ಪೊಲೀಸರು ಪ್ರಕರಣದ ತನಿಖೆ ನಡೆಸಬಹುದು. ಆದರೆ, ನಡ್ಡಾರನ್ನು ತನಿಖೆ/ವಿಚಾರಣೆಗೆ ಕರೆಸಬಾರದು. ಅವರ ವಿರುದ್ದ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ನಿರ್ದೇಶನ ನೀಡಿದ ನ್ಯಾಯಪೀಠ, ಪ್ರಕರಣದ ಮೂಲ ದೂರುದಾರರಾದ ಕಲಬುರಗಿಯ ಪ್ರವೀಣ್ ಕುಮಾರ್ ಪಾಟೀಲ್‌ಗೆ ನೋಟಿಸ್ ಜಾರಿಗೊಳಿಸಿದೆ. 

ಬೆಂಗಳೂರು(ಜೂ.22):  'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮೇತರ ಸಮುದಾಯದವರ ಸಂಪತ್ತು ದೋಚಿ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ' ಎಂದು 29020 ಸುವ ಅನಿಮೇಟೆಡ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧದ ತನಿಖೆ ಮುಂದುವರಿಸಲು ಅನುಮತಿ ನೀಡಿರುವ ಹೈಕೋರ್ಟ್, ವಿಚಾರಣೆಗೆ ಹಾಜರಾಗುವುದರಿಂದ ಕೇಂದ್ರ ಸಚಿವ ಜೆ.ಪಿ. ನಡ್ಡಾರಿಗೆ ವಿನಾಯ್ತಿ ನೀಡಿದೆ.

ಕರಣ ಕುರಿತಂತೆ ತಮ್ಮ ವಿರುದ್ಧ ಕಲಬುರಗಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಪಡಿಸುವಂತೆ ಕೋರಿ ನಡ್ಡಾ ಮತ್ತು ಮಾಳವೀಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ಈ ಆದೇಶ ಮಾಡಿತು. 

News Hour: ಜೆ. ಪಿ ನಡ್ಡಾ ರಾಜೀನಾಮೆ, ಯಾರಾಗ್ತಾರೆ ಬಿಜೆಪಿ ರಾಷ್ಟ್ರಾಧ್ಯಕ್ಷ..?