್ಟ್ ಈ ಹಿಂದೆ ಆದೇಶಿಸಿತ್ತು. ಈ ಆದೇಶ ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಎಸ್.ಆರ್.ಹಿರೇಮಠ ನೇತೃತ್ವದ ಸಮಾಜ ಪರಿವರ್ತನಾ ಸಮುದಾಯ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.
ಬೆಂಗಳೂರು(ಅ.25): ರಾಮನಗರದ ಬಿಡದಿಯ ಕೇತಗಾನಹಳ್ಳಿಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮದ್ದೂರು ಮಾಜಿ ಶಾಸಕ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮತ್ತಿತರರು ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎನ್ನಲಾದ ಪ್ರಕರಣ ಸಂಬಂಧ ಸಮಗ್ರ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತ್ರತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಹೊರಡಿಸಿರುವ ಆದೇಶ ಜಾರಿಗೊಳಿಸುವಂತೆ ಹೈಕೋರ್ಟ್ ಈ ಹಿಂದೆ ಆದೇಶಿಸಿತ್ತು. ಈ ಆದೇಶ ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಎಸ್.ಆರ್.ಹಿರೇಮಠ ನೇತೃತ್ವದ ಸಮಾಜ ಪರಿವರ್ತನಾ ಸಮುದಾಯ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.
ಸಿಪಿ ಯೋಗೇಶ್ವರ್ ವಿರುದ್ದ ಗೆದ್ದು ಬೀಗ್ತಾರ ನಿಖಿಲ್ ಕುಮಾರಸ್ವಾಮಿ? ಚನ್ನಪಟ್ಟಣದ ಚದುರಂಗ!
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಅವರ ನೇತೃತ್ವದ ವಿಭಾಗೀಯ ಪೀಠ, ಹೊಸದಾಗಿ ಪ್ರಕರಣದ ತನಿಖೆ ನಡೆಸಲು ಅನುಮತಿ ನಿರಾಕರಿಸಿತು. ಆದರೆ, ಸರ್ಕಾರ ಸಲ್ಲಿಸಿರುವ 11 ಪ್ರಮಾಣ ಪತ್ರಗಳನ್ನು ಅಧ್ಯಯನ ಮಾಡಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನ.20ಕ್ಕೆ ಮುಂದೂಡಿತು.