Asianet Suvarna News Asianet Suvarna News

ಮಂಡ್ಯದಲ್ಲಿ ಪೆಟ್ರೋಲ್‌ ಬಾಂಬ್‌ ನೋಡಿದ್ದು ಇದೇ ಮೊದ್ಲು: ಕೇಂದ್ರ ಸಚಿವ ಕುಮಾರಸ್ವಾಮಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಕೆ ಮಾಡುತ್ತಿರುವುದೇ ಇಂಥ ಘಟನೆಗಳಿಗೆ ಕಾರಣ. 30ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಸಿಕ್ಕಸಿಕ್ಕ ಕಡೆ ಅಂಗಡಿಗಳ ಬಾಗಿಲು ಒಡೆದು ದೋಚಲಾಗಿದೆ. ಮನಸೋ ಇಚ್ಛೆ ದೊಂಬಿ ಎಬ್ಬಿಸಲಾಗಿದೆ. ಇಂತಹ ಕಳವಳಕಾರಿ ಘಟನೆಯನ್ನು ರಾಜ್ಯದ ಗೃಹ ಸಚಿವರು ಸಣ್ಣ ವಿಚಾರ ಎಂದು ಹೇಳಿರುವುದು ದುರದೃಷ್ಟಕರ ಎಂದ ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ
 

Union Minister HD Kumaraswamy React to Nagamangala Riot grg
Author
First Published Sep 13, 2024, 10:26 AM IST | Last Updated Sep 13, 2024, 10:26 AM IST

ನವದೆಹಲಿ(ಸೆ.13): ಗಣೇಶ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ಎಸೆತ, ಬೆಂಕಿ ಹಚ್ಚುವುದು, ತಲ್ವಾರ್, ಕತ್ತಿ ಹಿಡಿದು ಝಳಪಿಸುವುದು, ಪೆಟ್ರೋಲ್ ಬಾಂಬ್ ಎಸೆಯುವುದನ್ನು ಮಂಡ್ಯ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ನೋಡಿದ್ದು. ರಾಜ್ಯ ಕಾಂಗ್ರೆಸ್ ಸರ್ಕಾರದ ಓಲೈಕೆ, ತುಷ್ಟಿಕರಣದ ರಾಜಕಾರಣವೇ ಇದಕ್ಕೆ ಕಾರಣ ಎಂದು ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. 

ನಾಗಮಂಗಲ ಗಲಭೆಗೆ ಸಂಬಂಧಿಸಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ಸಣ್ಣ ಪ್ರಕರಣ ಎಂದು ಹೇಳಿಕೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವ‌ರ್ ಅವರ ಹೇಳಿಕೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು. 

ಕುಮಾರಸ್ವಾಮಿಯಂತಹ ರಾಜಕಾರಣಿಗಳಿಂದಲೇ ಗಲಭೆಗಳು ಆಗೋದು: ಸಚಿವ ಜಮೀರ್ ಅಹ್ಮದ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಕೆ ಮಾಡುತ್ತಿರುವುದೇ ಇಂಥ ಘಟನೆಗಳಿಗೆ ಕಾರಣ. 30ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಸಿಕ್ಕಸಿಕ್ಕ ಕಡೆ ಅಂಗಡಿಗಳ ಬಾಗಿಲು ಒಡೆದು ದೋಚಲಾಗಿದೆ. ಮನಸೋ ಇಚ್ಛೆ ದೊಂಬಿ ಎಬ್ಬಿಸಲಾಗಿದೆ. ಇಂತಹ ಕಳವಳಕಾರಿ ಘಟನೆಯನ್ನು ರಾಜ್ಯದ ಗೃಹ ಸಚಿವರು ಸಣ್ಣ ವಿಚಾರ ಎಂದು ಹೇಳಿರುವುದು ದುರದೃಷ್ಟಕರ ಎಂದರು. 

ಪೆಟ್ರೋಲ್ ಬಾಂಬ್ ಎಸೆಯುವುದು, ಸ್ಕೂಟರ್‌ಗಳಿಗೆ ಬೆಂಕಿ ಹಚ್ಚುವುದು, ತಲ್ವಾರ್ ಹಿಡಿದು ಹೆದರಿಸುವುದು ಸಣ್ಣ ವಿಚಾರವೇ? ಮಂಡ್ಯದಲ್ಲಿ ನಡೆದಿರುವುದು ಅತ್ಯಂತ ಕಳವಳಕಾರಿ ಘಟನೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.
 

Latest Videos
Follow Us:
Download App:
  • android
  • ios